ನಾಗರಬೆಟ್ಟ : ಜ.5 ರಂದು RE-TALENT EXAM

ನಾಗರಬೆಟ್ಟ : ಜ.5 ರಂದು RE-TALENT EXAM

ಮುದ್ದೇಬಿಹಾಳ (ವಿಜಯಪುರ ಜಿಲ್ಲೆ) : ತಾಲ್ಲೂಕಿನ ನಾಗರಬೆಟ್ಟದ ಬೆಟ್ಟದ ಪಕ್ಕದಲ್ಲಿರುವ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಜ.5 ರಂದು ರಿ ಟ್ಯಾಲೆಂಟ್ ಅವಾರ್ಡ್-2025 ಪರೀಕ್ಷೆ ನಡೆಯಲಿದೆ.

ಈ ಕುರಿತು ಡಿಸಿಜಿ ನ್ಯೂಸ್‌ನೊಂದಿಗೆ ಮಾಹಿತಿ ಹಂಚಿಕೊAಡಿರುವ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಅವರು, ಡಿ.22, ರಂದು ಟ್ಯಾಲೆಂಟ್ ಸರ್ಚ್ ಸ್ಕಾಲರಶಿಪ್ ಪರೀಕ್ಷೆ ಹಮ್ಮಿಕೊಳ್ಳಲಾಗಿತ್ತು. ಅಂದು 3555 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಆದರೆ ಸಂಸ್ಥೆ ನಿಗದಿಪಡಿಸಿದ್ದ ಶೇಕಡವಾರು ಅಂಕ ಗಳಿಕೆಯಲ್ಲಿ ವಿದ್ಯಾರ್ಥಿಗಳಿಗೆ ಸಾಧ್ಯವಾಗಿರಲಿಲ್ಲ.ಆದರೆ ಸಂಸ್ಥೆಯವರು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಿ 3555 ವಿದ್ಯಾರ್ಥಿಗಳ ಪೈಕಿ ಮೊದಲ 200 ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳನ್ನು ಮರು ಪರೀಕ್ಷೆಗೆ ಆಯ್ಕೆ ಮಾಡಲಾಗಿದೆ.

ಅದರಲ್ಲಿ 80 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಯೋಜನೆಯಡಿ ಆಯ್ಕೆ ಮಾಡಲಾಗುತ್ತದೆ.ಅದರಲ್ಲಿ ಮೊದಲ 1-20 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷ ಸಂಪೂರ್ಣ ಊಟ, ವಸತಿಯೊಂದಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ. 20-40 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದವರೆಗಿನ ಉಚಿತ ಶಿಕ್ಷಣ ನೀಡಲಾಗುತ್ತದೆ(ವಸತಿ,ಊಟಕ್ಕೆ ಶುಲ್ಕ ನೀಡಬೇಕು),40-60 ನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶುಲ್ಕದಲ್ಲಿ 90 ಸಾವಿರ ರೂ.ರಿಯಾಯಿತಿ ನೀಡಲಾಗುತ್ತದೆ. 60-80 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶುಲ್ಕದಲ್ಲಿ 25 ಸಾವಿರ ರೂ.ರಿಯಾಯಿತಿ ನೀಡಲು ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಜ.5ರಂದು ಬೆಳಗ್ಗೆ 11 ಗಂಟೆಗೆ ಆಯ್ಕೆಯಾದ 200 ವಿದ್ಯಾರ್ಥಿಗಳನ್ನು ಕರೆಯಿಸಿ ರಿ ಟ್ಯಾಲೆಂಟ್ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಸ್ಥೆಯಿAದ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್ ತಿಳಿಸಿದ್ದಾರೆ.

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,