BJP MLA Arvind Bellad wrote a letter to the CM and apologized..! Appreciated by CM Siddaramaiah

ಸಿಎಂಗೆ ಪತ್ರ ಬರೆದು ಕ್ಷಮೆ ಕೋರಿದ BJP MLA..! ಮೆಚ್ಚು ವ್ಯಕ್ತಪಡಿಸಿದ CM Siddaramaiah..!

ಸಿಎಂಗೆ ಪತ್ರ ಬರೆದು ಕ್ಷಮೆ ಕೋರಿದ BJP MLA..! ಮೆಚ್ಚು ವ್ಯಕ್ತಪಡಿಸಿದ CM Siddaramaiah..!

Ad
Ad

ಬೆಂಗಳೂರು: ತಮ್ಮನ್ನು ಏಕವಚನದಲ್ಲಿ ನಿಂದಿಸಿ, ತದನಂತರ ಪತ್ರ ಬರೆದು ಸಿಎಂ ಸಿದ್ದರಾಮಯ್ಯ‌ (CM Siddaramaih) ಅವರಲ್ಲಿ ಕ್ಷಮೆಯಾಚಿಸಿದ BJP MLA ಅರವಿಂದ್ ಬೆಲ್ಲದ್ ಅವರ ನಡೆಗೆ ಸ್ವತಃ ಸಿಎಂ ಅವರೇ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ. ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು.

ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ ಎಂದು ಸಿಎಂ‌ ಸಿದ್ದರಾಮಯ್ಯ‌ (CM Siddaramaiah) ತಿಳಿಸಿದ್ದಾರೆ.

ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ. ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ ಎಂದು ಶಾಸಕ‌ ಅರವಿಂದ್ ಬೆಲ್ಲದ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ‌ ಮುಕ್ತವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ಸ್ಥಾನದ ಕುರಿತು ಸ್ಫೋಟಕ ಬಾಂಬ್ ಸಿಡಿಸಿದ DK Suresh

ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದು ಸಿಎಂ ಶ್ಲಾಘಿಸಿದ್ದಾರೆ.

Latest News

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಶರಣಮ್ಮ ಬಸನಗೌಡ ಪಾಟೀಲ (72) ಅವರು ಬುಧವಾರ ಫೆ.12ರ ಬೆಳಗಿನ ಜಾವ ಸುಮಾರು 12:30ಕ್ಕೆ ನಿಧನರಾದರು. ಮೃತರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಫೆ.12ರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಇಟಗಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್.