Accident: ಬದುಕಿನ ಸಂತೆ ಮುಗಿಸಿದ ವ್ಯಾಪಾರಿ: ಗೂಡ್ಸ್ ಅಟೋ-ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

Accident: ಬದುಕಿನ ಸಂತೆ ಮುಗಿಸಿದ ವ್ಯಾಪಾರಿ: ಗೂಡ್ಸ್ ಅಟೋ-ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

Ad
Ad

ಮುದ್ದೇಬಿಹಾಳ : ಗೂಡ್ಸ್ ಅಟೋ ಹಾಗೂ ಕ್ಯಾಂಟರ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಟೋದಲ್ಲಿದ್ದ ಒರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ ಅಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕವಡಿಮಟ್ಟಿ-ಹಿರೇಮುರಾಳ ಮಧ್ಯೆದಲ್ಲಿ ಬರುವ ಡಾಂಬರ್ ಪ್ಲಾಂಟ್ ಹತ್ತಿರ ಶನಿವಾರ ನಡೆದಿದೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಘಟನೆಯಲ್ಲಿ ಚವನಬಾವಿಯಲ್ಲಿ ಕಿರಾಣಿ ಅಂಗಡಿಯನ್ನಿಟ್ಟುಕೊಂಡಿದ್ದ ಕರಿಯಪ್ಪ ಡಿ.ನಾಲತವಾಡ(55) ಸ್ಥಳದಲ್ಲೇ ಅಸುನೀಗಿದರು. ಗೂಡ್ಸ್ ಆಟೋ ಚಾಲಕ ಯಮನಪ್ಪ ಜಗಂಡಭಾವಿ ಅವರಿಗೆ ಗಂಭೀರ ಗಾಯಗಳಾಗಿದ್ದು ಬಾಗಲಕೋಟ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಚವನಬಾವಿಯಲ್ಲಿ ಕಿರಾಣಿ ಅಂಗಡಿಯನ್ನಿಟ್ಟಿದ್ದ ಕರಿಯಪ್ಪ ನಾಲತವಾಡ, ಒಂದು ವಾರಕ್ಕಾಗುಷ್ಟು ಕಿರಾಣಿ ಸಂತೆಯನ್ನು ಖರೀದಿಸಿಕೊಂಡು ಆಟೋದಲ್ಲಿ ಹಾಕಿಕೊಂಡು ತಮ್ಮೂರಿನತ್ತ ಹೊರಟಿದ್ದ ವೇಳೆ ಹಿರೇಮುರಾಳ-ಕವಡಿಮಟ್ಟ ಮಾರ್ಗ ಮಧ್ಯೆ ಯಮನ ರೂಪದಲ್ಲಿ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ಅವರ ಜೀವನದ ಸಂತೆಯನ್ನೇ ಮುಗಿಸಿದ್ದು ಎಂಥವರನ್ನು ಮರುಗುವಂತೆ ಮಾಡಿತು.

ಘಟನಾ ಸ್ಥಳದಲ್ಲಿ ಜೀರಾ ಸೋಡಾ ಬಾಟಲಿಗಳು, ಶೇಂಗಾ, ರವೆ, ಅವಲಕ್ಕಿ, ಇನ್ನೂ ಗಂಟು ಬಿಚ್ಚದೇ ಇದ್ದ ಬಳ್ಳೊಳ್ಳಿ,ಶೇಂಗಾ ಇನ್ನೀತರ ಸಾಮಗ್ರಿ ಇದ್ದ ಚೀಲದ ಮೇಲಿನ ರಕ್ತದ ಹನಿಗಳು ಘಟನೆಯ ಭೀಕರತೆಯನ್ನು ಎತ್ತಿ ತೋರಿಸುವಂತಿತ್ತು.

ಅಟೋ ಚಾಲಕ ಯಮನಪ್ಪ ಜಗಂಡಭಾವಿ ಪರಿಸ್ಥಿತಿ ಗಂಭೀರವಾಗಿದ್ದು ಅವರ ತಾಯಿ ಮಗನ ಪರಿಸ್ಥಿತಿಗೆ ಕಣ್ಣೀರು ಹಾಕುತ್ತಿದ್ದಾರೆ.ಅಪಘಾತಕ್ಕೀಡಾದ ಆಟೋದ ಮೇಲೆ ಹುಟ್ಟು ಉಚಿತ, ಸಾವು ಖಚಿತ, ನೀನೇ ಶಾಶ್ವತ ಬರಹ ಮಾರ್ಗ ಮಧ್ಯೆದಲ್ಲಿನ ಜನರ ಗಮನ ಸೆಳೆಯಿತು.

ಪಿಎಸ್‌ಐ ಸಂಜಯ ತಿಪರೆಡ್ಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಪಘಾತಕ್ಕೆ ಕಾರಣವಾದ ಕ್ಯಾಂಟರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Gold Price Today : ಚಿನ್ನ ಪ್ರಿಯರಿಗೆ ಇದು ಶಾಕಿಂಗ್ ನ್ಯೂಸ್!

ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500