ಪತ್ರಕರ್ತರಿಗೆ ಸಿರಿ ಕಿಟ್ ವಿತರಣೆ: ಧರ್ಮಸ್ಥಳ ಸಂಸ್ಥೆಯಿಂದ ಜನೋಪಯೋಗಿ ಕಾರ್ಯ-ಸಂತೋಷಕುಮಾರ ರೈ

ಪತ್ರಕರ್ತರಿಗೆ ಸಿರಿ ಕಿಟ್ ವಿತರಣೆ: ಧರ್ಮಸ್ಥಳ ಸಂಸ್ಥೆಯಿಂದ ಜನೋಪಯೋಗಿ ಕಾರ್ಯ-ಸಂತೋಷಕುಮಾರ ರೈ

Ad
Ad

ಮುದ್ದೇಬಿಹಾಳ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ,ಔದ್ಯೋಗಿಕ ಚಟುವಟಿಕೆಗಳಿಗೆ ನೆರವು ನೀಡುವ ಮೂಲಕ ಜನಮನ್ನಣೆ ಪಡೆದುಕೊಂಡಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ ಹೇಳಿದರು.

Ad
Ad

ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ನಿಂದ ಮಂಗಳವಾರ ಕಾರ್ಯನಿರತ ಪತ್ರಕರ್ತರಿಗೆ ಸಿರಿ ಕಿಟ್‌ಗಳನ್ನು ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಒಂದು ಕೆರೆ ಪುನಶ್ಚೇತನ, ಸುಜ್ಞಾನ ನಿಧಿ ಯೋಜನೆಯಡಿ 214 ವಿದ್ಯಾರ್ಥಿಗಳಿಗೆ, ಜ್ಞಾನ ದೀಪ ಶಿಕ್ಷಕರ ಸಂಖ್ಯೆ, ಮಾಶಾಸನ, ದೇವಸ್ಥಾನಗಳಿಗೆ ಅನುದಾನ, ವಾತ್ಸಲ್ಯ ಮನೆ ರಚನೆ,ಶಾಲೆಗಳಿಗೆ ಡೆಸ್ಕ್ ವಿತರಣೆ, ಜನಮಂಗಲ ಸಲಕರಣೆಗಳ ವಿತರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಸಂಸ್ಥೆಯ ಪೂಜ್ಯರಾದ ವೀರೇಂದ್ರ ಹೆಗ್ಗಡೆ ಅವರು ಕೈಗೊಂಡಿದ್ದಾರೆ ಎಂದರು.

ಹಿರಿಯ ಪತ್ರಕರ್ತರಾದ ಡಿ.ಬಿ.ವಡವಡಗಿ, ಶಂಕರ ಹೆಬ್ಬಾಳ, ಪರಶುರಾಮ ಕೊಣ್ಣೂರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ನಿಜವಾದ ಅರ್ಥದಲ್ಲಿ ಗ್ರಾಮಗಳ ಸಬಲೀಕರಣದಲ್ಲಿ ತೊಡಗಿಕೊಂಡಿದೆ ಎಂದರು.

ಇದೇ ಸಮಯದಲ್ಲಿ ಕಾರ್ಯನಿರತ ಪತ್ರಕರ್ತರುಗಳಿಗೆ ಸಂಸ್ಥೆಯಿAದ ಸಿರಿ ಕಿಟ್‌ಗಳನ್ನು ವಿತರಿಸಲಾಯಿತು.ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ನಾಗೇಶ ಎನ್.ಪಿ., ಪತ್ರಕರ್ತರಾದ ಗುಲಾಮಮೊಹ್ಮದ ದಫೇದಾರ, ಚೇತನ ಶಿವಶಿಂಪಿ,ನಾರಾಯಣ ಮಾಯಾಚಾರಿ,ಮುತ್ತು ವಡವಡಗಿ,ಲಾಡ್ಲೇಮಶ್ಯಾಕ ನದಾಫ, ಬಸವರಾಜ ಕುಂಬಾರ, ಸಾಗರ ಉಕ್ಕಲಿ, ಮಾರುತಿ ಹಿಪ್ಪರಗಿ, ಅನೀಲ ತೇಲಂಗಿ, ರವೀಂದ್ರ ನಂದೆಪ್ಪನವರ, ಹಣಮಂತ ನಲವಡೆ, ಮುತ್ತು ಕನ್ನೂರ, ವಿನಯ ಕಡ್ಲಿಮಟ್ಟಿ ಮೊದಲಾದವರು ಇದ್ದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500