21 couples who entered a new life in a mass wedding celebration

ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ಜೀವನಕ್ಕೆ ಕಾಲಿಟ್ಟ 21 ಜೋಡಿಗಳು

ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ಜೀವನಕ್ಕೆ ಕಾಲಿಟ್ಟ 21 ಜೋಡಿಗಳು

ಇಳಕಲ್: ನಗರದ ಆರಾಧ್ಯ ದೈವ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಶರಣ ಸಂಸ್ಕೃತಿ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 21 ನವ ವಧುವರರು ಹೊಸ ಜೀವನಕ್ಕೆ ಕಾಲಿಟ್ಟರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಬಸವ ತತ್ವದ ಅನುಸಾರವಾಗಿ ಪೂಜ್ಯ ಗುರುಮಂತ ಶ್ರೀಗಳ ಹಾಗೂ ರಾಜ್ಯದ ವಿವಿಧ ಮಠಗಳ ಮಠಾಧೀಶರ ಸಾನಿಧ್ಯದಲ್ಲಿ ಇಳಕಲ್ ನಗರದ ಎಪಿಎಂಸಿ ವರ್ತಕರ ಸಂಘ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭ ಅದ್ದೂರಿಯಾಗಿ ನೆರವೇರಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ವೇದಿಕೆ ಮೇಲಿದ್ದ ಪೂಜ್ಯರು ಹಾಗೂ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್, ಬಡವರಿಗೆ ಅನುಕೂಲವಾಗಲೆಂದು ಸಾಮೂಹಿಕ ವಿವಾಹ ಮಹೋತ್ಸವ ಕಳೆದ 40 ವರ್ಷಗಳಿಂದ ಆಯೋಜಿಸಿತ ಬಂದಿರುವ ಎಪಿಎಂಸಿ ವರ್ತಕರಿಗೆ ಹಾಗೂ ಸಂಘದವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಹತ್ತಾರು ಜನ ಪೂಜ್ಯರು ಹಾಗೂ ಗಣ್ಯರ, ಸಾವಿರಾರು ಭಕ್ತರ ಸಮ್ಮುಖದಲ್ಲಿ ನವ ಜೀವನಕ್ಕೆ ಕಾಲಿಡುತ್ತಿರುವ ಎಂದು ನವ ಜೋಡಿಗಳಿಗೆ ಶುಭ ಹಾರೈಸಿದರು.

ಅಲ್ಲದೆ, ಶರಣ ಸಂಸ್ಕೃತಿ ಮಹೋತ್ಸವದ ಈ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನವ ಜೀವನಕ್ಕೆ ಕಾಲಿಡುತ್ತಿರುವ ನೀವುಗಳು ಸುಖ ಸಂಸಾರ ಸಾಗಿಸಿದರೆ ವಿವಾಹ ಮಹೋತ್ಸವ ಆಯೋಜಿಸಿದವರಿಗೂ ಹಾಗೂ ಪೂಜ್ಯ ವಿಜಯ ಮಹಾಂತ ಅಪ್ಪಗಳವರಿಗೂ ಕೃತಜ್ಞತೆ ಸಲ್ಲಿಸಿದಂತಾಗುತ್ತದೆ. ಸದ್ಯ ನಮ್ಮ ದೇಶದ ಜನಸಂಖ್ಯೆ 139 ಕೋಟಿ ದಾಟಿದೆ ಅದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ನಿಯಮದಂತೆ ಆರತಿಗೆ ಒಬ್ಬಳು ಕೀರ್ತಿಗೆ ಒಬ್ಬ ಎಂಬಂತೆ ಎರಡು ಮಕ್ಕಳನ್ನು ಹಂದಿ ಸುಖ ಜೀವನ ಸಾಗಿಸಿ ಎಂದು ಕಿವಿಮಾತು ಹೇಳಿದರು.

ಸಾನಿಧ್ಯ ವಹಿಸಿದ್ದ ಗುರು ಮಹಾಂತ ಶ್ರೀಗಳು ಮಾತನಾಡಿ, ನವ ಜೀವನಕ್ಕೆ ಕಾಲಿಡುತ್ತಿರುವ ವರರು ತಮ್ಮಲ್ಲಿರುವ ದುಶ್ಚಟಗಳನ್ನು ಇಂದಿನಿಂದಲೇ ಈ ಕ್ಷೇತ್ರದಲ್ಲಿಯೇ ತ್ಯಜಿಸಿ ಪೂಜ್ಯರ ಪಾದಕ್ಕೆ ಅರ್ಪಿಸಬೇಕು. ದುಶ್ಚಟಗಳನ್ನು ತ್ಯಜಿಸಿದಾಗ ಮಾತ್ರ ಸುಖ ಜೀವನ ಸಾಗಿಸಲು ಸಾಧ್ಯ ಎಂದು ಆಶೀರ್ವಚನ ನೀಡಿದರು.

ಇದನ್ನೂ ಓದಿ: Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಕಾರ್ಯಕ್ರಮದ ವೇದಿಕೆ ಮೇಲೆ ಎಪಿಎಂಸಿ ವರ್ತಕರಾದ ಮಹಾಂತಗೌಡ ಪಾಟೀಲ್ ತೊಂಡಿಹಾಳ, ಅಮರೇಶ್ ಗೌಡರ್, ಸಂಗಣ್ಣ ಕಂಪ್ಲಿ, ಹಿರಿಯರಾದ ಜಿಪಿ ಪಾಟೀಲ್, ಶಿವರುದ್ರಪ್ಪ ಗೊಂಗಡಶೆಟ್ಟಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News

ನಾಳೆ ಬೆಳಗಾವಿಯಲ್ಲಿ ಅಧಿಕೃತ ಘೋಷಣೆ;                         ಕಬ್ಬಿಗೆ 3500 ರೂ.ಮೇಲೆಯೇ ದರ ಫಿಕ್ಸ್..?!!

ನಾಳೆ ಬೆಳಗಾವಿಯಲ್ಲಿ ಅಧಿಕೃತ ಘೋಷಣೆ; ಕಬ್ಬಿಗೆ 3500 ರೂ.ಮೇಲೆಯೇ ದರ ಫಿಕ್ಸ್..?!!

ಮುದ್ದೇಬಿಹಾಳ : ಬರಗಾಲದ ಸಮಯದಲ್ಲಿ ರೈತರು ಬೆಳೆದಿರುವ ಕಬ್ಬು ಕಾರ್ಖಾನೆಗೆ ಸಾಗಿಸದಿದ್ದರೆ ಬಂದಷ್ಟು ಫಸಲು

ಮುಂದುವರೆದ ಕಬ್ಬು ಬೆಳೆಗಾರರ ಹೋರಾಟ:                                 ತಡ ರಾತ್ರಿಯವರೆಗೂ ನಡೆಯಲಿದೆ ಸಂಧಾನ ಸಭೆ…!?

ಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ತಡ ರಾತ್ರಿಯವರೆಗೂ ನಡೆಯಲಿದೆ ಸಂಧಾನ ಸಭೆ…!?

ಮುದ್ದೇಬಿಹಾಳ : ಕಬ್ಬು ಬೆಳೆಗಾರರಿಗೆ ಮಂಗಳವಾರ ಸಿಹಿ ಸುದ್ದಿ ಸಿಗಲಿದೆ ಎಂಬ ನಿರೀಕ್ಷೆ ಇನ್ನೂ

ಟೆನ್ನಿಸ್‌ಬಾಲ್ ಕ್ರಿಕೆಟ್ ಪ್ರಿಮಿಯರ್ ಲೀಗ್:                      ಆರ್.ಎ.ಸಿ.ಸಿ ತಂಡ ಚಾಂಪಿಯನ್-ಒಂದು ಲಕ್ಷ ರೂ.ಬಹುಮಾನ

ಟೆನ್ನಿಸ್‌ಬಾಲ್ ಕ್ರಿಕೆಟ್ ಪ್ರಿಮಿಯರ್ ಲೀಗ್: ಆರ್.ಎ.ಸಿ.ಸಿ ತಂಡ ಚಾಂಪಿಯನ್-ಒಂದು ಲಕ್ಷ ರೂ.ಬಹುಮಾನ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ನಡೆದ ಮುದ್ದೇಬಿಹಾಳ ಟೆನ್ನಿಸ್ ಕ್ರಿಕೇಟ್

ಹುಲ್ಲೂರಿನಲ್ಲಿ ಕಬ್ಬು ಬೆಳೆಗಾರರ ಧರಣಿ:                                 ನಾಳೆ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನಿರೀಕ್ಷೆ-ಶಾಂತಗೌಡ ಪಾಟೀಲ್

ಹುಲ್ಲೂರಿನಲ್ಲಿ ಕಬ್ಬು ಬೆಳೆಗಾರರ ಧರಣಿ: ನಾಳೆ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನಿರೀಕ್ಷೆ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ಒಂದು ತಿಂಗಳಿನಿoದ

ಅಸೂಯೆ,ಮತ್ಸರ ಬಿಟ್ಟು ಸಕಲರಿಗೆ ಲೇಸು ಬಯಸಿ-ಅಂಕಲಿಮಠ ಶ್ರೀ

ಅಸೂಯೆ,ಮತ್ಸರ ಬಿಟ್ಟು ಸಕಲರಿಗೆ ಲೇಸು ಬಯಸಿ-ಅಂಕಲಿಮಠ ಶ್ರೀ

ಮುದ್ದೇಬಿಹಾಳ : ಮಾನವ ಜನ್ಮದಲ್ಲಿ ಹುಟ್ಟಿ ಬಂದಿರುವ ಎಲ್ಲರೂ ಅಸೂಯೆ,ಮತ್ಸರದ ಭಾವನೆ ಬಿಟ್ಟು ಸಕಲರಿಗೆ ಲೇಸು ಬಯಸಿದಾಗ ಲೇಸು ಬಯಸಿದವರಿಗೆ ಒಳಿತಾಗುತ್ತದೆ ಎಂದು ಅಂಕಲಿಮಠ ನಿರುಪಾದೀಶ್ವರ ಮಠದ ವೀರಭದ್ರ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಗಂಗೂರ ಗ್ರಾಮದಲ್ಲಿ ಶುಕ್ರವಾರ ದಸರಾ ನವರಾತ್ರಿ ಹಬ್ಬದ ನಿಮಿತ್ತ ಸಾಮೂಹಿಕ ವಿವಾಹ ಮತ್ತು ಧರ್ಮ ಸಭೆ,ತುಲಾಭಾರ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ಕೆಟ್ಟದ್ದನ್ನು ಮಾಡಿದವರಿಗೆ ಕೆಟ್ಟದ್ದೇ ಆಗುತ್ತದೆ.ಒಳ್ಳೆಯದನ್ನು ಮಾಡಿದವರಿಗೆ ಒಳಿತಾಗುತ್ತದೆ.ಬಸವಾದಿ ಶಿವಶರಣರು ಹೇಳಿದ ಕಾಯಕತತ್ವದಂತೆ ಜೀವನ

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ನೇತೃತ್ವ:   ನಾಯನೇಗಲಿ,ಬಾಲಾಜಿ ಶುಗರ‍್ಸ್ ಸಕ್ಕರೆ ಗೋದಾಮುಗಳಿಗೆ ಬೀಗ

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ನೇತೃತ್ವ: ನಾಯನೇಗಲಿ,ಬಾಲಾಜಿ ಶುಗರ‍್ಸ್ ಸಕ್ಕರೆ ಗೋದಾಮುಗಳಿಗೆ ಬೀಗ

ಮುದ್ದೇಬಿಹಾಳ : ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯವ್ಯಾಪಿ ನಡೆಯುತ್ತಿರುವ ಹೋರಾಟದ ಮುಂದುವರೆದ ಭಾಗವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಂಘಟನೆ (ಚುನಪ್ಪ ಪೂಜೇರಿ ಬಣ) ವತಿಯಿಂದ ಮುದ್ದೇಬಿಹಾಳ ತಾಲೂಕಿನ ಬಾಲಾಜಿ ಶುಗರ‍್ಸ್ ಹಾಗೂ ನಾಯನೇಗಲಿ ಐಇಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಸಕ್ಕರೆ ಗೋದಾಮುಗಳಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಯಿತು. ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಶುರ‍್ಸ್ ಆವರಣದಲ್ಲಿ ಸಕ್ಕರೆ ಗೋದಾಮಿಗೆ ಬೀಗ