High Court judges meet.. Social coexistence is possible through law: Justice M.Y. Arun

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ.. ಕಾನೂನಿಂದ ಸಾಮಾಜಿಕ ಸಹಬಾಳ್ವೆ ಸಾಧ್ಯ: ನ್ಯಾಯಮೂರ್ತಿ ಎಂ.ಆಯ್.ಅರುಣ

ಮುದ್ದೇಬಿಹಾಳ : ಸಾಮಾಜಿಕ ಸಹಬಾಳ್ವೆ ಸಾಧ್ಯವಾಗಬೇಕಾದರೆ ಅದು ಕಾನೂನಿಂದ ಮಾತ್ರ ಸಾಧ್ಯವಾಗುತ್ತದೆ. ವಕೀಲರು ಸಮಾಜವನ್ನು ಸರಿದಾರಿಯಲ್ಲಿ ಕರೆದೊಯ್ಯುವ ಮಹತ್ವದ ಪಾತ್ರ ನಿಭಾಯಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ವಿಜಯಪುರ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಆಯ್.ಅರುಣ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ನ್ಯಾಯಾಲಯಕ್ಕೆ ಭಾನುವಾರ ಔಪಚಾರಿಕವಾಗಿ ಭೇಟಿ ನೀಡಿ ಅವರು ಇಲ್ಲಿನ ವಕೀಲರ ಸಂಘದಿಂದ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ವಕೀಲರು ನ್ಯಾಯಾಲಯದಲ್ಲಿ ಕೇಸ್ ಒಂದನ್ನು ನಡೆಸುತ್ತಿರುವಾಗ ಆ ಕಕ್ಷಿದಾರರು ತಮ್ಮ ಕುಟುಂಬದ ಸದಸ್ಯರಂತೆ ವಕೀಲರನ್ನು ಕಾಣುತ್ತಾರೆ. ಅವರಿಗೆ ಸರಿಯಾದ ದಾರಿ ತೋರುವುದು ವಕೀಲರ ಕರ್ತವ್ಯವಾಗಿದೆ ಎಂದರು.

ಕೇವಲ ವಕೀಲ ವೃತ್ತಿಯ ಜೊತೆಗೆ ಬೇರೆ ಬೇರೆ ವೃತ್ತಿಯನ್ನು ಕೈಗೊಳ್ಳುವ ಅವಶ್ಯಕತೆ ಗ್ರಾಮೀಣ ಭಾಗದಲ್ಲಿರುವ ಕೋರ್ಟ್ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಇದೆ. ತಂತ್ರಜ್ಞಾನ ಸಾಕಷ್ಟು ಮುಂದುವರೆದಿದ್ದು ಮುದ್ದೇಬಿಹಾಳದಲ್ಲಿಯೇ ಕೂತು ಕಲಬುರಗಿ, ಬೆಂಗಳೂರು ಕೋರ್ಟ್ನಲ್ಲಿ ಕೇಸ್ ನಡೆಸಬಹುದಾಗಿದೆ. ಅಂತಹ ತಂತ್ರಜ್ಞಾನದ ಬಳಕೆಯನ್ನು ನುರಿತ ತಜ್ಞರಿಂದ ತಿಳಿದು ಅದನ್ನು ಅನುಷ್ಠಾನಕ್ಕೆ ತಂದರೆ ವಕೀಲರ ವೃತ್ತಿಪರತೆಯಲ್ಲಿ ಸುಧಾರಣೆ ಕಾಣಲು ಸಾಧ್ಯವಿದೆ. ಪೇಪರ್‌ಲೆಸ್ ಕೋರ್ಟ್ ನಡೆಸುವ ಕಾರ್ಯಕ್ಕೆ ವಕೀಲರು ಒತ್ತು ನೀಡಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮಾತನಾಡಿ, ನಮ್ಮ ಭಾಗದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಈ ಕಟ್ಟಡ ಈಗಿನ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಸದ್ಯದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರ ಶ್ರಮದಿಂದ ನಿರ್ಮಾಣವಾಗಿದೆ.ಲಾಯರ್ ಚೇಂರ‍್ಸ್ ಹಾಗೂ ಎಪಿಪಿ ಕಚೇರಿ ಕಟ್ಟಡ ನಿರ್ಮಾಣವಾಗಿದ್ದು ಅದರ ಲೋಕಾರ್ಪಣೆಗೆ ಶೀಘ್ರ ಆಗಲಿದೆ.ಜಿಲ್ಲಾ ನ್ಯಾಯಾಲಯದ ಬೇಡಿಕೆ, ತಾಳಿಕೋಟಿಯಲ್ಲಿ ಕಾಯಂ ಕೋರ್ಟ್ ಸ್ಥಾಪನೆ ಬಗ್ಗೆ ಆದಷ್ಟು ಬೇಗ ಕಾರ್ಯಗತಗೊಳಿಸುವ ಕಾರ್ಯ ಆಗಬೇಕು ಎಂದರು.

ಜಿಲ್ಲಾ ನ್ಯಾಯಾಧೀಶರಾದ ಶಿವಾಜಿ ನಲವಡೆ, ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ, ಸಂಪತ್ತಕುಮಾರ ಬಳೂಲಗಿಡದ, ಮಲ್ಲಿಕಾರ್ಜುನ ಅಂಬಲಿ, ಅರವಿಂದ ಹಾಗರಗಿ ಇದ್ದರು.

ಇದನ್ನೂ ಓದಿ: ಸೆ.29 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ವಕೀಲರಾದ ಎಚ್.ಜಿ.ನಾಗೋಡ ಸ್ವಾಗತಿಸಿದರು. ಎನ್.ಆರ್.ಮೊಕಾಶಿ ನಿರೂಪಿಸಿದರು. ಎಸ್.ಜಿ.ಕುಲಕರ್ಣಿ ಪರಿಚಯಿಸಿದರು.

ಇದಕ್ಕೂ ಮುನ್ನ ಮುದ್ದೇಬಿಹಾಳದ ನ್ಯಾಯಾಲಯದ ಕಟ್ಟಡ ಹಾಗೂ ಲಾರ‍್ಸ್ ಚೇಂರ‍್ಸ್,ಎಪಿಪಿ ನೂತನ ಕಟ್ಟಡವನ್ನು ನ್ಯಾಯಮೂರ್ತಿ ಅರುಣ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮುದ್ದೇಬಿಹಾಳಕ್ಕೆ ಪ್ರಥಮ ಬಾರಿ ಭೇಟಿ ನೀಡಿದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ವಕೀಲರ ಸಂಘದವರು ಸನ್ಮಾನಿಸಿದರು.


ಕಾರ್ಯಕ್ರಮ ನಿಗದಿಯಾಗಿದ್ದು ಬೆಳಗ್ಗೆ 11 ಗಂಟೆಗೆ ಇದ್ದರೂ ಬ.ಬಾಗೇವಾಡಿ ಕಾರ್ಯಕ್ರಮ ಮುಗಿಸಿಕೊಂಡು ಬರುವಷ್ಟರಲ್ಲೇ ಮದ್ಯಾಹ್ನ 3.20ರ ಹೊತ್ತಾಗಿತ್ತು. ನ್ಯಾಯಾಲಯದ ಕಟ್ಟಡ ವೀಕ್ಷಣೆ ಬಳಿಕ ಕಾರ್ಯಕ್ರಮಕ್ಕೆ ಆಗಮಿಸಿದ ನ್ಯಾಯಮೂರ್ತಿಗಳು ತಮ್ಮ ಭಾಷಣದಲ್ಲಿ ತಡವಾಗಿ ಆಗಮಿಸಿದ್ದಕ್ಕೆ ವಕೀಲ ವೃಂದದವರಲ್ಲಿ ಕ್ಷಮೆ ಕೋರಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ