ಬೈಕ್ ಕಳ್ಳನ ಬಂಧನ-ಮೂರು ಬೈಕ್, ಚಿನ್ನಾಭರಣ ವಶಕ್ಕೆ

ಬೈಕ್ ಕಳ್ಳನ ಬಂಧನ-ಮೂರು ಬೈಕ್, ಚಿನ್ನಾಭರಣ ವಶಕ್ಕೆ


ಮುದ್ದೇಬಿಹಾಳ: ಪೊಲೀಸರು ಬೈಕ್ ಕಳ್ಳನೋರ್ವನನ್ನು ಬಂಧಿಸಿ ಆತನಿಂದ ಮೂರು ವಿವಿಧ ಕಂಪನಿ ಬೈಕ್‌ಗಳು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಳಿಕೋಟಿ ತಾಲ್ಲೂಕು ಕಲಕೇರಿಯ ನಿವಾಸಿ ಹಾಲಿ ವಸ್ತಿ ಆಶ್ರಯ ಕಾಲನಿಯ ನಿವಾಸಿಯಾಗಿದ್ದ ಸಿಕಂದರ ನಾಯ್ಕೋಡಿ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಫೆ.11ರಂದು 2024 ರಂದು ತಮ್ಮ ಬೈಕ್ ಕಳ್ಳತನವಾಗಿದೆ ಎಂದು ಬ.ಬಾಗೇವಾಡಿ ತಾಲ್ಲೂಕು ಕಾನ್ನಾಳದ ನಿವಾಸಿ, ಹಾಲಿ ವಸ್ತಿ ಮುದ್ದೇಬಿಹಾಳದ ಆಶ್ರಯ ಕಾಲನಿಯಲ್ಲಿರುವ ಉಮೇಶ ಹಡಪದ ಪೊಲೀಸರಿಗೆ ದೂರು ನೀಡಿದ್ದರು.

ಬಂಧಿತ ಆರೋಪಿಯಿಂದ ಹೋಂಡಾ ಕಂಪನಿ, ಹಿರೋ ಹೋಂಡಾ ಹಾಗೂ ಬಜಾಜ ಪ್ಲಾಟಿನಾ ಕಂಪನಿಯ ಬೈಕಗಳನ್ನು ವಶಕ್ಕೆ ಪಡೆದಿದ್ದಾರೆ.ಅಲ್ಲದೇ ಆತನಿಂದ 45 ಗ್ರಾಂ ವಿವಿಧ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಕಳ್ಳತನ ಮಾಡಿದ ಒಟ್ಟು ವಸ್ತುಗಳ ಮೌಲ್ಯ 5.24 ಲಕ್ಷ ರೂ.ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣವನ್ನು ಪತ್ತೆ ಹಚ್ಚಲು ಶ್ರಮಿಸಿದ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಪಿಎಸ್‌ಐ ಆರ್.ಎಲ್.ಮನ್ನಾಭಾಯಿ, ಸಿಬ್ಬಂದಿ ಬಿ.ಕೆ.ಗುಡಿಮನಿ, ಆರ್.ಎಸ್.ಪಾಟೀಲ್, ಪಿ.ಎಸ್.ಠಾಣೇದ, ವಿ.ಎನ್.ಹಾಲಗಂಗಾಧರಮಠ, ರಮೇಶ ಮದರಿ ಶ್ರಮಿಸಿದ್ದು ಅವರಿಗೆ ಎಸ್ಪಿ ಅವರು ಪ್ರಶಂಸಾ ಪತ್ರ,ಬಹುಮಾನ ಘೋಷಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ

ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು ಪ್ರೇಮದ ಕತೆಯೂ ಇದೆ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ:                                                                               ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ: ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ತಾಳಿಕೋಟಿ : ಮಾಧ್ಯಮಗಳು ಸಮಾಜದಲ್ಲಿ ನಡೆದಿರುವ ಸತ್ಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು ಇಲ್ಲಿನ ಖಾಸ್ಗತೇಶ್ವರ ಮಠದ ಪೀಠಾಧಿಪತಿ ಸಿದ್ಧಲಿಂಗ ದೇವರು ನುಡಿದರು. ಪಟ್ಟಣದ ತಾಳಿಕೋಟೆ ಖಾಸ್ಗತೇಶ್ವರ ಮಠದಲ್ಲಿ ಭಾನುವಾರ ಸಂಜೆ ಹೆಬ್ಬಾಳ ಪಬ್ಲಿಸಿಟಿ ಹಾಗೂ ಜನರಕೂಗು ಸುದ್ದಿ ವಾಹಿನಿ ಬಳಗದ 2026 ನೇ ವರ್ಷದ ದಿನದರ್ಶಿಕೆ ಬಿಡುಗಡೆ ಮಾಡಿ ಮಾತನಾಡಿದರು. ಮಠಗಳು ನಡೆಸುವ ಶೈಕ್ಷಣಿಕ,ಧಾರ್ಮಿಕ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಧ್ಯಮ ಮಾಡಬೇಕಿದೆ.ಮಾಧ್ಯಮ ಕ್ಷೇತ್ರದಲ್ಲಿರುವವರಲ್ಲಿ ಅಸೂಯೆ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,