Fighting for curry: Fight for mutton curry..! 10 people injured

Fighting for curry: ಮಟನ್ ಕರಿಗಾಗಿ ಮಾರಾಮಾರಿ..! 10 ಮಂದಿಗೆ ಗಾಯ..! (ವಿಡಿಯೋ ನೋಡಿ)

Fighting for curry: ಮಟನ್ ಕರಿಗಾಗಿ ಮಾರಾಮಾರಿ..! 10 ಮಂದಿಗೆ ಗಾಯ..! (ವಿಡಿಯೋ ನೋಡಿ)

ಹೈದರಾಬಾದ್: ಮಟನ್ ಕರಿ ವಿಚಾರವಾಗಿ ಮದುವೆ ಮನೆಯಲ್ಲಿ ನಡೆದ ಗಲಾಟೆಯಲ್ಲಿ (Fighting for curry) 10 ಮಂದಿ ಗಾಯಗೊಂಡ ಘಟನೆಯೊಂದು ತೆಲಂಗಾಣದ ನಿಜಾಮಾಬಾದ್‌ನ ನವಿಪೇಟ್‌ನಲ್ಲಿ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ವಧು ನವಿಪೇಟೆಯ ವಧುವಿಗೂ ನಂದಿಪೇಟ್ ಮಂಡಲದ ಬಡಗುಣ ಗ್ರಾಮದ ವರನಿಗೂ ಮದುವೆ ನಿಶ್ಚಯ ಮಾಡಲಾಗಿತ್ತು. ಅಂತೆಯೇ ಬುಧವಾರ ನಡೆದ ಮದುವೆ ಸಮಾರಂಭದಲ್ಲಿ ಊಟದಲ್ಲಿ ಮಟನ್ ಕರಿ ವಿಚಾರವಾಗಿ ವಧು ಹಾಗೂ ವರನ ಸಂಬಂಧಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಪ್ಲೇಟ್‌ಗಳು, ಗ್ಲಾಸ್‌ಗಳು, ಕುರ್ಚಿಗಳು ಮತ್ತು ಇತರ ವಸ್ತುಗಳ ಮೂಲಕ ದೈಹಿಕ ಹಲ್ಲೆ ನಡೆದಿದೆ.

ವರನ ಕಡೆಯ ಕೆಲವು ಯುವಕರು, ಕಡಿಮೆ ಮಟನ್ ಬಡಿಸಿದ್ದಾರೆ ಎಂದು ಅತೃಪ್ತಗೊಂದು ಅಡುಗೆ ಸಿಬ್ಬಂದಿಯನ್ನು ಪ್ರಶ್ನಿಸುತ್ತಾ ಗಲಾಟೆ (Fighting for curry) ಶರು ಮಾಡಿದ್ದಾರೆ. ಈ ವೇಳೆ ಎರಡೂ ಕಡೆಯ ಸಂಬಂಧಿಕರ ನಡುವೆ ಮಾತಿಗೆ ಮಾತು ಬೆಳೆದಿದೆ. ಅಲ್ಲದೇ ಕಲ್ಲು ದೊಣ್ಣೆಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ.

ವಧು ಹಾಗೂ ವರನ ಕಡೆಯವರು ಹೊಡೆದಾಡಿಕೊಳ್ಳುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಕೆಲ ಪುರುಷರು ಮತ್ತು ಮಹಿಳೆಯರು ಗಾಯಗೊಂಡಿದ್ದು, ಇತರರು ಅವರಿಗೆ ಸಹಾಯ ಮಾಡುತ್ತಿರುವುದನ್ನು ಕಾಣಬಹುದು. ಸ್ಥಳಕ್ಕಾಗಮಿಸಿದ ಸ್ಥಳೀಯರು ಪೊಲೀಸರು ಎರಡೂ ಕಡೆಯವರನ್ನು ಕೂರಿಸಿ ಮಾತನಾಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಇದನ್ನೂ ಓದಿ: Time bomb: ಉಗ್ರನ ಮೃತದೇಹದಲ್ಲಿ ಟೈಮ್ ಬಾಂಬ್ ಇಟ್ಟು ಪಾರ್ಸೆಲ್..! ಮುಂದೇನಾಯ್ತು..? (ವಿಡಿಯೋ ನೋಡಿ)

ಗಲಾಟೆಯಲ್ಲಿ ಗಾಯಗೊಂಡ 10 ಮಂದಿಯನ್ನು ನಿಜಾಮಾಬಾದ್‌ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಸಂಬಂಧ ಒಂದು ಗುಂಪಿನ 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ