Rescue and Rehabilitation Campaing

ಹಠಾತ್ ದಾಳಿ.. 12 ಮಕ್ಕಳ ರಕ್ಷಣೆ..

ಹಠಾತ್ ದಾಳಿ.. 12 ಮಕ್ಕಳ ರಕ್ಷಣೆ..

ಶಹಾಪುರ : Rescue and Rehabilitation Campaing (PAN-INDIA ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ) ಅಂಗವಾಗಿ ಪೂರ್ವಭಾವಿ ಸಭೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆ ಸಮಿತಿ ಸಭೆಯನ್ನು ಉಪ ತಹಶೀಲ್ದಾರ್ ಶಹಾಪುರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ನಂತರ ಮಾತನಾಡಿದ ಶಹಾಪುರ ಉಪ- ತಹಶೀಲ್ದಾರ್ ಸೇತುಮಾಧವ ರವರು ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ/ತಪಾಸಣೆ ಆಯೋಜಿಸಿವುದು. ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ-ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು ಎಂದು ಸಭೆಯಲ್ಲಿ ತಿಳಿಸಿದರು.

Join Our Telegram: https://t.me/dcgkannada

ಸಭೆಯ ನಂತರ ನಗರದ ಬಸವೇಶ್ವರ ವೃತ್ತ, ಮಾರುಕಟ್ಟೆ ಹಾಗೂ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ/ತಪಾಸಣೆ ನಡೆಸಿ, 12 ಮಕ್ಕಳನ್ನು ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಯಿತು.

ಸಹಾಯಕ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ದಿವ್ಯರಾಣಿ ರವರು ಮಾತನಾಡಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಮತ್ತು ಕಾರ್ಮಿಕ ಆಯುಕ್ತರು ಬೆಂಗಳೂರು ರವರ ಸೂಚನೆಯಂತೆ, ಸ್ವತಂತ್ರ ದಿನಾಚರಣೆ 2024ರ ಅಂಗವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ದಿನಾಂಕ: 01.08.2024 ರಿಂದ 31.08.2024ರ ರವರೆಗೆ ರಕ್ಷಣಾ ಕಾರ್ಯಚರಣೆಗೆ ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಶ್ರೀ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿರಂತರವಾಗಿ ಜನ-ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮ, ಬೀದಿನಾಟಕಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ಕಾನೂನು ರೀತಿ ಕ್ರಮ‌ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು.

ಶಹಾಪುರ ಕಾರ್ಮಿಕ ನಿರೀಕ್ಷಕರಾದ ಸಾಬೇರಾ ಬೇಗಂ ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ರೂ. 20,000 ರೂಗಳಿಂದ 50,000 ರೂ. ಗಳವರೆಗೆ ದಂಡ ಮತ್ತು 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.

ಹಠಾತ್ ದಾಳಿ ಸಂಧರ್ಭದಲ್ಲಿ ಶ್ರೀಮತಿ ದಿವ್ಯರಾಣಿ ಎಸ್ ನಾಯಕ ಸಹಾಯಕ ಸರ್ಕಾರಿ ಅಭಿಯೋಜಕರು ಶಹಾಪುರ, ಶ್ರೀಮತಿ ಸತ್ಯಮ್ಮ ಹೊಸಮನಿ ಪ್ಯಾನಲ್ ವಕೀಲರು ಶಹಾಪುರ, ಸಿದ್ದು ಪಸ್ಪುಲ್ ಪ್ಯಾನಲ್ ವಕೀಲರು ಶಹಾಪುರ, ಲಕ್ಷ್ಮೀಕಾಂತ ಶಿಬರಬಂಡಿ ಪ್ಯಾನಲ್ ವಕೀಲರು ಶಹಾಪುರ, ಶೀರಸ್ತೇದಾರರಾದ ಸೋಮನಾಥ ಅಂಗಡಿ, ಶ್ರೀ ಸಂಗಣ್ಣ ನುಚ್ಚಿನ್ ಹಿರಿಯ ಆರೋಗ್ಯ ನಿರೀಕ್ಷಣ ಅಧಿಕಾರಿಗಳು ಶಹಾಪುರ, ಬಾಲರಾಜ್ ಕೋರಬಾರ ಮ್ಯಾನೆಜರ್ ಸಮಾಜ ಕಲ್ಯಾಣ ಇಲಾಖೆ ಶಹಾಪುರ, ಕಾರ್ಮಿಕ ಇಲಾಖೆಯ ಮೊಹಮ್ಮದ್ ಏಥೇಶ್ಯಾಮ್, ಬಾಲು ನಾಯಕ, ಮಾರ್ಗದರ್ಶಿ ಸಂಸ್ಥೆಯ ಸಿಬ್ಬಂದಿಗಳು, ಮಕ್ಕಳ ರಕ್ಷಣಾ ಘಟಕದ ಶ್ರೀ ಪರ್ವತರೆಡ್ಡಿ, ಮಕ್ಕಳ ಸಹಾಯವಾಣಿ 1098ನ ಮಹೇಶ ಕುಮಾರ್, ಪೋಲಿಸ್ ಇಲಾಖೆ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ