Holi, Ramzan Peace Keeping Meeting: Celebration without hurting each other's feelings

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು ಆಯಾ ಧರ್ಮೀಯರು ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆಯಲ್ಲಿ ತೊಡಗಬೇಕು ಎಂದು ಸಿಪಿಐ ಮಹ್ಮದ್ ಫಸೀವುದ್ದೀನ ಹೇಳಿದರು.

ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪಿಎಸ್‌ಐ ಸಂಜಯ ತಿಪರೆಡ್ಡಿ ಹೋಳಿ ಹಾಗೂ ರಂಜಾನ್ ಹಬ್ಬದ ನಿಮಿತ್ಯ ಶಾಂತಿಪಾಲನಾ ಸಭೆಯಲ್ಲಿ ಅವರು ಮಾತನಾಡಿದರು. ಈಗ ಪರೀಕ್ಷೆಯ ಸಮಯವಾಗಿದ್ದು ವಿದ್ಯಾರ್ಥಿಗಳ ಮೇಲೆ ಬಲವಂತದಿAದ ಬಣ್ಣ ಎರಚಬೇಡಿ. ಇಷ್ಟಪಟ್ಟು ಬಣ್ಣದಾಟದಲ್ಲಿ ತೊಡಗಿಕೊಂಡವರನ್ನು ಹಬ್ಬದಲ್ಲಿ ತೊಡಿಸಿಕೊಳ್ಳಿ. ಒತ್ತಾಯಪೂರ್ವಕವಾಗಿ ಬಣ್ಣ ಹಚ್ಚುವುದು ಸರಿಯಲ್ಲ ಎಂದರು.

ಪಿಎಸ್‌ಐ ಸಂಜಯ ತಿಪರೆಡ್ಡಿ ಮಾತನಾಡಿ, ಬಣ್ಣದಾಟದ ನೆಪದಲ್ಲಿ ವಾಹನಗಳನ್ನು ತಡೆದು ಹಣ ವಸೂಲಿಗೆ ಇಳಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.ಹಿಂದೂ ಮುಸ್ಲಿಂ ಬಾಂಧವರು ಸೌಹಾರ್ದತೆಯಿಂದ ಹಬ್ಬದಾಚರಣೆಯಲ್ಲಿ ತೊಡಗಿಸಿಕೊಳ್ಳಿ ಎಂದರು.

ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮುಖಂಡ ರಾಜಶೇಖರ ಹೊಳಿ, ರವೀಂದ್ರ ಬಿರಾದಾರ, ಪರಶುರಾಮ ನಾಲತವಾಡ ಮತ್ತಿತರರು ಮಾತನಾಡಿದರು. ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸದಸ್ಯರು,ಹಿಂದೂ ಹಾಗೂ ಮುಸ್ಲಿಂ ಸಮಾಜದ ಮುಖಂಡರು ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ