SC, ST ವಿದ್ಯಾರ್ಥಿಗಳಿಗೆ ನಿರಾಸೆ.. ₹50 ಲಕ್ಷ ನೀಡುವ ಸ್ಕೀಮ್ಗೆ ಕೊಕ್..

SC, ST ವಿದ್ಯಾರ್ಥಿಗಳಿಗೆ ನಿರಾಸೆ.. ₹50 ಲಕ್ಷ ನೀಡುವ ಸ್ಕೀಮ್ಗೆ ಕೊಕ್..

ಬೆಂಗಳೂರು: ಮೆಡಿಕಲ್‌ ಕಾಲೇಜು ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಎಸ್ಸಿ, ಎಸ್ಟಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50 ಲಕ್ಷ ರೂಪಾಯಿವರೆಗೆ ಕಾಲೇಜು ಶುಲ್ಕ ಪಾವತಿಸುವ ಸಮಾಜ ಕಲ್ಯಾಣ ಇಲಾಖೆಯ ಪ್ರೋತ್ಸಾಹಧನ ಯೋಜನೆಯನ್ನು ಆರ್ಥಿಕ ಇಲಾಖೆಯು ತಿರಸ್ಕರಿಸಿದೆ.

ಸಮಾಜ ಕಲ್ಯಾಣ ಇಲಾಖೆಯು ಅ.24ರಂದು ಹೊರಡಿಸಿರುವ ‘ಸೇರ್ಪಡೆ ಆದೇಶ’ದ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.95ರಷ್ಟು ಅಂಕ ಪಡೆದು, ನೀಟ್ ಪರೀಕ್ಷೆಯ ರ್ಯಾಂಕ್‌ನಿಂದ ಸರ್ಕಾರಿ ಕೋಟಾದಡಿ ಸೀಟ್ ಲಭ್ಯವಾಗದೆ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ಕಾಲೇಜು ಶುಲ್ಕ ಪಾವತಿಸಲು 25 ಲಕ್ಷ ಪ್ರೋತ್ಸಾಹ ಧನ ನೀಡಬೇಕು. ಅಲ್ಲದೇ, ಆ ವಿದ್ಯಾರ್ಥಿ 1ನೇ ವರ್ಷದ ಪರೀಕ್ಷೆಯಲ್ಲಿ ಶೇ.60 ರಷ್ಟು ಅಂಕ ಪಡೆದರೆ ಪುನಃ 25 ಲಕ್ಷ ರೂಪಾಯಿ ಮಂಜೂರು ಮಾಡಬೇಕು ಎಂದು ತಿಳಿಸಲಾಗಿತ್ತು. ಆದರೆ, ಈ ಆದೇಶ ಹೊರಡಿಸಿದ ಎರಡೇ ದಿನಗಳಲ್ಲಿ ಅಂದರೆ ಅ.26ರಂದು ಹಣಕಾಸು ಇಲಾಖೆಯು ಪ್ರಸ್ತಾವನೆಯನ್ನು ತಿರಸ್ಕರಿಸಿದೆ.

ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯೊಂದಿಗೆ ಮೆರಿಟ್ ಆಧಾರದ ಮೇಲೆ ಹಾಸ್ಟೆಲ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೂಲಸೌಕರ್ಯ ಸುಧಾರಣೆಗಾಗಿ ಅನುದಾನ ಕೋರಿರುವ ಅನೇಕ ಪ್ರಸ್ತಾವನೆಗಳು ಬಾಕಿ ಇವೆ. ಇಂತಹ ಸಂದರ್ಭದಲ್ಲಿ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರೋತಾಹಧನ ನೀಡುವ ಯೋಜನೆಯನ್ನು ಕೈಬಿಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನುಸಾರ ಈ ಕ್ರಮ ವಹಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಗೆ ಆರ್ಥಿಕ ಇಲಾಖೆ ತಿಳಿಸಿದೆ ಎಂದು ಮೂಲಗಳಿಂದ ಖಚಿತವಾಗಿದೆ.

ಮೆರಿಟ್ ಸೀಟು ಪಡೆದವರಿಗೆ ಸಿಗೋದು ₹2 ಲಕ್ಷ!

ಇಲಾಖೆಯು ಹಾಲಿ ಹೊಂದಿರುವ ಯೋಜನೆಯಡಿಯಲ್ಲಿ ಕಠಿಣವಾದ ಸ್ಪರ್ಧಾತ್ಮಕ ಪ್ರವೇಶಪರೀಕ್ಷೆಗಳನ್ನು ಬರೆದು ಐಐಟಿ, ಐಐಎಂ, ಐಐಎಸಿ, ಎನ್‌ಐಟಿ ಮುಂತಾದಡೆ ಸೀಟು ಪಡೆಯುವ ಪ್ರತಿಭಾನ್ವಿತರಿಗೆ ಹಾಗೂ ನೀಟ್ ಮೂಲಕ ಸರ್ಕಾರಿ ಸೀಟು ಪಡೆದು ಎಂಬಿಬಿಎಸ್ ಓದುವವರಿಗೆ 2 ಲಕ್ಷ ರು. ಪ್ರೋತ್ಸಾಹಧನ ನೀಡ ಲಾಗುತ್ತಿದೆ. ಹೀಗಿರುವಾಗ ಆಡಳಿತ ಮಂಡಳಿ ಕೋಟಾದವರಿಗೆ 50 ಲಕ್ಷ ರು. ಪ್ರೋತ್ಸಾಹಧನ ನೀಡುವುದು ಅಸಮಂಜಸವಾಗುತ್ತದೆ ಎನ್ನುವ ಕಾರಣಕ್ಕೆ ಆರ್ಥಿಕ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

Latest News

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಸಾಯಿ ಬಡಾವಣೆ ನಿವಾಸಿ ಮಹಿಬೂಬ ಕುಮಸಿ ಅವರ ಮನೆಯಲ್ಲಿದ್ದ ಫ್ರಿಜ್, ಫ್ಯಾನ್ ಸೇರಿದಂತೆ ಮನೆ ಬಳಕೆ ವಸ್ತುಗಳು ಹಾನಿಯಾಗಿವೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ನಾಗೇಶ ರಾಠೋಡ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು.