MB Patil with CM Siddaramaiah in muda case

ನಾನೂ ಸಿಎಂ‌ ಆಗ್ತಿನಿ ಎಂದು ಸ್ಫೋಟಕ ಬಾಂಬ್ ಸಿಡಿಸಿದ‌ ಹಿರಿಯ ಸಚಿವ!

ನಾನೂ ಸಿಎಂ‌ ಆಗ್ತಿನಿ ಎಂದು ಸ್ಫೋಟಕ ಬಾಂಬ್ ಸಿಡಿಸಿದ‌ ಹಿರಿಯ ಸಚಿವ!

ಬೆಂಗಳೂರು: ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿದಂತೆ ಮುಖ್ಯಮಂತ್ರಿ (Chief Minister) ಬದಲಾವಣೆಯ ಕೂಗು ಜೋರಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಈ ನಡುವೆ ಕೆಲವು ಕಾಂಗ್ರೆಸ್ ಹಿರಿಯ ನಾಯಕರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈಗ ಈ ಸಾಲಿಗೆ ಇನ್ನೋರ್ವ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಸಚಿವರಾಗಿರುವ ಎಂ.ಬಿ ಪಾಟೀಲ್ (MB Patil) ಸೇರಿಕೊಂಡಿದ್ದಾರೆ.

ಸೀನಿಯಾರಿಟಿ ಬೇಕಿಲ್ಲ:

ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಸಚಿವ ಎಂ.ಬಿ ಪಾಟೀಲ್, ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಅಂತೂ ಇಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅವರೇ ಇರ್ತಾರೆ. ಸಿಎಂ ಆಗೋಕೆ ಸೀನಿಯಾರಿಟಿ ಬೇಕಿಲ್ಲ. ಒಂದು ಮಾತು ಹೇಳ್ತೇನೆ. ಕಾಂಗ್ರೆಸ್ ನಲ್ಲಿ ನಾನು ಕೂಡ ಸಿಎಂ ಆಗ್ತೀನಿ. ವಿಜಯಪುರದಿಂದ ಸಿಎಂ ಆದರೆ ನಾನೇ ಆಗೋದು. ಶಿವಾನಂದ ಪಾಟೀಲ್ ಅಂತೂ ಆಗಲ್ಲ. ಅವ್ರು ಇವಾಗ ಜನತಾ ದಳದಿಂದ ಕಾಂಗ್ರೆಸ್‌ಗೆ ಬಂದಿದ್ದಾರೆ ಎನ್ನುವ ಮೂಲಕ ಶಿವಾನಂದ ಪಾಟೀಲ್ ಗೆ ತಿರುಗೇಟು ನೀಡಿದ್ದಾರೆ.

ಶಿವಾನಂದ ಪಟೀಲ್‌ಗೆ ತಿರುಗೇಟು:

ಎಂ.ಬಿ ಪಾಟೀಲ್ ಗಿಂತ ಮೊದಲು ಇನ್ನೂ ಹಿರಿಯರಿದ್ದಾರೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನಲ್ಲಿ ನನಗಿಂತ ಸೀನಿಯರ್ಸ್‌ಗಳಿದ್ದಾರೆ. ಆದರೆ, ಸೀನಿಯರ್ಸ್ ಅನ್ನೋದು ಮಾನದಂಡ ಅಲ್ಲ. ಸಿಎಂ ಆಗೋಕೆ ಸೀನಿಯಾರಿಟಿ, ಜ್ಯೂನಿಯರಿಟಿ ಬರೋದಿಲ್ಲ. ನಾನು ಈಗಾಗಲೇ ಕಾಂಗ್ರೆಸ್ ನಲ್ಲೇ ಸೀನಿಯರ್ ಆಗಿದ್ದೇನೆ. ಶರದ್ ಪವಾರ್ ಮಹಾರಾಷ್ಟ್ರ ದಲ್ಲಿ 38 ವರ್ಷಕ್ಕೆ ಸಿಎಂ ಆದ್ರು. ದೇವರಾಜ್ ಅರಸು ಅವ್ರು ಸಿಎಂ ಆಗಿಲ್ವಾ? ಆರ್. ಗುಂಡೂರಾವ್, ಕುಮಾರಸ್ವಾಮಿ ಸಿಎಂ ಆಗಿರಲಿಲ್ಲವಾ.? ಒಂದಲ್ಲ ಒಂದು ದಿನ ನಾನು ಕೂಡ ಮುಖ್ಯಮಂತ್ರಿ ಆಗ್ತೀನಿ. ಆಸೆ ಇದೆ ಆದರೆ, ದುರಾಸೆ ಇಲ್ಲ ಎಂದರು.

ದರ್ಶನ್ ವಿಚಾರ ಗಂಭೀರವಾಗಿ ತೆಗೆದುಕೊಂಡಿದ್ದೇವೆ:

ಮುಡಾ ಕೇಸ್ ಡೈವರ್ಟ್ ಮಾಡಲು ದರ್ಶನ್ ಫೋಟೋ ಲೀಕ್ ಮಾಡಿಸಿದ್ದಾರೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿ ತಿಳಿದವರು. ಅವ್ರು ಈ ರೀತಿ ಮಾತಾಡೋದು ಸರಿಯಲ್ಲ. ದರ್ಶನ್ ರಾಜಾತೀಥ್ಯ ವಿಚಾರ ಗಂಭೀರವಾದ ಪ್ರಕರಣ. ನಾನು ಹೋಮ್ ಮಿನಿಸ್ಟರ್ ಆಗಿದ್ದಾಗಲೂ ಜೈಲಿನಲ್ಲಿ ಈ ರೀತಿಯ ವ್ಯವಸ್ಥೆಗಳನ್ನು ನೋಡಿದ್ದೇನೆ.

ಇದನ್ನೂ ಓದಿ: Road Accident: ಭೀಕರ ಅಪಘಾತದಲ್ಲಿ ಎರಡು ದಿನದ ಹಿಂದೆ ಮದುವೆಯಾಗಿದ್ದ ಮಾನಸ ದುರ್ಮರಣ..! ಪತಿ ಸ್ಥಿತಿ ಗಂಭೀರ

ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ, ಅದಕ್ಕಾಗಿ ದರ್ಶನ್ ಅಂಡ್ ಟೀಮ್ ನ್ನು ಚದುರಿಸಿ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಫೋಟೋ ಲೀಕ್ ಆಗಿದ್ದು ಮತ್ತೆ ಎಲ್ಲರದರ ಬಗ್ಗೆ ತನಿಖೆ ಆಗ್ತಿದೆ. ಮುಡಾ ಡೈವರ್ಟ್ ಮಾಡೋಕೆ ಅದರಲ್ಲಿ ಏನಾಗಿದೆ? ಎಂದು ಪ್ರಶ್ನಿಸಿದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ