More than 100 students are sick after consuming hot food

ಬಿಸಿಯೂಟ ಸೇವಿಸಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ..!

ಬಿಸಿಯೂಟ ಸೇವಿಸಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ..!

ಕುಷ್ಟಗಿ: ಅಕ್ಷರದಾಸೋಹ ಯೋಜನೆಯ ಮಧ್ಯಾಹ್ನದ ಬಿಸಿಯೂಟ ಸೇವಿಸಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ವಾಂತಿ–ಭೇದಿಯಿಂದ ಬಳಲಿ ಸುಸ್ತಾಗಿ ಆಸ್ಪತ್ರೆಗೆ ದಾಖಲಾದ ಘಟನೆ ತಾಲ್ಲೂಕಿನ ಬಿಜಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಿದೆ.

Join Our Telegram: https://t.me/dcgkannada

ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಅಡುಗೆ ಸಿಬ್ಬಂದಿಯ ನಿರ್ಲಕ್ಷತನದಿಂದ ಈ ದುರ್ಘಟನೆಯಲ್ಲಿ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ದೋಟಿಹಾಳ ಪ್ರಾಥಮಿಕ ಆರೋಗ್ಯಕ್ಕೆ 40ಕ್ಕೂ ಅಧಿಕ ವಿದ್ಯಾರ್ಥಿಗಳ ಹಾಗೂ ಕುಷ್ಟಗಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಬಿಜಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ 500 ವಿದ್ಯಾರ್ಥಿಗಳು ಬಿಸಿಯೂಟ ಸೇವನೆ ಮಾಡಿ ತಾಸಿನ ಬಳಿಕ ಎಂದಿನಂತೆ ಶಾಲಾ ಶಾಲೆ ಮುಗಿಸಿಕೊಂಡು ಮನೆಗಳಿಗೆ ವಾಪಸ್ಸಾಗಿದ್ದಾರೆ.

ನಂತರ ವಾಂತಿ–ಭೇದಿ, ಕೈಕಾಲು ಸೆಳೆತ, ತಲೆಸುತ್ತು ಉಂಟಾಗಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ತಾಸಿನ ಬಳಿಕ ಶಾಲೆಯಲ್ಲಿಯೇ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಕೆಲವರಲ್ಲಿ ವಾಂತಿ–ಭೇದಿ, ಕೈಕಾಲು ಸೆಳೆತ, ತಲೆಸುತ್ತು ಸೇರಿದಂತೆ ಸಣ್ಣಪುಟ್ಟ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ಪಾಲಕರು ಹೆದರಿಕೊಂಡು ಗ್ರಾಮದಲ್ಲಿ ಇವರು ಟಾಟಾ ಎಸಿ, ಟಂಟಂ ಸೇರದಂತೆ ಇನ್ನಿತರ ವಾಹನಗಳಲ್ಲಿ ದೋಟಿಹಾಳ ಹಾಗೂ ಕುಷ್ಟಗಿಯ ಸಾರ್ವಜನಿಕ ಆಸ್ಪತ್ರೆಗೆ ಮಕ್ಕಳನ್ನು ಕರೆತಂದು ಚಿಕಿತ್ಸೆಗೆ ದಾಖಲಿಸಿದ್ದಾರೆ.ಕೂಡಲೇ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕೆಎಸ್ ರೆಡ್ಡಿ ಹಾಗೂ ದಂಡಿನ್ ಅವರ ನೇತೃತ್ವದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ.

ಯಾವುದೇ ವಿದ್ಯಾರ್ಥಿಗಳಿಗೆ ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ ಎಂದು ತಿಳಿದು ಬಂದಿದೆ.

ಗ್ರಾಮದಲ್ಲಿ ಬೀಡು ಬಿಟ್ಟಿರುವ ಆರೋಗ್ಯ ಅಧಿಕಾರಿ:

ಬಿಜಕಲ್ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಬಿಸಿಯೂಟ ಸೇವನೆ ಅಸ್ವಸ್ಥಗೊಂಡ ಬಗ್ಗೆ ತಾಲೂಕು ಆರೋಗ್ಯ ಅಧಿಕಾರಿ ಆನಂದ್ ಗೋಟರು ಗ್ರಾಮಕ್ಕೆ ಕುಷ್ಟಗಿಯ ಆಂಬುಲೆನ್ಸ್ ಸಮೇತ ಗ್ರಾಮಕ್ಕೆ ತೆರಳಿ ವಿದ್ಯಾರ್ಥಿಗಳನ್ನು ಚಿಕಿತ್ಸೆ ಎಂದು ಆಸ್ಪತ್ರೆಗೆ ದಾಖಲಿಸಿ ಕೊಡುವ ಮೂಲಕ ಗ್ರಾಮದಲ್ಲಿಯೇ ಬಿಡು ಬಿಟ್ಟಿದ್ದಾರೆ.ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬ್ಳೆ ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ವಿದ್ಯಾರ್ಥಿಗಳ ಆರೋಗ್ಯ ಕ್ಷೇಮ ವಿಚಾರಿಸಿ ವೈದ್ಯರ ಜೊತೆಗೆ ಸಮಾಲೋಚನೆ ನಡೆಸಿದ ಬಳಿಕ ವಿದ್ಯಾರ್ಥಿಗೆ ಯಾವುದೇ ರೀತಿ ತೊಂದರೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜಿಕಲ್ ಶಾಲೆಯಲ್ಲಿ 500 ಕ್ಕೆ ಹೆಚ್ಚು ವಿದ್ಯಾರ್ಥಿಗಳು ಬಿಸಿಯೂಟ ಸೇವನೆ ಮಾಡಿದ್ದು ಆದರೆ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಧ್ಯಾಹ್ನ 4 ಗಂಟೆಯ ನಂತರ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು ಕೂಡಲೇ ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ. ಬಿಸಿಯೂಟ ಸಾಂಬಾರಿಗೆ ಬಳಸಲಾದ ಕಾರು ಪುಡಿಯಲ್ಲಿ ವ್ಯತ್ಯಾಸವಾಗಿದ್ದು ಈ ಬಗ್ಗೆ ಕಾರಣ ಕೇಳಿ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಅಡಿಗೆ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ ಎಂದು ಬಿಒಒ
ಸುರೇಂದ್ರ ‌ಕಾಂಬ್ಳೆ ತಿಳಿಸಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳಿಗೆ ವಾಂತಿಭೇದಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ಗೆಂದು ಕುಷ್ಟಗಿ ಹಾಗೂ ದೋಟಿಹಾಳ ಆಸ್ಪತ್ರೆಗೆ ದಾಖಲಸಿ ಚಿಕಿತ್ಸೆ ನೀಡಲಾಗಿದೆ ಯಾವುದೇ ರೀತಿ ವಿದ್ಯಾರ್ಥಿಗಳಿಗೆ ತೊಂದರೆ ಆಗಿರುವುದಿಲ್ಲ ಎಂದು ತಾಲೂಕು ಆರೋಗ್ಯ ಅಧಿಕಾರಿ ಆನಂದ ಗೋಟರು ಹೇಳಿದ್ದಾರೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ