Astrology Image of astrology

Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

Ad
Ad

ಮೇಷ ರಾಶಿ: ಇಂದು ಹೆಚ್ಚಿನ ಆತ್ಮ ವಿಶ್ವಾಸವನ್ನು ಸದುಪಯೋಗ ಪಡಿಸಿಕೊಳ್ಳಲು ಪ್ರಯತ್ನಿಸಿ. ಕೆಲಸದ ಒತ್ತಡದ ನಡುವೆಯೂ ನಿಮ್ಮ ಜ್ಞಾಪಕ ಶಕ್ತಿ ವೃದ್ಧಿಯಾಗಲಿದೆ. ಇಂದು ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ.(ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

Ad
Ad

ವೃಷಭ ರಾಶಿ: ನಿಮ್ಮ ಮಗುವಿನಂತಹ ಸ್ವಭಾವ ಬೇರೆಯವರಿಗೆ ಅರ್ಥವಾಗುವು ದಿಲ್ಲ.ಜ್ಞಾನ ಮತ್ತು ಅನುಭವವನ್ನು ಇತರರೊಂದಿಗೆ ಹಂಚಿಕೊಂಡರೆ ನಿಮ್ಮ ಜ್ಞಾನ ಮತ್ತ ಷ್ಟು ವೃದ್ಧಿಯಾಗುತ್ತದೆ. ಕಷ್ಟಪಟ್ಟು ಮಾಡುವ ಕೆಲಸ ನಿಮ್ಮನ್ನು ಕೊನೆವರೆಗೂ ಕೈಹಿಡಿಯುತ್ತದೆ.(ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಗಣ್ಯವ್ಯಕ್ತಿಗಳೊಂದಿಗೆ ಸಂವಹನ ನಡೆಸುವುದು ಉತ್ತಮ ಆಲೋಚನೆಗಳು ಮತ್ತು ಯೋಜನೆ ಗಳನ್ನು ತರುತ್ತದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಯನ್ನು ಅನುಸರಿಸಲು ಇಂದು ಉತ್ತಮ ದಿನವಾಗಿದೆ. ಆರ್ಥಿಕ ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ.(ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಈ ದಿನ ನಿಮಗೆ ಪ್ರಮುಖವಾಗಿರುತ್ತದೆ. ಜವಳಿ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದ್ದು, ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹೂಡಿಕೆ ಮಾಡಬಹುದು. ಉದ್ಯೋಗದಲ್ಲೂ ಯಶಸ್ಸು ಕಾಣುವಿರಿ. ಇದರ ಹೊರತಾಗಿ, ಯಾವುದೇ ಜವಾಬ್ದಾರಿಯುತ ಕೆಲಸ ಕಾರ್ಯಗಳಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವ್ಯಾಪಾರಸ್ಥರಿಗೆ ಉತ್ತಮ ದಿನ. ವ್ಯಾಪಾರ ಉದ್ದೇಶಕ್ಕಾಗಿ ಕೈಗೊಂಡ ಹಠಾತ್ ಪ್ರವಾಸವು ಧನಾತ್ಮಕ ಫಲಿತಾಂಶ ಗಳನ್ನು ನೀಡುತ್ತದೆ. ವಿದೇಶಗಳೊಂದಿಗೆ ಸಂಬಂಧ ಹೊಂದಿರುವ ವ್ಯಾಪಾರಿಗಳು ಮತ್ತು ಉದ್ಯಮಿಗಳು ಇಂದು ಹಣಕಾಸಿನ ವ್ಯವಹಾರಕ್ಕೆ ಅನುಗುಣವಾಗಿ ಯಾವುದೇ ಹೆಜ್ಜೆ ಮುಂದಿಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ ಮತ್ತು ವ್ಯವಹಾರದಲ್ಲಿ ಜಾಗರೂಕರಾಗಿರಿ.(ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ವ್ಯಾಪಾರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಸ್ವತಂತ್ರವಾಗಿ ಯೋಚಿಸಿ ಮತ್ತು ಹೊಸ ಹೂಡಿಕೆಗಳನ್ನು ಮಾಡಲು ನಿಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಿ.(ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಗ್ರಹಗಳು ಮತ್ತು ನಕ್ಷತ್ರಗಳ ಲಾಭದಾಯಕ ಸ್ಥಾನದಿಂದಾಗಿ ಇಂದು ಹಣವನ್ನು ಗಳಿಸಲು ಸಹಾಯವಾಗುತ್ತದೆ. ಜೊತೆಗೆ ಹಲವಾರು ಅವಕಾಶಗಳನ್ನು ಪಡೆಯುತ್ತೀರಿ. ಪ್ರಭಾವಿ ಮತ್ತು ಪ್ರಮುಖ ವ್ಯಕ್ತಿಗಳೊಂದಿಗೆ ನಿಮ್ಮ ಬಾಂಧವ್ಯವನ್ನು ಸುಧಾರಿಸಲು ಅವಕಾಶ ಸಿಗುತ್ತದೆ. ಪ್ರಯತ್ನಗಳನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿ. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ವೈಯಕ್ತಿಕ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ನೀವು ಉದಾರ ವಾಗಿರಿ. ವೃತ್ತಿ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಏಕಾಗ್ರತೆಯಿಂದ ಕೆಲಸ ಕಾರ್ಯಗಳನ್ನು ಮಾಡಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಕಠಿಣ ಪರಿಶ್ರಮ ಕೈ ಹಿಡಿಯಲಿದೆ. ಇಂದು ನಿಮಗೆ ಕೆಲವು ಆರ್ಥಿಕ ಪ್ರತಿಫಲಗಳು ಸಿಗಲಿವೆ. ಇಂದು ಲಾಭದಾಯಕ ದಿನವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕ ಗಳನ್ನು ಒದಗಿಸುತ್ತವೆ.(ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮುನ್ನ ಎರಡು ಬಾರಿ ಯೋಚಿಸಿ. ನಿಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಳ್ಳುವುದರಿಂದ ನೀವು ಪ್ರಯೋಜನ ಪಡೆಯುತ್ತೀರಿ. ಖರ್ಚುವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ.(ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಈ ದಿನ ನಿರ್ದಿಷ್ಟ ವಿಷಯದ ಬಗ್ಗೆ ನಿಮ್ಮ ಆಲೋಚನೆ ಬದಲಾಗಬಹುದು. ಇದರೊಂದಿಗೆ, ಆದಾಯವನ್ನು ಹೆಚ್ಚಿಸಲು ಕೆಲವು ಉತ್ತಮ ಅವಕಾಶಗಳನ್ನು ಸಹ ಪಡೆಯಬಹುದು. ಆನ್‌ಲೈನ್ ವಹಿವಾಟಿನಲ್ಲಿ ಜಾಗರೂಕರಾಗಿರಿ. ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಯಶಸ್ಸು ಕಾಣುವರು.(ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹೊಸ ಕೆಲಸದ ಕಡೆಗೆ ಒಲವು ತೋರುತ್ತೀರಿ. ನಿಮ್ಮ ಶಕ್ತಿ ಮತ್ತು ಧೈರ್ಯದ ಬಲದಿಂದ ಯಶಸ್ಸು ಕಾಣುವಿರಿ,ಯುವಕರು ವೃತ್ತಿಗೆ ಸಂಬಂಧಿಸಿದ ಹೊಸ ಮಾಹಿತಿಯನ್ನು ಪಡೆಯುತ್ತಾರೆ. ಕೆಲಸ ಕಾರ್ಯಗಳಲ್ಲಿ ವಿಸ್ತರಣೆಗೆ ಹಣದ ಅವಶ್ಯಕತೆ ಬರಬಹುದು, ವಿಸ್ತರಣೆಯ ಯೋಚನೆ ಯನ್ನು ಸದ್ಯಕ್ಕೆ ಬಿಡುವುದು ಉತ್ತಮ.(ಭಕ್ತಿಯಿಂದ ಶ್ರೀ ಅಷ್ಟ ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ಸಪ್ತಮಿ
ನಕ್ಷತ್ರ : ಮೃಗಶಿರಾ ನಕ್ಷತ್ರ.

ರಾಹುಕಾಲ:03:00PM ರಿಂದ 04:30PM
ಗುಳಿಕಕಾಲ:12:00PM ರಿಂದ 01:30PM
ಯಮಗಂಡಕಾಲ:09:00AM ರಿಂದ 10:30AM

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500