Accident news Accident board on road

Road Accident: ಭೀಕರ ಅಪಘಾತದಲ್ಲಿ ಎರಡು ದಿನದ ಹಿಂದೆ ಮದುವೆಯಾಗಿದ್ದ ಮಾನಸ ದುರ್ಮರಣ..! ಪತಿ ಸ್ಥಿತಿ ಗಂಭೀರ

Road Accident: ಭೀಕರ ಅಪಘಾತದಲ್ಲಿ ಎರಡು ದಿನದ ಹಿಂದೆ ಮದುವೆಯಾಗಿದ್ದ ಮಾನಸ ದುರ್ಮರಣ..! ಪತಿ ಸ್ಥಿತಿ ಗಂಭೀರ

ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ (Road Accident) ಎರೆಡು ದಿನ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಮೃತಪಟ್ಟಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ಘಟನೆ ಸಂಭವಿಸಿದೆ.

ಕಾರು ಅಪಘಾತದಲ್ಲಿ ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬುವವರ ಪತ್ನಿ ಮಾನಸ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನವ ದಂಪತಿ ಬಿ.ಸಿ.ರೋಡ್ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್‌ ಹಾರಿ ಕೆ.ಎಸ್.ಆರ್‌ಟಿ.ಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಮಾನಸ ತೀವ್ರ ರಕ್ತಸ್ರಾವವಾಗಿ ಮೃತಪಟ್ಟರೆ, ಅನಿಶ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ.

ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಇವರಿಬ್ಬರ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು. ವಾಪಸು ಮನೆಗೆ ಹೋಗುವ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ BIG SHOCK!

ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Latest News

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ ಟಿಸಿ ಒದಗಿಸುವಲ್ಲಿ ವಿಳಂಬ ಧೋರಣೆ ಖಂಡಿಸಿದ ರೈತರು ಸೋಮವಾರ ಇಲ್ಲಿನ ಹೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಅನೇಕ ಗ್ರಾಮಗಳಿಂದ ಬಂದಿದ್ದ ರೈತರು ತಮ್ಮೂರುಗಳಲ್ಲಿ ಎದುರಿಸುತ್ತಿರುವ ವಿದ್ಯುತ್ ಸಂಬoಧಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜೂ.8 ರಿಂದ ಆಲಮಟ್ಟಿ ಕೆಬಿಜೆಎನ್‌ಎಲ್ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ತಿಳಿಸಿದರು. ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರೈತ