Let the Sanatana Board be constituted for the management of Hindu temples: Vishwaprasanna Swamiji

ಹಿಂದೂ ದೇಗುಲ ನಿರ್ವಹಣೆಗೆ ಸನಾತನ ಬೋರ್ಡ್ ರಚನೆಯಾಗಲಿ: ವಿಶ್ವಪ್ರಸನ್ನ ಸ್ವಾಮೀಜಿ

ಹಿಂದೂ ದೇಗುಲ ನಿರ್ವಹಣೆಗೆ ಸನಾತನ ಬೋರ್ಡ್ ರಚನೆಯಾಗಲಿ: ವಿಶ್ವಪ್ರಸನ್ನ ಸ್ವಾಮೀಜಿ

Ad
Ad

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದಕ್ಕೆ ಕಲಬೆರೆಕೆ ತುಪ್ಪ ಪೂರೈಕೆ ವಿವಾದದ ಬೆನ್ನಲ್ಲೇ ರಾಜ್ಯದಲ್ಲೂ ಇದೀಗ ದೇವಸ್ಥಾನಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸುವ ಹಾಗೂ ದೇಗುಲಗಳ ನಿರ್ವಹಣೆಗೆ ಮಠಾಧೀಶರ ನೇತೃತ್ವದಲ್ಲಿ ಪ್ರತ್ಯೇಕ ನಿಯಂತ್ರಣ ಮಂಡಳಿ ಸ್ಥಾಪಿಸುವಂತೆ ನಾಡಿನ ಪ್ರಮುಖ ಸಂತರಿಂದ ಆಗ್ರಹ ಕೇಳಿಬಂದಿದೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಅವರು ಹಿಂದೂ ದೇಗುಲಗಳ ರಕ್ಷಣೆಗೆ ಸನಾತನ ಧರ್ಮ ರಕ್ಷಣಾ ಮಂಡಳಿ ಸ್ಥಾಪನೆ ಕುರಿತ ಅಭಿಪ್ರಾಯ ತೇಲಿಬಿಟ್ಟಿದ್ದರು. ಇದರ ಬೆನ್ನಲ್ಲೇ ರಾಜ್ಯದ ಪ್ರಮುಖ ಮಠಾಧೀಶರಾದ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ, ಉಡುಪಿ ಪರ್ಯಾಯ ಪುತ್ತಿಗೆ ಮಠದ ಸುಭುದೇಂದ್ರ ಶ್ರೀಗಳು, ಮಂತ್ರಾಲಯದ ಸುಭುದೇಂದ್ರ ತೀರ್ಥರು ಹಾಗೂ ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೆಶ ತೀರ್ಥರು ಹಿಂದೂಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸಿ ಹಿಂದೂಗಳ ಕೈಗೆ ನೀಡುವಂತೆ ಒತ್ತಾಯಿಸಿದ್ದಾರೆ.

ಸ್ವಾತಂತ್ರ್ಯ ಪೂರ್ವದಲ್ಲಿ ಊರಿನ ಮುಖಂ ಡರು ಹಾಗೂ ಅರ್ಚಕರ ನೇತೃತ್ವದಲ್ಲಿ ದೇವ ಸ್ಥಾನಗಳು ನಡೆಯುತ್ತಿದ್ದವು. ಕೇಂದ್ರ ಸರ್ಕಾರ ಕೂಡಲೇ ಮಠ-ಮಾನ್ಯಗಳಿಗೆ ವಿಶೇಷ ಕಾಯ್ದೆ ತರಬೇಕು ಎಂದು ಮಂತ್ರಾಲಯದ ಸುಬು ಧೇಂದ್ರ ತೀರ್ಥರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳು ಕೂಡ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದು, ಹಿಂದೂ ಧಾರ್ಮಿಕ ಕೇಂದ್ರಗಳು ಸರ್ಕಾರದ ಅಧೀನದಲ್ಲಿರಬಾರದು. ಹಿಂದೂ ಸಂಸ್ಥೆಗಳ ಆಡಳಿತಕ್ಕೆ ಒಳಪಡಬೇಕು ಎಂದು ಸುಪ್ರೀಂ ಕೋರ್ಟ್ ಕೂಡ ತೀರ್ಪು ಇದೆ. ಈ ಹಿನ್ನೆಲೆಯಲ್ಲಿ ಕೂಡಲೇ ಎಲ್ಲ ದೇವಸ್ಥಾನಗಳನ್ನು ಸರ್ಕಾರದಿಂದ ಮುಕ್ತಗೊಳಿಸಿ ಹಿಂದೂಗಳಿಗೆ ಒಪ್ಪಿಸಬೇಕು ಎಂದಿದ್ದಾರೆ.

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ಕೂಡ, ಸರ್ಕಾರಗಳು ಒಂದು ನಿರ್ದಿಷ್ಟವಾದ ಧರ್ಮವನ್ನು ಮಾತ್ರ ನಿಯಂತ್ರಿಸುವುದು ಸರಿಯಲ್ಲ ಎಂದಿದ್ದಾರೆ.

ಇದನ್ನೂ ಓದಿ: Rain update: ಭಾರೀ ಮಳೆಗೆ ಒಂದೇ ಕುಟುಂಬದ ಮೂವರು ಸೇರಿ ಸಿಡಿಲಿಗೆ ನಾಲ್ವರ ದುರ್ಮರಣ

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500