What Renukaswamy did was wrong: Producer Umapathy

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ಬೆಂಗಳೂರು: ಮೃತ ರೇಣುಕಾಸ್ವಾಮಿ ಅಶ್ಲೀಲವಾಗಿ ಕಾಮೆಂಟ್ ಹಾಗೂ ಮೆಸೇಜ್ ಮಾಡಿದ್ದೂ ತಪ್ಪೇ. ಆದರೆ, ಆ ತಪ್ಪಿಗೆ 2 ರೂಪಾಯಿ ಹಾಳೆ ತೆಗೆದುಕೊಂಡು ಒಂದು ಕಂಪ್ಲೇಂಟ್ ಬರೆದುಕೊಟ್ಟಿದರೆ ಬುದ್ಧಿ ಕಲಿಸೋರು ಕಲಿಸುತ್ತಿದ್ದರು. ಹಾಗೆ ಮಾಡದೆ ಎಷ್ಟು ಜೀವಗಳಿಗೆ ತೊಂದರೆ ಮಾಡಿಕೊಂಡಿದ್ದಾರೆ ನೋಡಿ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಮತ್ತು ಅವರ ತಂಡದ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್ ಬಗ್ಗೆ ಗುರುವಾರ ಮಾಧ್ಯಮಗಳಿಗೆ ಪ್ರತಿ ಕ್ರಿಯೆ ನೀಡಿದ ಉಮಾಪತಿ ಶ್ರೀನಿವಾಸ್ ಗೌಡ, ‘ಸತ್ತ ರೇಣುಕಾಸ್ವಾಮಿ, ಈ ಪ್ರಕರಣದಲ್ಲಿ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ರಾಘವೇಂದ್ರನ ತಾಯಿ ಹಾಗೂ ಅನುಕುಮಾ‌ರ್ ತಂದೆ ತೀರಿಕೊಂಡರು. ಹೋದ ಜೀವಗಳು ಏನೇ ಮಾಡಿದರೂ ವಾಪಸ್ಸು ಬರಲ್ಲ ಎಂದಿದ್ದಾರೆ.

ಆದರೆ, ರೇಣುಕಾಸ್ವಾಮಿ ಮಾಡಿದ ತಪ್ಪಿಗೆ ₹2 ಹಾಳೆ ಮೇಲೆ ಕಂಪ್ಲೇಂಟ್ ಬರೆದು ಕೊಟ್ಟಿದ್ದರೆ ಪೊಲೀಸರು ಮುಂದಿನ ಕೆಲಸ ಮಾಡುತ್ತಿದ್ದರು.

ಆದರೆ, ಈಗ ನೋಡಿ ಮೂರು ಜೀವಗಳು ಹೋಗಿವೆ. ಯಾರಿಗೆ ಅನ್ಯಾಯ ಆಗಿದೆಯೋ ಅಂಥವರನ್ನು ತಾಯಿ ಚಾಮುಂಡೇಶ್ವರಿ ಕಾಪಾಡಲಿ. ತಪ್ಪು ಮಾಡಿದವರಿಗೆ ಅದೇ ಚಾಮುಂಡೇಶ್ವರಿ ತಾಯಿ ಶಿಕ್ಷೆ ಕೊಡಲಿ’ ಎಂದರು.

‘ದರ್ಶನ್ ಅವರು ಬಂಧನಕ್ಕೊಳಗಾದ ಸಮಯದಲ್ಲಿ ನಾನು ಪ್ರಕರಣದ ಬಗ್ಗೆ ಮಾತನಾಡಿದಾಗ ನನ್ನ ಬಗ್ಗೆ ಯಾರೋ ಕಾಮೆಂಟ್ ಮಾಡಿದ್ದರು. ನಾನು ಹೋಗಿ ದೂರು ಕೊಟ್ಟೆ. ಪೊಲೀಸರು ಏನು ಮಾಡಬೇಕೋ ಅದನ್ನು ಮಾಡಿದರು.

ಒಂದು ಹಾಳೆ ಮತ್ತು ಪೆನ್‌ನಲ್ಲಿ ಆಗುವ ಕೆಲಸವಿದು. ಆದರೆ, ಕಾಮೆಂಟ್ ಮಾಡಿದ ಅನ್ನೋ ಕಾರಣಕ್ಕೆ ಹೀಗೆ ಸಾಯಿಸೋದರಿಂದ ಎಷ್ಟು ಕುಟುಂಬಗಳು ಇಂದು ಅನಾಥವಾಗಿವೆ?’ ಎಂದು ಉಮಾಪತಿ ಶ್ರೀನಿವಾಸ್ ಪ್ರಶ್ನಿಸಿದರು.

‘ದರ್ಶನ್ ಅವರು ನನಗೆ ಶತ್ರು ಅಲ್ಲ. ನನ್ನ ಬ್ಯಾನರ್‌ಗೆ ಸಿನಿಮಾ ಮಾಡಿದ್ದಾರೆ. ಹೆಸರು ತಂದು ಕೊಟ್ಟಿದ್ದಾರೆ. ಕಾರಣಾಂತರಗಳಿಂದ ನನ್ನ ಮತ್ತು ಅವರ ನಡುವೆ ಭಿನ್ನಾಭಿಪ್ರಾಯ ಬಂತು. ತಪ್ಪು ಅಂತ ಗೊತ್ತಾದಾಗ ನಾನು ಆ ಬಗ್ಗೆ ಧ್ವನಿ ಎತ್ತಿದ್ದೇನೆ. ಈಗ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ತೀರ್ಪು ಬರುವುದಕ್ಕೂ ಮುನ್ನವೇ ನಾನು ಆ ಬಗ್ಗೆ ಮಾತನಾಡಿ ಅಂದರಿಂದ ಗಳಿಸುವುದು ಏನೂ ಇಲ್ಲ. ನನಗೆ ತೊಂದರೆ ಬಂದಾಗಲೂ ಮತ್ತೊಬ್ಬರ ಹೆಗಲ ಮೇಲೆ ಗನ್ ಇಡುವ ಬದಲು ನೇರವಾಗಿ ಮಾತನಾಡಿ ಎದುರಿಸಿದ್ದೇನೆ.

ಸಮಸ್ಯೆ ಬಂದಾಗ ಎದೆ ತೋರಿಸಿ ಎದುರಿಸುತ್ತೇನೆಯೇ ಹೊರತು, ಬೆನ್ನು ತೋರಿಸಿ ಹೆದರಿಸಲ್ಲ. ಈಗ ದರ್ಶನ್ ಅವರ ಪ್ರಕರಣದ ಕುರಿತು ಚಾರ್ಜ್‌ ಶೀಟ್ ಸಲ್ಲಿಕೆ ಆಗಿದೆ. ಸತ್ಯಾಸತ್ಯತೆ ಆಚೆ ಬರುತ್ತದೆ.

ಇದನ್ನೂ ಓದಿ: ಯೋಗರಾಜ ಭಟ್ ವಿರುದ್ಧ FIR ದಾಖಲು

ಕಾನೂನು, ನ್ಯಾಯಾಲಯದಲ್ಲಿ ಅದು ತೀರ್ಮಾನ ಆಗಲಿ’ ಎಂದು ಹೇಳಿದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ