ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ಮತ್ತು ಅರ್ಜುನ ಆಸ್ಪತ್ರೆ ಇವರ ಸಹಯೋಗದಲ್ಲಿ ಆಶಾ ಕಾರ್ಯಕರ್ತೆಯರಿಗೆ ನವಜಾತ ಶಿಶುಗಳ ಆರೈಕೆ ಉಚಿತ ತರಬೇತಿ ಶಿಬಿರವನ್ನು ನ.17 ರಂದು ಬೆಳಗ್ಗೆ 11.30ಕ್ಕೆ ಪಟ್ಟಣದ ಬೆಂಗಳೂರು ಬೇಕರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನಿರ್ದೇಶಕ ಕುಮಾರ ವಡ್ಡರ ಹೇಳಿದರು.
ಪಟ್ಟಣದ ಅರ್ಜುನ್ ಆಸ್ಪತ್ರೆಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ತಾಲ್ಲೂಕಿನ ಎಲ್ಲ ಪಿಎಚ್‌ಸಿ ಆಶಾಗಳಿಗೆ ತರಬೇತಿ ಏರ್ಪಡಿಸಲಾಗಿದ್ದು ಮೊದಲ ಹಂತದಲ್ಲಿ ಗರಸಂಗಿ ಹಾಗೂ ತಂಗಡಗಿ ಪಿ.ಎಚ್.ಸಿ ವ್ಯಾಪ್ತಿಯಲ್ಲಿ ಬರುವ ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗುತ್ತದೆ. ಚಿಕ್ಕಮಕ್ಕಳ ತಜ್ಞ ವೈದ್ಯರಾದ ಡಾ.ಪರಶುರಾಮ ವಡ್ಡರ ಅವರು ಮಾರ್ಗದರ್ಶನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂ.ಜಿ.ಎA.ಕೆ ಕಾಲೇಜಿನ ಪ್ರಾಚಾರ್ಯ ಎಸ್.ಕೆ.ಹರನಾಳ, ಟ್ರಸ್ಟ್ ಅಧ್ಯಕ್ಷ ಯಮನಪ್ಪ ವಡ್ಡರ ಆಗಮಿಸುವರು ಎಂದು ಅವರು ತಿಳಿಸಿದರು.ಈ ಸಂದರ್ಭದಲ್ಲಿ ಅರ್ಜುನ ಆಸ್ಪತ್ರೆ ಸಿಬ್ಬಂದಿ ಇದ್ದರು.