Ganesha installation at midnight in Vijayapur Corporation, police rushed to the place

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಪಾಲಿಕೆ ಸದಸ್ಯರಾದ ರಾಹುಲ್ ಜಾಧವ್, ಕಿರಣ್ ಪಾಟೀಲ್, ಶಿವರುದ್ರ ಬಾಗಲಕೋಟೆ, ಮಲ್ಲಿಕಾರ್ಜುನ ಗಡಗಿ, ರಾಜಶೇಖರ್ ಮಗೀಮಠ, ಬಂದೇನವಾಜ್ ಬೀಳಗಿ, ಜಮೀರ್ ಬಾಂಗಿ, ಜವಾಹರ ಗೋಸಾವಿ, ಮಾಜಿ ಸದಸ್ಯ ರಾಜೇಶ್​ರಿಂದ ವಿಜಯಪುರ ಪಾಲಿಕೆಯಲ್ಲಿ ಗಣೇಶ ಮೂರ್ತಿಯನ್ನು ‌ಸ್ಥಾಪಿಸಿದ್ದಾರೆ‌.

ಪ್ರತಿ ವರ್ಷ ಪಾಲಿಕೆಯಲ್ಲಿ‌ ಗಣೇಶ ಚತುರ್ಥಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿತ್ತು. ಹಿಂದಿನ ಎಲ್ಲಾ ವರ್ಷಗಳಲ್ಲಿಯೂ ಪಾಲಿಕೆಯ ಎಲ್ಲ ಸಿಬ್ಬಂದಿ ಒಂದು ದಿನದ ವೇತನ ಗಣೇಶ ಚತುರ್ಥಿಯ ಹಬ್ಬಕ್ಕೆ ನೀಡಿ, ಹಬ್ಬದ ವೇಳೆ ಗಣಪನ‌ ಮೂರ್ತಿ ಪ್ರತಿಷ್ಠಾಪಿಸಿ, ಸತ್ಯ ನಾರಾಯಣ ಪೂಜೆ ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಮಾಡುತ್ತಿದ್ದರು.

ಆದರೆ, ಈ ಬಾರಿ ಗಣಪತಿ ಹಬ್ಬದ ಆಚರಣೆಗೆ ಪಾಲಿಕೆ ಮುಂದಾಗಿಲ್ಲ. ಆದ್ದರಿಂದ ರಾತ್ರೋರಾತ್ರಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇನ್ನು, ಈ‌ ಹಿಂದೆ ಪಾಲಿಕೆಯ ನೆಲ‌‌ ಮಹಡಿಯ ಪ್ರವೇಶ ದ್ವಾರದ ಎದುರು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ನಂತರ, ಕಳೆದ ಜುಲೈನಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಅಂಬೇಡ್ಕರ್ ಮೂರ್ತಿಯನ್ನು ಇಟ್ಟಿದ್ದರು. ಈ ಘಟನೆ ವಿವಾದಕ್ಕೆ ಕಾರಣವಾಗಿತ್ತು. ಆ ವೇಳೆ ಅಂಬೇಡ್ಕರ್ ಹಾಗೂ ಇತರೆ ಮಹಾನ್ ನಾಯಕರ ಮೂರ್ತಿ ಪಾಲಿಕೆಯ ಆವರಣದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ ಎಂದು ಆಯುಕ್ತರು ಭರವಸೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ BIG SHOCK!

ಈಗ ಅಂಬೇಡ್ಕರ್ ಮೂರ್ತಿ ಸ್ಥಾಪಿಸಿದ ವಿಚಾರಕ್ಕೂ ಗಣಪನ ಹಬ್ಬದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲಾ. ಚೌತಿಯ ದಿನ ಗಣೇಶನ ಮೂರ್ತಿ ಪ್ರತಿಷ್ಟಾಪಿಸಿದ ಕಾರಣ ಗಣಪನ ಮೂರ್ತಿಯನ್ನು ಇಟ್ಟಿದ್ದೇವೆಂದು ಪಾಲಿಕೆಯ ಹಾಲಿ‌ ಮಾಜಿ ಸದಸ್ಯರು ತಿಳಿಸಿದ್ದಾರೆ.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ