Open welcome for investment from Singapore entrepreneurs in Karnataka: Minister MB Patil

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ (FDI) ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil) ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ ನಿಯೋಗದ ನೇತೃತ್ವ ವಹಿಸಿದ್ದರು.

ನಿಯೋಗದೊಂದಿಗೆ ಮಾತನಾಡಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಶನ್ನಿನ ಸದಸ್ಯರು, ಬೆಂಗಳೂರಿನಲ್ಲಿ `ಸಿಂಗಪುರ ಬಿಜಿನೆಸ್ ಫೆಡರೇಶನ್’ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರಕಾರವು ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ್ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ನಿಯೋಗದಲ್ಲಿ ಹೆಸರಾಂತ ಉದ್ಯಮಿಗಳಾದ ಜೆಫ್ರಿ ಗುವೋ, ಡಗ್ಲಾಸ್ ಟ್ಯಾನ್, ಸಮಂತಾ ಟಿಯೋ, ಚೆನ್ ಚಿಯೋಂಗ್, ಮಾರ್ಕಸ್ ಸಿಯಾ, ಪಪ್ಪು ಮಿಲಿಂದ್ ಸುರೇಶ್, ಎಸ್ ಮಹೇಂದ್ರನ್, ಜೆಫ್ರಿ ಕಾಂಗ್ ಮತ್ತು ಶಂಭುನಾಥ್ ರೇ ಇದ್ದರು. ರಾಜ್ಯ ಸರಕಾರದ ಪರವಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Latest News

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ವಿಜಯಪುರ : ನಾನು ಯೋಗ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಹಾಗೆಂದು ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ,ಹಿಂದೆ ಸಿದ್ಧರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

82 ಕೋಟಿ ರೂ.ವೆಚ್ಚದ ಕಾಮಗಾರಿ ಉದ್ಘಾಟನೆ,731 ಕೋಟಿ ಕೆಲಸಗಳಿಗೆ ಶಂಕುಸ್ಥಾಪನೆ ವಿಜಯಪುರ : ಜಿಲ್ಲೆಯ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ ಮಂಗಗಳಿOದ ನಿತ್ಯವೂ ಸಾರ್ವಜನಿಕರು,ವ್ಯಾಪಾರಿಗಳು ಹೈರಾಣಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ಸೋಮವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಆಲದ ಮರದ ಸುತ್ತಮುತ್ತಲೂ ವೃದ್ಧರು,ಮಹಿಳೆಯರು ವ್ಯಾಪಾರಕ್ಕೆಂದು ಕಾಯಿಪಲ್ಯೆ,ಮಸಾಲೆ ಪದಾರ್ಥಗಳನ್ನು ಮಾರಾಟಕ್ಕೆ ಬರುವವರ ಮೇಲೆ ಈ ಮಂಗಗಳು ದಾಳಿ ಮಾಡುತ್ತಿವೆ. ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಐದಾರು ಜನರ ಮೇಲೆ ದಾಳಿ ಮಾಡಿ ಕಚ್ಚಿಗಾಯಗೊಳಿಸಿದ ಘಟನೆಗಳು ನಡೆದಿವೆ.ಸ್ವೀಟ್ ಮಾರ್ಟ್ ಅಂಗಡಿಯವರOತೂ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು ಜನಿಸಿದ ಗ್ರಾಮ ಅಭಿವೃದ್ಧಿಯಾಗಬೇಕು ಎಂಬ ಕಳಕಳಿಯಿಂದ ರೂ.25 ಲಕ್ಷ ಸ್ವಂತ ಹಣದಲ್ಲಿ ಸಿಸಿ ರಸ್ತೆ ಹಾಗೂ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಿ ಪ್ರಭು ಭೈರಿಯವರು ಶ್ಲಾಘನೀಯ ಕಾರ್ಯ ಮಾಡಿದ್ದಾರೆ ಎಂದು ಮುಖಂಡ ಅಶೋಕ ಭೋವಿ ಹೇಳಿದರು. ತಾಲೂಕಿನ ಕಲಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂತೆ ಮಾರಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳ ಆವರಣದಲ್ಲಿ