Shouldn't you file an FIR against the minister for falsely calling the Pakistan Zindabad slogan?

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ?

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ?

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮಂಗಲದ ಕೋಮುಗಲಭೆ ವಿಚಾರದಲ್ಲಿ ಸರಿಯಾಗಿ ತನಿಖೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದೆ. ಜನರು ಹೇಳಿದ್ದನ್ನು ಕೇಳಿಯೇ ಹಾಗೆ ಟ್ವೀಟ್‌ ಮಾಡಿದ್ದೆ. ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದು ಸಚಿವರೇ ಹೇಳಿದ್ದರು. ಬಳಿಕ ಅದು ನಿಜ ಎಂದು ಸಾಬೀತಾಯಿತು. ಹಾಗಾದರೆ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ ಎಂದು ಪ್ರಶ್ನೆ ಮಾಡಿದರು.

ವಿರೋಧ ಪಕ್ಷದ ನಾಯಕನಾಗಿ ತನಿಖೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದೇನೆ. ಸರ್ಕಾರದಿಂದ ನನ್ನ ಬಾಯಿ ಮುಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಎಲ್ಲ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ವಿರೋಧ ಪಕ್ಷವನ್ನು ಬಗ್ಗುಬಡಿಯಬೇಕೆಂದು ಸರ್ಕಾರ ನಿರ್ಧಾರ ಮಾಡಿದೆ. ಪಾಕ್‌ ಜಿಂದಾಬಾದ್‌ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ ಸಚಿವರು ರಾಜೀನಾಮೆ ನೀಡಬೇಕಿತ್ತು. ಹಾಗಾದರೆ ವಿರೋಧ ಪಕ್ಷವಾಗಿ ನಾವು ಏನು ಮಾಡಬೇಕು? ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಜಾರಿ ಮಾಡಲು ಮುಂದಾಗಿದೆ. ಆದರೆ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಇದರ ವಿರುದ್ಧ ಹೋರಾಟ ಮಾಡುತ್ತೇವೆ. ಪೊಲೀಸರನ್ನು ಬೊಂಬೆಯಂತೆ ಆಡಿಸುತ್ತಿದ್ದಾರೆ. ಈ ಸರ್ಕಾರ ರಾಜ್ಯಪಾಲರನ್ನೂ ಬಿಟ್ಟಿಲ್ಲ. ಅವರ ಮೇಲೂ ಗದಾ ಪ್ರಹಾರ ಮಾಡಲಾಗುತ್ತಿದೆ.

ಇದನ್ನೂ ಓದಿ: ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ವಿಶ್ವವಿದ್ಯಾಲಯದಲ್ಲಿ ರಾಜ್ಯಪಾಲರ ಅಧಿಕಾರ ಕಸಿಯಲು ಸರ್ಕಾರ ಮುಂದಾಗಿದೆ. ನಾವು ಇಂದಿರಾಗಾಂಧಿಯ ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ಮಾಡಿದ್ದೆವು. ಹೀಗಾಗಿ ಈ ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರಲ್ಲ ಎಂದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ