Muda site: Congress to Raj Bhavan Chalo

Muda site: ಕಾಂಗ್ರೆಸ್ ನಿಂದ ರಾಜಭವನ ಚಲೋ.. ಮೋದಿ ಕಾ ಕೈಗೊಂಬೆ ಎಂದು ರಾಜ್ಯಪಾಲರಿಗೆ ವ್ಯಂಗ್ಯ..

Muda site: ಕಾಂಗ್ರೆಸ್ ನಿಂದ ರಾಜಭವನ ಚಲೋ.. ಮೋದಿ ಕಾ ಕೈಗೊಂಬೆ ಎಂದು ರಾಜ್ಯಪಾಲರಿಗೆ ವ್ಯಂಗ್ಯ..

Ad
Ad

ಬೆಂಗಳೂರು : ಮೂಡಾ ಸೈಟು (Muda site) ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ‌ ಅವರ ಪಾತ್ರ ಇರುವ ಕುರಿತು ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಿರ್ಣಯ ಖಂಡಿಸಿ ಕಾಂಗ್ರೆಸ್ ರಾಜ್ ಭವನ್ ಚಲೋ ನಡೆಸಿತು.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗುತ್ತಾ ಸಾಗಿತು.

ಗೆಹಲೋಟ್ ಹಠಾವೋ ಪ್ರಜಾಪ್ರಭುತ್ವ ಬಚಾವೋ, ಇದು ರಾಜಭವನ ಅಲ್ಲ ರಾಜಕೀಯ ಭವನ, ಮೋದಿ ಕಾ ಕೈಗೊಂಬೆ, ಕಣ್ಮುಚ್ಚಿದ ಪಕ್ಷಪಾತಿ ರಾಜ್ಯಪಾಲ… ಹೀಗೆ ಮುಂತಾದ ಬರಹಗಳುಳ್ಳ ಫಲಕಗಳನ್ನು ಪ್ರದರ್ಶಿಸುತ್ತಾ ಸಿಎಂ ನೇತೃತ್ವದ ಕಾಂಗ್ರೆಸ್ ಬಳಗವು ಗೆಹಲೋಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.

ಗಾಂಧಿ ಪ್ರತಿಮೆಯ ಬಳಿಯೇ ತುಸು ಹೊತ್ತು ಕುಳಿತು ಧರಣಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಬಿಜೆಪಿ ಮತ್ತು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಪ್ರತಿಭಟನೆಯಲ್ಲಿ ಸಚಿವ ಈಶ್ವರ ಖಂಡ್ರೆ, ಸಚಿಮ ಜಮೀರ್ ಅಹ್ಮದ್, ಎಚ್.ಕೆ. ಪಾಟೀಲ್, ವೀರಪ್ಪ ಮೊಯಿಲಿ, ದಿನೇಶ್ ಗುಂಡೂರಾವ್, ವಿ.ಎಸ್. ಉಗ್ರಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Latest News

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಬೀಳಗಿ: ಗ್ರಾಮ ಆಡಳಿತಾಧಿಕಾರಿಗಳು ಮೂರು ದಿನಗಳಿಂದ ರಾಜ್ಯಾದಂತ ತಮ್ಮ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಮುಷ್ಕರ ನಡೆಸಿರುವುದರಿಂದ ಸಾರ್ವಜನಿಕರಿಗೆ ಹಾಗೂ ರೈತರಿಗೆ ತೀವ್ರ ತೊಂದರೆಯಾಗಿದ್ದು, ಅವರ ಬೇಡಿಕೆಗಳು ನ್ಯಾಯೋಚಿತವಾಗಿದ್ದು ತಕ್ಷಣ ಸರಕಾರ ಸ್ಪಂದಿಸಬೇಕೆಂದು ಅವರ ಹೋರಾಟ ಬೆಂಬಲಿಸಿ ಆಗ್ರಹಿಸಿ ಭಾರತೀಯ ಕಿಸಾನ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ತಹಶೀಲ್ದಾರ ಕಚೇರಿ ಮುಂದೆ ಬೆಂಬಲಿಸಿ ಪ್ರತಿಭಟನೆ ನಡೆಸಿದರು. ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಮಾತನಾಡಿ,

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಶರಣಮ್ಮ ಬಸನಗೌಡ ಪಾಟೀಲ (72) ಅವರು ಬುಧವಾರ ಫೆ.12ರ ಬೆಳಗಿನ ಜಾವ ಸುಮಾರು 12:30ಕ್ಕೆ ನಿಧನರಾದರು. ಮೃತರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಫೆ.12ರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಇಟಗಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.