A self-proclaimed lawyer..? HDK Tarate with record

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ‌ನವರೇ..
ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ ದಾಳಿ ನಡೆಸಿದ್ದಾರೆ.

Join Our Telegram: https://t.me/dcgkannada

ಹೌದು, ಮೂಡಾ ನಿವೇಶನದ ಹಂಚಿಯಲ್ಲಿ ತಮ್ಮ ಮತ್ತು ಕುಟುಂಬದ ಪಾತ್ರವೇ ಇಲ್ಲ ಎಂದ ಸಿದ್ದರಾಮಯ್ಯ‌ ಅವರಿಗೆ ಕುಮಾರಸ್ವಾಮಿ ದಾಖಲೆ ಸಮೇತ ತರಾಟೆಗೆ ತೆಗೆದುಕೊಂಡಿದ್ದಾರೆ

50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ. ಸ್ವಯಂಘೋಷಿತ ವಕೀಲರಲ್ಲವೇ ನೀವು. ಇದು ನಿಮಗೆ ಗೊತ್ತಿಲ್ವಾ ಎಂದು ಕಾಲೆಳೆದಿದ್ದಾರೆ.

ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಎಂದು ಕಿವಿ ಹಿಂಡಿದ್ದಾರೆ.

ಸೂಪರ್ ಸಿಎಂ ಅವರೇ ಒತ್ತಾಯಿಸಿರುತ್ತಾರೆ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ ಎಂದು ತಿಳಿದಿದ್ದಾರೆ.

ಇದನ್ನೂ ಓದಿ: Good news: ರೈತರಿಗೆ ಇದು ಸುವರ್ಣ ಅವಕಾಶ

ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Latest News

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ. ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ,ಜು.31 ರಂದು ನಾಮಪತ್ರಗಳ ಪರಿಶೀಲನೆ,ಆ.1 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 3ರವರೆಗೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ