ಊರಿನ ಹಿರಿಯರಿಂದ ಮತಯಾಚನೆ: ಶೃಂಗಾರಗೌಡ್ರ ಪೆನಲ್ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ

ಊರಿನ ಹಿರಿಯರಿಂದ ಮತಯಾಚನೆ: ಶೃಂಗಾರಗೌಡ್ರ ಪೆನಲ್ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸಿರುವ ದಿ.ಎಸ್.ಜಿ.ಪಾಟೀಲ್ ಶೃಂಗಾರಗೌಡ ಪೆನಲ್‌ದ ಅಭ್ಯರ್ಥಿಗಳು ಸೋಮವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರೋಡ್ ಶೋ ನಡೆಸಿ ಕೈ ಮುಗಿದು ಮತಯಾಚಿಸಿದರು.
ಪಟ್ಟಣದ ಬಜಾರ ಹನುಮಾನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರ
ಕಾರ್ಯ ಆರಂಭಿಸಿದ ಅಭ್ಯರ್ಥಿಗಳು ಬ್ಯಾಂಕಿನ ಏಳ್ಗೆಗೆ , ಗ್ರಾಹಕರ ಅಭಿವೃದ್ಧಿಗೆ ತಮ್ಮನ್ನು ಬೆಂಬಲಿಸುವAತೆ ಮನವಿ ಮಾಡಿಕೊಂಡರು.

ಹಾಲಿ ಅಧ್ಯಕ್ಷ ಸತೀಶ ಓಸ್ವಾಲ್, ನಿರ್ದೇಶಕ ರಾಜಶೇಖರ ಕರಡ್ಡಿ ಮಾತನಾಡಿ, ಊರಿನ ಹಿರಿಯರ ಸಲಹೆಯಂತೆ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರ ಊರಿನ ಗಣ್ಯರು ಮತಯಾಚನೆಗೆ ಆಗಮಿಸಿರುವುದು ನಮಗೆ ಬಲ ತಂದುಕೊಟ್ಟಿದೆ. ಪಾರದರ್ಶಕವಾಗಿ ವ್ಯವಹಾರ ನಡೆಸಿದ್ದರಿಂದಲೇ ಗ್ರಾಹಕರು ನಮ್ಮ ಮೇಲೆ ವಿಶ್ವಾಸ ಇರಿಸಿದ್ದು ಅದನ್ನು ಉಳಿಸಿಕೊಂಡು ಮುಂದೆ ಸಾಗುವುದಾಗಿ ಹೇಳಿದರು.

ಪಟ್ಟಣದ ಪ್ರಮುಖ ರಸ್ತೆ, ಸರಾಫ ಬಜಾರ, ಅಂಬೇಡ್ಕರ್ ಸರ್ಕಲ್, ಏಪಿಎಂಸಿಯಲ್ಲಿ ಅಭ್ಯರ್ಥಿಗಳು ಮತಯಾಚನೆ ಮಾಡಿದರು.ಪೆನಲ್‌ನ ಅಭ್ಯರ್ಥಿಗಳು, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಬಿ.ಪಿ.ಕುಲಕರ್ಣಿ, ಎಂ.ಬಿ.ನಾವದಗಿ, ಬಸವರಾಜ ನಂದಿಕೇಶ್ವರಮಠ, ಬಾಬು ಬಿರಾದಾರ, ವಕೀಲರಾದ ಎಂ.ಎಸ್.ನಾವದಗಿ,ಗುರುಸ್ವಾಮಿ ಬೂದಿಹಾಳಮಠ, ಚನ್ನಬಸ್ಸು ಗುಡ್ಡದ, ಎ.ಗಣೇಶ ನಾರಾಯಣಸ್ವಾಮಿ, ವಾಯ್.ಎಚ್.ವಿಜಯಕರ್, ಹುಲಗಪ್ಪ ನಾಯ್ಕಮಕ್ಕಳ,ಮಹಾಂತೇಶ ಬೂದಿಹಾಳಮಠ, ಶರಣು ಸಜ್ಜನ ಮೊದಲಾದವರು ಪಾಲ್ಗೊಂಡಿದ್ದರು.

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್