POP Ganesh: An artist family in making an eco-friendly Ganesha idol

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

Ad
Ad

ಲೇಖನ: ಹರೀಶ
ಪರಿಸರ ರಕ್ಷಣೆಗಾಗಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಎಂದು ಸರ್ಕಾರ ಹಾಗೂ ತಜ್ಞರು ಎಷ್ಟೇ ಹೇಳಿದರೂ ಮೂರ್ತಿಕಾರು ಮಾತ್ರ ಪರಿಸರಕ್ಕೆ ಹಾನಿಕಾರಕವಾಗಿರುವ ಪಿಒಪಿ ಗಣೇಶ (POP Ganesh) ಮೂರ್ತಿಗಳನ್ನ ತಯಾರು ಮಾಡುತ್ತಿದ್ದಾರೆ.

Ad
Ad

ಆದರೆ, ಇಲ್ಲೊಂದು ಕುಟುಂಬ ಮಾತ್ರ ಶತಮಾತ ಮಾನಗಳಿಂದಲೂ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಮಾಡಿಕೊಂಡು ಬಂದಿದೆ.

Join Our Telegram: https://t.me/dcgkannada

ಹೌದು, ಗಣೇಶಪುರದ ಭಾರತ ನಗರದ ಸಂತೋಷ ಚಿತ್ರಗಾರ ಕುಟುಂಬ ಶತಮಾನಗಳಿಂದಲೂ ಮಣ್ಣಿನ ಗಣೇಶ ಮೂರ್ತಿ ನಿರ್ಮಾಣ ಮಾಡಿಕೊಂಡು ಬಂದಿದೆ. ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌(POP), ವಿವಿಧ ಬಗೆಯ ಗಣೇಶನ ಮೂರ್ತಿಗಳಿಗೆ ರಾಸಾಯನಿಕ ಬಣ್ಣಗಳನ್ನು ಲೇಪಿಸುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ಈ ಕಾರಣ ಇತ್ತೀಚಿನ ವರ್ಷಗಳಲ್ಲಿ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳತ್ತ ಒಲವು ಹೆಚ್ಚಿದೆ.

ಸಂಸ್ಥೆಗಳು, ಯುವಕರ ಸಂಘಗಳು ಸೇರಿ ಹಲವರು ಪರಿಸರ ಸ್ನೇಹಿ ಗಣೇಶ ತಯಾರಿಕರ ಬಳಿ ಬಂದು ಮಣ್ಣಿನ ಮೂರ್ತಿಗಳಿಗೆ ಬೇಡಿಕೆ ಇಡುತ್ತಿದ್ದಾರೆ ಎನ್ನುತ್ತಾರೆ ಗಣೇಶ ಮೂರ್ತಿ ತಯಾರಕ ಸಂತೋಷ ಚಿತ್ರಗಾರ.

ಪೂರ್ವಿಕರಿಂದ ಬಂದ ಕಲೆ:

ಇವರ ಪೂರ್ವಿಕರು ಮಣ್ಣಿನ ಗಣಪತಿ ಮೂರ್ತಿಯನ್ನೇ ಪೂಜಿಸುತ್ತಿದ್ದರು. ತಯಾರಿಸುತ್ತಿದ್ದರು. ಹೀಗಾಗಿ, ಸಂತೋಷ ಚಿತ್ರಗಾರ ಹಾಗೂ ಅವರ ಕುಟುಂಬದವರು ಸೇರಿ ಇದೀಗ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆ ಮಾಡುತ್ತಿದ್ದಾರೆ.

ಒಂದು ತಿಂಗಳ ಮುಂಚಿತವಾಗಿ ನಿಮಗೆ ಬೇಕಾದ ರೀತಿಯ ಗಣೇಶ ಮೂರ್ತಿ ಮಾಡಲು ಹೇಳಿದ್ರೆ ಅದೇ ತರಹದ ಗಣೇಶ ಮೂರ್ತಿ ಮಾಡಿಕೊಡುತ್ತಾರೆ.

ನಿವೃತ್ತ ಸೈನಿಕ:

ಸಂತೋಷ ಚಿತ್ರಗಾರ ಅವರು ದೇಶ ಸೇವೆ ಮಾಡಿ,ಇದೀಗ ನಿವೃತ್ತಿ ಹೊಂದಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ನಿರತರಾಗಿದ್ದಾರೆ. ಸೈನ್ಯದಲ್ಲಿ ಇದ್ದಾಗಲೂ ಗಣೇಶ ಮೂರ್ತಿ ಮಾಡಲು ರಜೆ ಹಾಕಿ ಬಂದು ಪರಿಸರ ಸ್ನೇಹಿ ಗಣೇಶ ನಿರ್ಮಾಣ ಮಾಡುತ್ತಿದ್ದರು. ಇವರು ಡ್ರಾಯಿಂಗ್ ಕೋರ್ಸ್ ಹಾಗೂ ಮೂರ್ತಿ ತಯಾರಿಕೆ ಕೋರ್ಸ್ ಮುಗಿಸಿದ್ದಾರೆ. ಹೀಗಾಗಿ ಇವರಿಂದ ಸುಂದರ ಮೂರ್ತಿ ನಿರ್ಮಾಣವಾಗುತ್ತಿವೆ.

ಪಿಒಪಿಯಿಂದ ಜಲಚಲರಕ್ಕೆ ಕಂಟಕ:

ಪಿಒಪಿ ಬಣ್ಣದ ಗಣಪತಿ ಮೂರ್ತಿಗಳನ್ನು ಕೆರೆ, ಬಾವಿಗಳಿಗೆ ಬಿಡುವುದರಿಂದ ಅಲ್ಲಿನ ನೀರು ಕಲುಷಿತಗೊಳ್ಳುತ್ತದೆ. ಜಲಚರಗಳು ರಾಸಾಯನಿಕ ಬಣ್ಣದ ನೀರನ್ನು ಕುಡಿಯುವುದರಿಂದ ಪ್ರಾಣ ಕಳೆದುಕೊಳ್ಳುತ್ತವೆ. ಇದಷ್ಟೇ ಅಲ್ಲದೇ ಪಿಒಪಿ ಗಣೇಶ ಮೂರ್ತಿಗಳು ಕರಗದೇ ಹಾಗೇ ಉಳಿದು ನೀರಿ ಸೆಲೆ ನಾಶವಾಗಿತ್ತದೆ. ಹೀಗಾಗಿ ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ.

ನಾನು ಹಾಗೂ ನನ್ನ ಕುಟುಂಬ ಅನೇಕ ವರ್ಷಗಳಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ನಿರ್ಮಾಣ ಮಾಡುತ್ತಿದ್ದೇವೆ. ನಮ್ಮ ಪೂರ್ವಜರು ಮಣ್ಣಿನ ಗಣೇಶ ತಯಾರಿ ಮಾಡುತ್ತಿದ್ದರು. ಇತ್ತೀಚಿಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ. ಪರಿಸರ ಸ್ನೇಹಿ ಗಣೇಶ ತಯಾರಿ ತೃಪ್ತಿ ನೀಡಿದೆ ಎನ್ನುತ್ತಾರೆ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಕರ ಚಿತ್ರಕಾರ ಸಂತೋಷ.

ಇದನ್ನೂ ಓದಿ: ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500