Murder: Wife hacked her husband to death in front of him, suspicion of wife's handiwork

Murder: ಹೆಂಡತಿ ಎದುರೇ ಗಂಡನನ್ನು ಕೊಚ್ಚಿ ಕೊಚ್ಚಿ ಕೊಂದ್ರು, ಪತ್ನಿಯ ಕೈವಾಡದ ಶಂಕೆ!

Murder: ಹೆಂಡತಿ ಎದುರೇ ಗಂಡನನ್ನು ಕೊಚ್ಚಿ ಕೊಚ್ಚಿ ಕೊಂದ್ರು, ಪತ್ನಿಯ ಕೈವಾಡದ ಶಂಕೆ!

ಕಲಬುರಗಿ : ಪತ್ನಿಯ ಎದುರಿಗೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಚ್ಚಿ ಗಂಡನನ್ನು ಭೀಕರವಾಗಿ ಕೊಲೆಗೈಯಲಾಗಿದೆ‌.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಕಲಬುರಗಿ ನಗರದ ಹೊರವಲಯದ ಕೆಸರಟಗಿ ಗ್ರಾಮದ ಕ್ವಾಟ್ರಸ್‌ ಬಳಿ ಈ ದುರ್ಘಟನೆ ಸಂಭವಿಸಿದ್ದು, ಹತ್ಯೆಯಾದ ವ್ಯಕ್ತಿಯನ್ನು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಕಪಿಲ್ ಗಾಯಕ್ವಾಡ್ (40) ಎಂದು ಗುರುತಿಸಲಾಗಿದೆ.

ಕೆಲಸ ಮುಗಿಸಿಕೊಂಡು ಪತ್ನಿಯೊಂದಿಗೆ ಕಪಿಲ್ ಮನೆಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ದುಷ್ಕರ್ಮಿಯೋರ್ವ ಅಡ್ಡಗಟ್ಟಿ ಕೊಚ್ಚಿ ಕೊಚ್ಚಿ ಹತ್ಯೆ ಮಾಡಿ ಎಸ್ಕೆಪ್ ಆಗಿದ್ದಾನೆ. ಕತ್ತಿಗೆ, ಹೊಟ್ಟೆ, ಮುಖದ ಭಾಗಕ್ಕೆ ಗಂಭೀರವಾಗಿ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಈ ಹತ್ಯೆಯ ಹಿಂದೆ ಕಪಿಲ್ ಪತ್ನಿ ಭಾಗ್ಯ ಕೈವಾಡವಿದೆ ಎಂದ ಗಂಭೀರವಾದ ಆರೋಪವನ್ನು ಮೃತನ ಕುಟುಂಬಸ್ಥರು ಮಾಡಿದ್ದಾರೆ.

ಇದನ್ನು ಓದಿ: Viral video: ಪಾಕಿಸ್ತಾನದಲ್ಲಿ ಯುವತಿಯ ತಲೆಗೆ CCTV ಫಿಕ್ಸ್ ಮಾಡಿದ ಪೋಷಕರು! (ವಿಡಿಯೋ ವೈರಲ್)

ಈ ಕೊಲೆ ಕುರಿತು ಗುಲಬರ್ಗಾ ವಿ.ವಿ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ