Pratibha Kananji-Dharikar, a platform for the unveiling of talent

ಪ್ರತಿಭೆಯ ಅನಾವರಣದ ವೇದಿಕೆ ಪ್ರತಿಭಾ ಕಾರಂಜಿ-ಧರಿಕಾರ

ಪ್ರತಿಭೆಯ ಅನಾವರಣದ ವೇದಿಕೆ ಪ್ರತಿಭಾ ಕಾರಂಜಿ-ಧರಿಕಾರ

Ad
Ad

ಮುದ್ದೇಬಿಹಾಳ : ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಅವರಲ್ಲಿ ಹುದುಗಿರುವ ಕಲೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಪೂರಕವಾದ ವೇದಿಕೆ ಒದಗಿಸುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ ಹೇಳಿದರು.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಕೋಳೂರು ಅಭ್ಯುದಯ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಂಗಡಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ,ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಭ್ಯುದಯ ಇಂಟರ್‌ನ್ಯಾಶನಲ್ ಶಾಲೆಯ ನಿರ್ದೇಶಕ ರವಿ ಜಗಲಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಜಾನಪದ ಕಲೆಗಳನ್ನು ಇಂತಹ ಕಾರ್ಯಕ್ರಮಗಳಲ್ಲಿ ವ್ಯಕ್ತಪಡಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಡಲು ಸಹಕಾರಿಯಾಗುತ್ತದೆ. ಸರ್ಕಾರ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಕಾರ್ಯ ಮಾಡಬೇಕು ಎಂದರು.

ಬಿ.ಎಚ್.ಮುದ್ನೂರ, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಸ್.ತುರಡಗಿ, ಸಿ.ಆರ್.ಸಿ ಎಂ.ಡಿ.ಅಮರವಾಡಗಿ ಮಾತನಾಡಿದರು.

ಗ್ರಾಪಂ ಸದಸ್ಯ ರಮೇಶ ಇಂಗಳಗಿ, ಅಭ್ಯುದಯ ಶಾಲೆಯ ಮುಖ್ಯಗುರು ಆರ್.ಎಂ.ಹರನಾಳ, ಸಂಗಮೇಶ ಹೂಗಾರ, ರವಿ ಗೌಡರ ಸೇರಿದಂತೆ ತಂಗಡಗಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಮುಖ್ಯಗುರುಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ (ವಿಡಿಯೋ ನೋಡಿ)

ಜಿ.ಎಸ್.ಗುರುವಿನ ಸ್ವಾಗತಿಸಿದರು. ವಿಜಯಲಕ್ಷ್ಮಿ ಮಳಗಾವಿ ನಿರೂಪಿಸಿದರು. ಬಸವರಾಜ ಅಥಣಿ ವಂದಿಸಿದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500