ಮುಧೋಳ : ರೈತರ ಖಾತೆಗೆ ಬಾಕಿ ಹಣ ಜಮಾ ಮಾಡುವಂತೆ ಒತ್ತಾಯಿಸಿ ಸಮೀಪದ ಐಸಿಪಿಎಲ್ ಕಾರ್ಖಾನೆ ಎದುರು ಕಬ್ಬು ಬೆಳೆಗಾರರು ಹಾಗೂ ರೈತರು ಧರಣಿ ಆರಂಭಿಸಿದ್ದಾರೆ.
ಅ.24ರಂದು ನಗರದಲ್ಲಿ ಸಭೆ ಸೇರಿದ್ದ ರೈತರು 26ರೊಳಗೆ 2023ರ ಹಂಗಾಮಿನ ಪ್ರತಿಟನ್ನಿಗೆ ಹೆಚ್ಚುವರಿ 62ರೂ. ನೀಡಬೇಕು ಎಂದು ಎಲ್ಲ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗಳಿಗೆ ಗಡುವು ನೀಡಿದ್ದರು. ಆದರೆ ರೈತರ ಗಡುವಿಗೆ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗಳು ಸ್ಪಂದನೆ ನೀಡದ ಕಾರಣ ಶನಿವಾರ ಮತ್ತೆ ಸಭೆ ಸೇರಿದ ರೈತರು ಕಾರ್ಖಾನೆ ನಡೆಯ ವಿರುದ್ದ ಆಕ್ರೋಶ ಹೊರಹಾಕಿದರು. ಬಳಿಕ ಸಕ್ಕರೆ ಕಾರ್ಖಾನೆ ಎದುರು ಧರಣಿ ಕೂರುವ ನಿರ್ಧಾರ ಕೈಗೊಂಡು ನೇರವಾಗಿ ಕಾರ್ಖಾನೆಗೆ ತೆರಳಿದರು.
ಕಾರ್ಖಾನೆ ಎದುರು ಧರಣಿ ಕುಳಿತಿರುವ ರೈತರು ಬಾಕಿ ಬಿಲ್ ಪಾವತಿಗೆ ಒತ್ತಾಯಿಸುತ್ತಿದ್ದಾರೆ.
ರೈತಸಂಘದ ಜಿಲ್ಲಾಧ್ಯಕ್ಷ ಬಸವಂತ ಕಾಂಬಳೆ, ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ದುಂಡಪ್ಪ ಯರಗಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ರೈತಮುಖಂಡರಾದ ಹನಮಂತ ನಬಾಬ, ಸುಭಾಷ ಶಿರಬೂರ, ಎ.ಜಿ.ಪಾಟೀಲ ಸೇರಿದಂತೆ ಇತರರು ಇದ್ದರು.
ಬಾಕಿ ಹಣಕ್ಕಾಗಿ ಕರ್ಖಾನೆ ಎದುರು ರೈತರ ಪ್ರತಿಭಟನೆ
ಬಾಕಿ ಹಣಕ್ಕಾಗಿ ಕರ್ಖಾನೆ ಎದುರು ರೈತರ ಪ್ರತಿಭಟನೆ
Latest News
ಅರ್ಜುನ ಆಸ್ಪತ್ರೆ ಸಹಯೋಗ: ನವಜಾತ ಶಿಶುಗಳ ನಿಯಮಿತ ಆರೈಕೆ ಅಗತ್ಯ-ಡಾ.ಪರಶುರಾಮ
ಮುದ್ದೇಬಿಹಾಳ : ನವಜಾತ ಶಿಶುಗಳ ನಿಯಮಿತ ಆರೈಕೆಯಿಂದ ಆರೋಗ್ಯಪೂರ್ಣವಾದ ಮಗು ಸಮಾಜದಲ್ಲಿ ಬೆಳವಣಿಗೆ ಹೊಂದಲು
ಸಿಂಗಲ್ ಟೆಂಡರ್ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ
ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ.
ನ.17 ರಂದು ಆಶಾ ಕಾರ್ಯಕರ್ತೆಯರಿಗೆ ನವಜಾತ ಶಿಶುಗಳ ಆರೈಕೆ ಉಚಿತ ತರಬೇತಿ ಶಿಬಿರ
ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್
ಕೊಣ್ಣೂರು ಪಿಕೆಪಿಎಸ್ಗೆ ಅವಿರೋಧ ಆಯ್ಕೆ
ಮುದ್ದೇಬಿಹಾಳ : ತಾಲ್ಲೂಕಿನ ಕೊಣ್ಣೂರು ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಗೆ
ಕಬ್ಬು ತುಂಬಿದ್ದ ಟ್ರ್ಯಾಲಿ ಪಲ್ಟಿ: ಕಾರ್ಖಾನೆ ಕಾರ್ಮಿಕ ದುರ್ಮರಣ
ಮುದ್ದೇಬಿಹಾಳ : ಕಬ್ಬನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರ್ಯಾಲಿ ಕಬ್ಬಿನ ರಾಶಿ ಸಮೇತ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗರಸಂಗಿ ಕ್ರಾಸ್ ಬಳಿ ನ.12ರ ಮಂಗಳವಾರ ಸಂಜೆ ಸುಮಾರು 7 ಗಂಟೆಗೆ ನಡೆದಿದೆ.ತಾಲ್ಲೂಕಿನ ಹಿರೇಮುರಾಳ ಗ್ರಾಮದ ಸಂಗಮೇಶ ಚಲವಾದಿ (35) ಮೃತಪಟ್ಟ ವ್ಯಕ್ತಿ.ಸಂಗಮೇಶ, ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಜೆಸಿಬಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ತನ್ನ ಕೆಲಸ ಮುಗಿದ ನಂತರ ಬೈಕ್ ನಲ್ಲಿ ತನ್ನೂರಿಗೆ ಹೊರಟಿದ್ದರು. ಎದುರಿಗೆ ಕಬ್ಬು
ಮುದ್ದೇಬಿಹಾಳ : ಕುಂಟೋಜಿ ಗ್ರಾ.ಪಂ ಉಪ ಚುನಾವಣೆಈ ಕಾರಣಕ್ಕೆ ಅಭ್ಯರ್ಥಿ ನಾಮಪತ್ರ ರಿಜೆಕ್ಟ್…!
ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ಆಯ್ಕೆ ಬಯಸಿ ಸಲ್ಲಿಕೆಯಾಗಿದ್ದ ಎರಡು ನಾಮಪತ್ರಗಳಲ್ಲಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ಮದ್ಯಾಹ್ನ 1 ಗಂಟೆಯಿಂದ ನಾಮಪತ್ರಗಳ ಪರಿಶೀಲನೆ ಕಾರ್ಯವನ್ನು ನಾಮಪತ್ರ ಸಲ್ಲಿಸಿದ್ದ ಶಾಂತಾ ಮದರಿ ಹಾಗೂ ಕವಿತಾ ಶಿರಗುಪ್ಪಿ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿಗಳು ನಡೆಸಿದರು.ಈ ವೇಳೆ ಕವಿತಾ ಶಿರಗುಪ್ಪಿ ಅವರು ಸಲ್ಲಿಸಿದ್ದ ನಾಮಪತ್ರದ ಜೊತೆಗೆ ಮೀಸಲಾತಿ