Cylinder price: Again cylinder price increase

Cylinder price: ಮತ್ತೆ ಸಿಲಿಂಡ‌ರ್ ಬೆಲೆ ಏರಿಕೆ

Cylinder price: ಮತ್ತೆ ಸಿಲಿಂಡ‌ರ್ ಬೆಲೆ ಏರಿಕೆ

Ad
Ad

ನವದೆಹಲಿ : ವಾಣಿಜ್ಯ ಬಳಕೆ ಅಡುಗೆ ಅನಿಲ ದರ ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಧಿಡೀರ್ ಏರಿಕೆಯಾಗಿದೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ತೈಲ ಮಾರುಕಟ್ಟೆ ಕಂಪನಿಗಳು ಹೋಟೆಲ್, ರೆಸ್ಟೋರೆಂಟ್ ಮೊದಲಾದ ಕಡೆ ಹೆಚ್ಚಾಗಿ ಬಳಸುವ ಕಮರ್ಷಿಯಲ್‌ ಗ್ಯಾಸ್ ಸಿಲಿಂಡರ್‌ ದರವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ.

ಈ ಮೂಲಕ ತೈಲ ಮಾರುಕಟ್ಟೆ ಕಂಪನಿಗಳು ಸತತ ನಾಲ್ಕನೇ ತಿಂಗಳೂ 19 ಕೆಜಿ ತೂಕದ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡ‌ರ್ ದರವನ್ನು ಏರಿಕೆ ಮಾಡಿದಂತಾಗಿದೆ. ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡ‌ರ್ ಬೆಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 39 ರೂಪಾಯಿ ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡ‌ರ್ ದರವನ್ನು 39 ರೂ.ನಷ್ಟು ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಸಿಲಿಂಡರ್‌ನ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ.

ಈ ಹಿಂದೆ ವಾಣಿಜ್ಯ ಬಳಕೆಯ ಸಿಲಿಂಡ‌ರ್ ಬೇಳೆಯನ್ನು ಜುಲೈನಲ್ಲಿ ಪ್ರತಿ ಸಿಲಿಂಡರ್‌ಗೆ 30 ರೂಪಾಯಿ ಜೂನ್‌ನಲ್ಲಿ 69.50 ಮತ್ತು ಮೇನಲ್ಲಿ 19 ರೂಪಾಯಿ ಹೆಚ್ಚಳ ಮಾಡಲಾಗಿತ್ತು.

ಇದನ್ನೂ ಓದಿ: Actor Darshan: ಗಳಗಳನೆ ಕಣ್ಣೀರಿಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಇದೀಗ ಸತತ ನಾಲ್ಕನೇ ತಿಂಗಳು ಕೂಡ ಸಿಲಿಂಡ‌ರ್ ಬೆಲೆ ಏರಿಕೆಯಿಂದಾಗಿ ರೆಸ್ಟೋರೆಂಟ್, ಹೋಟೆಲ್, ಸಣ್ಣ ಕೈಗಾರಿಕೆ, ವಿವಿಧ ವಲಯಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500