25 ಸಾವಿರ ರೂ.ಮಾನವೀಯ ನೆರವು: ಕಾರ್ಮಿಕರ ಕುಟುಂಬಕ್ಕೆ ಅಸ್ಕಿ ಫೌಂಡೇಶನ್ ಸಾಂತ್ವನ

25 ಸಾವಿರ ರೂ.ಮಾನವೀಯ ನೆರವು: ಕಾರ್ಮಿಕರ ಕುಟುಂಬಕ್ಕೆ ಅಸ್ಕಿ ಫೌಂಡೇಶನ್ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಹೊರವಲಯದ ಅಮರಗೋಳ ಕ್ರಾಸ್‌ನಲ್ಲಿ ಗೂಡ್ಸ್ ವಾಹನ ಪಲ್ಟಿಯಾಗಿ ಸಾವನ್ನಪ್ಪಿದ್ದ ಮಹಿಳೆ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಅಸ್ಕಿ ಫೌಂಡೇಶನ್ ಅಧ್ಯಕ್ಷ , ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸಾಂತ್ವನ ಹೇಳಿದರು.

ಇಲ್ಲಿನ ಸರ್ಕಾರಿ ಆಸ್ಪತ್ರೆಯ ಶವಾಗಾರದ ಸಮೀಪದಲ್ಲಿ ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಮೃತ ಹವಾಲ್ದಾರ್ ಕುಟುಂಬಕ್ಕೆ 25ಸಾವಿರ ರೂ.ಆರ್ಥಿಕ ಮಾನವೀಯ ನೆರವು ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿತ್ಯದ ಕೂಲಿ ನಂಬಿ ಬೇರೆ ತಾಲ್ಲೂಕಿಗೆ ಉದ್ಯೋಗಕ್ಕೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿರುವುದು ದುರದೃಷ್ಟಕರ ಸಂಗತಿ.ಘಟನೆಯನ್ನು ಶಾಸಕರ ಗಮನಕ್ಕೆ ತರಲಾಗಿದ್ದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸಹಾಯ ಒದಗಿಸುವ ಕುರಿತು ವಿನಂತಿಸಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ , ಮುಖಂಡ ಬಸಲಿಂಗಪ್ಪ ರಕ್ಕಸಗಿ, ವೆಂಕಟೇಶ ಭಜಂತ್ರಿ, ಎಂ.ಎಚ್.ಹಾಲ್ಯಾಳ, ಎಂ.ಎಸ್.ಕತ್ತಿ ಮೊದಲಾದವರು ಇದ್ದರು.

Latest News

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ :                                      ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ : ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಮುದ್ದೇಬಿಹಾಳ : ಭೀಕರ ಬರಗಾಲದ ಸಮಯದಲ್ಲಿ ನೇಕಾರರಿಗೂ ಸಮರ್ಪಕ ಕಚ್ಚಾನೂಲು,ಬೀಮ್ ಪೂರೈಕೆ ಆಗುತ್ತಿಲ್ಲ.ಕೈಮಗ್ಗ ಹಾಗೂ

ಕಲಾಂ ಮೈನಾರಿಟಿ ಪತ್ತಿನ ಸಹಕಾರಿ ಸಂಘದಿoದ 3ಕೋಟಿ ಗೂ ಅಧಿಕ ರೂ.ಸಾಲ ಹಂಚಿಕೆ

ಕಲಾಂ ಮೈನಾರಿಟಿ ಪತ್ತಿನ ಸಹಕಾರಿ ಸಂಘದಿoದ 3ಕೋಟಿ ಗೂ ಅಧಿಕ ರೂ.ಸಾಲ ಹಂಚಿಕೆ

ಮುದ್ದೇಬಿಹಾಳ : ತಾಲೂಕಿನ ಹಿರೇಮುರಾಳದ ಕಲಾಂ ಅಲ್ಪಸಂಖ್ಯಾತ ಪತ್ತಿನ ಸಹಕಾರ ಸಂಘ ನಿಯಮಿತ 9

ಉದ್ಯಮಿ ಶರಣು ಸಜ್ಜನರಿಗೆ ಅಭಿನಂದನೆ:                                       ‘ನಿನ್ನ ನೋಡಿಕೊಳ್ತೀನಿ ಅನ್ನೋರು ಯಾರೂ ಉಳಿದಿಲ್ಲ’-ಕೂಚಬಾಳ

ಉದ್ಯಮಿ ಶರಣು ಸಜ್ಜನರಿಗೆ ಅಭಿನಂದನೆ: ‘ನಿನ್ನ ನೋಡಿಕೊಳ್ತೀನಿ ಅನ್ನೋರು ಯಾರೂ ಉಳಿದಿಲ್ಲ’-ಕೂಚಬಾಳ

ಮುದ್ದೇಬಿಹಾಳ : ಸಮಾಜದಲ್ಲಿ ನಿನ್ನ ನೋಡಿಕೊಳ್ತೀನಿ ಎಂದವರು ಯಾರೂ ಉಳಿದಿಲ್ಲ. ಬಾಗಿದ್ದು ಮಾತ್ರ ಬಹಳ

9.49 ಲಕ್ಷ ರೂ.ಲಾಭ :                                                           ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

9.49 ಲಕ್ಷ ರೂ.ಲಾಭ : ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

ಮುದ್ದೇಬಿಹಾಳ : ಈ ಆರ್ಥಿಕ ವರ್ಷದಲ್ಲಿ ಒಟ್ಟು 4.47 ಕೋಟಿ ರೂ.ಸಾಲ ರೈತರಿಗೆ ಹಂಚಿಕೆ

ನಾಗರಬೆಟ್ಟ ಏತ ನೀರಾವರಿ ಯೋಜನೆ:                                ಅ.5ರೊಳಗೆ ಬಾಕಿ ಕೆಲಸ ಪೂರ್ಣಗೊಳಿಸದಿದ್ದರೆ ಉಗ್ರ ಹೋರಾಟ-ಶಾಂತಗೌಡ ಪಾಟೀಲ್

ನಾಗರಬೆಟ್ಟ ಏತ ನೀರಾವರಿ ಯೋಜನೆ: ಅ.5ರೊಳಗೆ ಬಾಕಿ ಕೆಲಸ ಪೂರ್ಣಗೊಳಿಸದಿದ್ದರೆ ಉಗ್ರ ಹೋರಾಟ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ 2018ರಲ್ಲಿಯೇ ಟೆಂಡರ್ ಆಗಿದ್ದು ಕಳೆದ ಎಂಟು ವರ್ಷಗಳಿಂದ ರೈತರ ಜಮೀನಿಗೆ ಅತ್ತ ಹನಿ ನೀರೂ ಹರಿದಿಲ್ಲ,ಇತ್ತ ಪರಿಹಾರವೂ ಸಿಕ್ಕಿಲ್ಲ.ಅ.5ರವರೆಗೆ ಬಾಕಿ ಕೆಲಸ ಪೂರ್ಣಗೊಳಿಸದಿದ್ದರೆ ನಾಗರಬೆಟ್ಟದಲ್ಲಿ ರೈತರೊಂದಿಗೆ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ಪಲ್ಲವಿ ಹೊಟೇಲ್ ಸಭಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 14 ಹಳ್ಳಿಗಳ

ಸೆ.20 ರಂದು ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಸೆ.20 ರಂದು ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಮುದ್ದೇಬಿಹಾಳ : ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಏಕಲವ್ಯ ರೋಲರ್ ಸ್ಕೇಟಿಂಗ್ ಅಕಾಡೆಮಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಸೆ.20ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರಾಟೆ ಶಿಕ್ಷಕರ ಸಂಘದ ವಕ್ತಾರ ಶಿವಕುಮಾರ ಶಾರದಳ್ಳಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ