ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು



ನಾಲತವಾಡ : ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಾಲತವಾಡ ಪಟ್ಟಣದ ಪೆಟ್ರೋಲ್ ಪಂಪ್ ಹತ್ತಿರ ಗುರುವಾರ ಸಂಭವಿಸಿದೆ.


ಮೃತಪಟ್ಟ ವ್ಯಕ್ತಿಯನ್ನು ಲಿಂಗಸಗೂರು ತಾಲ್ಲೂಕಿನ ನಾಗರಾಳದ ಶಿವಪುತ್ರಪ್ಪ ಸಿದ್ದಪ್ಪ ಭಜಂತ್ರಿ(50)ಎAದು ಗುರುತಿಸಲಾಗಿದೆ.ಬಿಹಾರ ಮೂಲದ ಚಂಪಾರಣ ಈಸ್ಟ್ ಮೋತಿಹರಿ ಹರದಿಯಾ ನಿವಾಸಿ ಜಲ್ಫೆಕರಲಿ ಹಫೀಜುಲ್ಲಾ ಮಿಯಾ ತಾನು ಚಲಾಯಿಸುತ್ತಿದ್ದ ಕ್ರೇನ್ ವಾಹನವನ್ನು ಅತೀ ವೇಗದಿಂದ ಅಜಾಗರೂಕತೆಯಿಂದ ಚಲಾಯಿಸಿಕೊಂಡು ನಾಲತವಾಡದಿಂದ ನಾರಾಯಣಪೂರ ಕಡೆಗೆ ತೆರಳುತ್ತಿದ್ದ ಈ ವೇಳೆ ರಸ್ತೆ ಬದಿ ನಿಂತಿದ್ದ ಶಿವಪುತ್ರಪ್ಪ ಭಜಂತ್ರಿ ಮೇಲೆ ಹಾಯಿಸಿ ಸ್ಥಳದಲ್ಲೇ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನ ಪತ್ನಿ ಶಂಕ್ರಮ್ಮ ಭಜಂತ್ರಿ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Latest News

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಶೃತಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.