
ಮುಧೋಳ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವತಿಯಿಂದ ತಾಲೂಕಿನ ಹಲಗಲಿ ಗ್ರಾಮದಲ್ಲಿ ಜ್ಞಾನ ಜ್ಯೋತಿ-ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಜರುಗಿತು. ಬೀಳಗಿ-ಹಲಗಲಿ ಕಲ್ಮಠದ ಗುರುಪಾದ ಶಿವಾಚಾರ್ಯರು ಕಾರ್ಯಕ್ರಮ ಉದ್ಘಾಟಿಸಿದರು. ಜ್ಞಾನವಿಕಾಸ ಕಾರ್ಯಕ್ರಮದ ಸದಸ್ಯರು ಅನಿಸಿಕೆ ಹಂಚಿಕೊಂಡರು. ಯೋಜನೆ ಕಾರ್ಯಕ್ರಮಗಳಿಂದ ಗ್ರಾಮಮಟ್ಟದಲ್ಲಿ ಹತ್ತಾರು ಅಭಿವೃದ್ದಿ ಕಾರ್ಯಗಳಾಗಿವೆ. ಯೋಜನೆಯಿಂದ ಹಳ್ಳಿ ಮಟ್ಟದಲ್ಲಿ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದ್ದು ಜ್ಞಾನವಿಕಾಸ ಕಾರ್ಯಕ್ರಮ ನಮ್ಮ ಹಳ್ಳಿಯ ಮಹಿಳೆಯರಿಗೆ ಉಪಯುಕ್ತವಾದ ಕಾರ್ಯಕ್ರಮ ಆದ್ದರಿಂದ ನೀವೆಲ್ಲರೂ ಕೂಡ ಸದುಪಯೋಗಪಡಿಸಿಕೊಳ್ಳಿ ಎಂದು ತಿಖಿಸಿದರು.
ಬಳಿಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.
ಊರಿನ ಗಣ್ಯರು ಜ್ಞಾನವಿಕಾಸ ಸಂಯೋಜಿಕೆಯವರು ಜ್ಞಾನವಿಕಾಸ ಕೇಂದ್ರದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು .
