ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ : ಬೇಕರಿ ಅಂಗಡಿಯಲ್ಲಿ ಕಳ್ಳತನ

ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ : ಬೇಕರಿ ಅಂಗಡಿಯಲ್ಲಿ ಕಳ್ಳತನ

ಮುದ್ದೇಬಿಹಾಳ
: ಪಟ್ಟಣದ ಜನನಿಬೀಡ ಪ್ರದೇಶವಾದ ಅಂಬೇಡ್ಕರ್ ಸರ್ಕಲ್ ಹತ್ತಿರದಲ್ಲಿರುವ ಬೇಕರಿಯೊಂದರ ಬಾಗಿಲು ಬೀಗ ಮುರಿದು ಒಳ ಹೊಕ್ಕಿರುವ ಕಳ್ಳನೋರ್ವ ತನಗೆ ಸಿಕ್ಕಿದ್ದನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಅ.21ರ ರಾತ್ರಿ ನಡೆದಿದೆ.

ಪಟ್ಟಣದ ನಿವಾಸಿ ಅಲ್ಲಾಭಕ್ಷ ಬಿದರಕೋಟಿ ಎಂಬುವರಿಗೆ ಸೇರಿದ ಕೇಕ್ ಪ್ಯಾಲೇಸ್ ಬೇಕರಿ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು ಘಟನಾವಳಿಯ ದೃಶ್ಯಗಳು ಅವರದ್ದೇ ಅಂಗಡಿಯಲ್ಲಿ ಅಳವಡಿಸಿದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಅಂಗಡಿಕಾರ ಅಲ್ಲಾಭಕ್ಷ ಬಿದರಕೋಟಿ, ಅಂಗಡಿಯಲ್ಲಿಟ್ಟಿದ್ದ 30 ಸಾವಿರ ರೂಪಾಯಿಗಳನ್ನು ಕದ್ದೊಯ್ದಿದ್ದಾನೆ.ಶೆರ‍್ಸ್ನ ಬೀಗ ಮುರಿಯುವುದು, ಒಳಗಡೆ ಹೋಗಿ ಕ್ಯಾಶ್ ಕೌಂಟರ್‌ನಿAದ ಬ್ಯಾಗ್ ತೆಗೆದುಕೊಳ್ಳುವುದು,ಬಾಯಾರಿಕೆ ಆದಾಗ ನೀರಿನ ಬಾಟಲ್‌ನ್ನು ಕಳುವು ಮಾಡಿಕೊಂಡು ಹೋಗಿದ್ದಾನೆ ಎಂದು ತಿಳಿಸಿದ್ದಾರೆ.

ಪ್ರಕರಣದ ಕುರಿತು ಪಿಎಸ್‌ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಪಿ.ಎಸ್.ಐ ಆರ್.ಎಲ್.ಮನ್ನಾಭಾಯಿ
ಅವರನ್ನು ಮಾತನಾಡಿಸಿದಾಗ, ಘಟನೆ ಗಮನಕ್ಕೆ ಬಂದಿದ್ದು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿ ಪತ್ತೆಗೆ ಬಲೆ ಬೀಸಿದ್ದೇವೆ ಎಂದು ತಿಳಿಸಿದ್ದಾರೆ.ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಅತ್ಯಂತ ಜನನಿಬೀಡ ಪ್ರದೇಶದಲ್ಲಿ ಮಧ್ಯರಾತ್ರಿ ಯಾರ ಭಯವೂ ಇಲ್ಲದೇ ಮುಖಕ್ಕೆ ಮಾಸ್ಕ್ ಕೂಡ ಧರಿಸದೇ ಕಳುವು ಮಾಡಿರುವುದನ್ನು ಕಂಡಾಗ ಈತ ಬೇರೆ ಜಿಲ್ಲೆಯವನೇ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ