ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಬ್ಯಾಂಕಿನ ಹೈಕಮಾಂಡ್ ನೀಡುವ ಮೂಲಕ ಜಾಣ ನಡೆ ಅನುಸರಿಸಿದ್ದು, ಅಧಿಕಾರ ಹಂಚಿಕೆ ಸೂತ್ರದಡಿ ಹೊಸ ಅಧ್ಯಕ್ಷರುಗಳನ್ನು ಈ ಐದು ವರ್ಷದ ಅವಧಿಗೆ ಆಯ್ಕೆ ಮಾಡುವ ನಿರ್ಧಾರವನ್ನು ಕೈಗೊಂಡು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ನೂತನ ಅಧ್ಯಕ್ಷರಾಗಿ ಚೆನ್ನಪ್ಪಗೌಡ ಬಿರಾದಾರ, ಉಪಾಧ್ಯಕ್ಷರಾಗಿ ಗುರುಲಿಂಗಪ್ಪಗೌಡ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾಧಿಕಾರಿ ವಿಜಯಕುಮಾರ ಉತ್ನಾಳ ಅವರು ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ಬ್ಯಾಂಕಿನ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಸತೀಶ ಓಸ್ವಾಲ್ ಮಾತನಾಡಿ, ಬ್ಯಾಂಕು ಸದಾ ಅಭಿವೃದ್ಧಿಪಥದತ್ತ ಸಾಗಲು ಸಾಮಾಜಿಕ ನ್ಯಾಯದ ಅಡಿಯಲ್ಲಿ ಎಲ್ಲರಿಗೂ ಅಧಿಕಾರದ ಅವಕಾಶ ದೊರೆಯಬೇಕು ಎಂಬ ನಿಟ್ಟಿನಲ್ಲಿ ಊರಿನ ಹಿರಿಯರು ಕೈಗೊಂಡಿರುವ ನಿರ್ಧಾರಕ್ಕೆ ಬದ್ಧರಾಗಿ ಈ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.ಬ್ಯಾಂಕಿನ ಅಧ್ಯಕ್ಷ ಚೆನ್ನಪ್ಪಗೌಡ ಬಿರಾದಾರ ಮಾತನಾಡಿ, ಬ್ಯಾಂಕಿನ ಐದು ವರ್ಷದ ಅವಧಿಯಲ್ಲಿ ನಾಲ್ವರಿಗೆ ಅಧಿಕಾರ ಹಂಚಿಕೆ ಸೂತ್ರದಡಿ ನಿರ್ದೇಶಕರುಗಳಿಗೆ ಅವಕಾಶ ಕಲ್ಪಿಸಿದ್ದು ತಲಾ ಹದಿನೈದು ತಿಂಗಳಿನAತೆ ಬದಲಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.ಆರಂಭದಲ್ಲಿ ನನಗೆ ಅವಕಾಶ ದೊರೆತಿದ್ದು ಮುಂದಿನ ದಿನಗಳಲ್ಲಿ ಪ್ರಭುರಾಜ ಕಲ್ಬುರ್ಗಿ, ರಾಜಶೇಖರ ಕರಡ್ಡಿ, ನಿಂಗಣ್ಣ ಚಟ್ಟೇರ ಅವರಿಗೆ ಹಿರಿಯರ ಅಣತಿಯಂತೆ ಅಧ್ಯಕ್ಷ ಸ್ಥಾನ ಕಲ್ಪಿಸಲಾಗುವುದು ಅದೇ ರೀತಿ ಉಪಾಧ್ಯಕ್ಷ ಸ್ಥಾನಕ್ಕು ಬದಲಾವಣೆ ಇರಲಿದೆ ಎಂದು ಹೇಳಿದರು.ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಸನ್ಮಾನಿಸಿದರು.

ಜಾಣ ನಡೆ ಅನುಸರಿಸಿದ ಊರ ಹಿರಿಯರು: ಅಧ್ಯಕ್ಷರಾಗಲು ಮೂವರ ಮಧ್ಯೆ ನಾ ಮುಂದೆ ತಾ ಮುಂದೆ ಎಂಬAತೆ ಪೈಪೋಟಿ ಇತ್ತು.ಆದರೆ ಇದಕ್ಕೆ ಆಸ್ಪದ ನೀಡದೇ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಿದ್ದು ಅಲ್ಲದೇ ಅಧಿಕಾರ ಹಂಚಿಕೆಯ ಸೂತ್ರದಡಿ ಅಧ್ಯಕ್ಷರನ್ನು ಬದಲಾಯಿಸಲಾಗುವುದು ಎಂದು ಊರಿನ ಹಿರಿಯರು, ಬ್ಯಾಂಕಿನ ಹಿರಿಯ ನಿರ್ದೇಶಕರು ಮಾತು ಕೊಟ್ಟಿರುವುದು ಇನ್ನುಳಿದ ಆಕಾಂಕ್ಷಿಗಳ ಅಪಸ್ವರಕ್ಕೆ ಆಸ್ಪದ ಸಿಗಲಿಲ್ಲ.ಅಲ್ಲದೇ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆಗೆ ಸಹಕಾರ ನೀಡಿದರು ಎಂಬ ಮಾತುಗಳು ಬಂದವು.

ಈಗಾಗಲೇ ಅಧ್ಯಕ್ಷರಾಗಿ ಎರಡು ಅವಧಿ ಪೂರೈಸಿರುವ ಸತೀಶ ಓಸ್ವಾಲ್, ಸಂಗನಗೌಡ ಬಿರಾದಾರ ಅವರು ಸ್ವಯಂಪ್ರೇರಿತರಾಗಿ ಅಧ್ಯಕ್ಷ ಸ್ಥಾನವನ್ನು ವಿನಯಂದಿAದಲೇ ನಿರಾಕರಿಸಿದರು.ಮತ್ತೊಬ್ಬರಿಗೆ ಅವಕಾಶ ಸಿಗಲಿ, ಬ್ಯಾಂಕಿನ ಪ್ರಗತಿಗೆ ಬೇಕಾದ ಸಹಕಾರ ನೀಡುವುದಾಗಿ ಹೇಳಿದ್ದು ಮಹತ್ವ ಪಡೆದುಕೊಂಡಿದೆ. ಸತೀಶ ಓಸ್ವಾಲ್ ಅವರ ಅಧ್ಯಕ್ಷತೆಯಲ್ಲಿ ಹೂವಿನ ಹಿಪ್ಪರಗಿಯಲ್ಲಿ ಹೊಸ ಶಾಖೆ, ಮುದ್ದೇಬಿಹಾಳದಲ್ಲಿ ಸಭಾಭವನ, ಬ್ಯಾಂಕಿನ ಡಿಜಟಿಲೀಕರಣಕ್ಕೆ ಒತ್ತು ನೀಡಿದ್ದು ಸೇರಿದಂತೆ ಹತ್ತು ಹಲವು ಕಾರ್ಯಗಳು ನಡೆದಿದ್ದು ಹೊಸ ಆಡಳಿತ ಮಂಡಳಿಯವರು ಯಾವ ಕೆಲಸಗಳಿಗೆ ಆದ್ಯತೆ ನೀಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ