ವಿಶೇಷ ವರದಿ-ಶಂಕರ ಹೆಬ್ಬಾಳ
ಮುದ್ದೇಬಿಹಾಳ : ತೀವ್ರ ಕುತೂಹಲ ಕೆರಳಿಸಿದ್ದ ಮುದ್ದೇಬಿಹಾಳ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕೃಷಿ ಇಲಾಖೆಯ ಅಧಿಕಾರಿ ಅರವಿಂದ ಹೂಗಾರ ಅವಿರೋಧ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029 ನೇ ಅವಧಿಗೆ ಮುದ್ದೇಬಿಹಾಳ ತಾಲೂಕಿನ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಆರೋಗ್ಯ ಇಲಾಖೆಯಿಂದ ಆನಂದಗೌಡ ಬಿರಾದಾರ, ಕೃಷಿ ಇಲಾಖೆಯಿಂದ ಅರವಿಂದ ಹೂಗಾರ ಹಾಗೂ ಶಿಕ್ಷಣ ಇಲಾಖೆಯಿಂದ ಬಸನಗೌಡ ಮುದ್ನೂರ ನಾಮಪತ್ರ ಸಲ್ಲಿಸಿದ್ದರು.
ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳಲು ಸೋಮವಾರ ಸಂಜೆಯವರೆಗೂ ನಡೆದ ಪ್ರಕ್ರಿಯೆಯಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದ ಬಸನಗೌಡ ಮುದ್ನೂರ ಹಾಗೂ ಆನಂದಗೌಡ ಬಿರಾದಾರ ಅವರಿಬ್ಬರು ಹೂಗಾರ ಅವರನ್ನು ಬೆಂಬಲಿಸಿ ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದ ಕಾರಣ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ ಎಸ್.ಆರ್.ಕಟ್ಟೀಮನಿ ತಿಳಿಸಿದರು.
ಸಹಾಯಕರಾಗಿ ಭೀಮಸಿ ಹೂಗಾರ ಕಾರ್ಯನಿರ್ವಹಿಸಿದರು.
ನೂತನ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಅರವಿಂದ ಹೂಗಾರ ಅವರನ್ನು ಆರೋಗ್ಯ ಇಲಾಖೆಯ ನೌಕರರು ಅಭಿನಂದಿಸಿದರು.
—
ಸಂಘಟನಾ ಚತುರರು, ಸದ್ದಿಲ್ಲದೇ ನೌಕರರ ಹಿತ ಬಯುಸುವವರು :
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ತಾಲ್ಲೂಕು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅರವಿಂದ ಹೂಗಾರ ಸಂಘಟನಾ ಚತುರರು.ಸರಳ ಜೀವಿಗಳು ಮೃದು ಸ್ವಭಾವದವರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬ್ಯಾಂಕ್ ನ ಅಧ್ಯಕ್ಷರಾಗಿ, ಹಾಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಶೇಷ ಎಂದರೆ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ಆಪ್ತರಾಗಿ, ಸಚಿವ ಎಚ್.ಕೆ.ಪಾಟೀಲ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಹೂಗಾರ ಅವರಿಗೆ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಸ್ಥಾನ ಅನಾಯಾಸವಾಗಿ ಲಭಿಸಿರುವುದು ಅವರ ಸಂಘಟನಾ ಚಾತುರ್ಯಕ್ಕೆ ದೊರೆತ ಮನ್ನಣೆ ಎಂದೇ ವಿಶ್ಲೇಷಿಸಲಾಗುತ್ತಿದೆ.
—
ಕೃಷಿ ಇಲಾಖೆಯ ಹಿಂದಿನ ಅಧಿಕಾರಿ ಎಸ್.ಆರ್.ಕಟ್ಟೀಮನಿ ಕಳೆದ 4 ಅವಧಿಯಲ್ಲಿ ತಾಲ್ಲೂಕು ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು.ಇದೀಗ ಹೂಗಾರ ಅವರೂ ಅದೇ ಇಲಾಖೆಯಿಂದ ಬಂದಿದ್ದು ಅಧ್ಯಕ್ಷ ಸ್ಥಾನ ಕೃಷಿ ಇಲಾಖೆಯಲ್ಲಿ ಉಳಿದಂತಾಗಿದೆ.
ಕೃಷಿ ಇಲಾಖೆಯಲ್ಲೇ ಉಳಿದ ಅಧ್ಯಕ್ಷ ಸ್ಥಾನ: ಅರವಿಂದ ಹೂಗಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ .
ಕೃಷಿ ಇಲಾಖೆಯಲ್ಲೇ ಉಳಿದ ಅಧ್ಯಕ್ಷ ಸ್ಥಾನ: ಅರವಿಂದ ಹೂಗಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ .
Latest News
ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ
ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ
ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ
ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ
ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04
ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ
ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ
ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ
ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ
ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.
ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ







