FIR against 25 celebrities including Prakash Raj

ಪ್ರಕಾಶ್ ರಾಜ್ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಎಫ್ಐಆರ್

ಪ್ರಕಾಶ್ ರಾಜ್ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಎಫ್ಐಆರ್

ಹೈದರಾಬಾದ್: ಬೆಟ್ಟಿಂಗ್ ಅಪ್ಲಿಕೇಶನ್ ಪ್ರಚಾರ ಮಾಡಿದ ಆರೋಪದ ಮೇಲೆ ಕನ್ನಡ ಚಿತ್ರರಂಗದ ಖ್ಯಾತ ನಟ ಪ್ರಕಾಶ್‌ ರಾಜ್, ನಟರಾದ ವಿಜಯ್‌ ದೇವರಕೊಂಡ, ರಾಣಾ ದಗ್ಗುಭಾಟಿ ಸೇರಿದಂತೆ 25ಕ್ಕೂ ಹೆಚ್ಚು ನಟ-ನಟಿಯರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸಂಬಂಧ 25 ನಟ,ನಟಿಯರ ವಿರುದ್ದ ತೆಲಂಗಾಣದಲ್ಲಿ ಪೊಲೀಸ್ ಕೇಸ್ ಎದುರಿಸುತ್ತಿದ್ದಾರೆ. ಉದ್ಯಮಿ ಫಣೀಂದ್ರ ಶರ್ಮಾ ದೂರು ನೀಡಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಸಂಬ್ರಿಟಿಗಳು ಮತ್ತು ಪ್ರಭಾವಿಗಳಲ್ಲಿ ಪ್ರಣೀತಾ, ನಿಧಿ ಅಗರ್‌ವಾಲ್, ಅನನ್ಯ ನಾಗಲ್ಲ, ಸಿರಿ ಹನುಮಂತು, ಶ್ರೀಮುಖಿ, ವರ್ಷಿಣಿ ಸೌಂದರರಾಜನ್, ವಸಂತಿ ಕೃಷ್ಣನ್, ಶೋಭಾ ಶೆಟ್ಟಿ, ಅಮೃತಾ ಚೌದರಿ, ನಯನಿ ಪಾವನಿ, ನೇಹಾ ಪಠಾಣ್, ಪಾಂಡು, ಪದ್ಮಾವತಿ, ಸನ್ನಿ ಯಾ, ವಿಷ್ಣು, ಸನ್ನಿಯಾ ಪ್ರಿಯಿ, ನಾನು ಶ್ಯಾಮಲಾ, ಟೇಸ್ಟಿ ತೇಜ ಮತ್ತು ಬಂಡಾರು ಶೇಷಾಯನಿ ಸುಪ್ರಿತಾ ಸೇರಿದ್ದಾರೆ.

ಈ ಪ್ಲಾಟ್‌ಫಾರ್ಮ್‌ಗಳು ಸೆಲೆಬ್ರಿಟಿಗಳು ಮತ್ತು ಪ್ರಭಾವಿಗಳ ಸಹಾಯದಿಂದ ಸಾಮಾಜಿಕ ಮಾಧ್ಯಮ ಜಾಹೀರಾತುಗಳ ಮೂಲಕ ತಮ್ಮ ಅಪ್ಲಿಕೇಶನ್‌ಗಳು ಮತ್ತು ವೆಬ್‌ ಸೈಟ್‌ಗಳನ್ನು ಪ್ರಚಾರ ಮಾಡುತ್ತವೆ ಎಂದು ಎಫ್‌ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

“ಈ ಅಕ್ರಮ ವೇದಿಕೆಗಳಲ್ಲಿ ಸಾವಿರಾರು ಲಕ್ಷ ರೂಪಾಯಿಗಳು ಭಾಗಿಯಾಗಿವೆ ಮತ್ತು ಇದು ಅನೇಕ ಕುಟುಂಬಗಳನ್ನು, ವಿಶೇಷವಾಗಿ ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳನ್ನು ಸಂಕಷ್ಟಕ್ಕೆ ದೂಡುತ್ತಿದೆ” ಎಂದು ಆರೋಪಿಸಲಾಗಿದೆ.

ಇನ್ನೂ ವಿಜಯ್ ದೇವರಕೊಂಡ ತಂಡ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಿರುವ ಕುರಿತು ಪ್ರತಿಕ್ರಿಯಿಸಿದೆ.

ವಿಜಯ್ ದೇವರಕೊಂಡ ಅವರು ಕಾನೂನಿನ ಪ್ರಕಾರ ನಡೆಸುವ ಕೌಶಲ್ಯ ಆಧಾರಿತ ಆಟಗಳಿಗೆ ಮಾತ್ರ ಜಾಹೀರಾತು ನೀಡುತ್ತಾರೆ.

ವಿಜಯ್ ದೇವರಕೊಂಡ ಏ.23ಕ್ಕೆ ಪರವಾನಗಿ ಪಡೆದ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿದ್ದಾರೆ. ರಮ್ಮಿ ಕೌಶಲ ಆಧಾರಿತ ಆಟ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಹಲವು ಬಾರಿ ಹೇಳಿದೆ.

ವಿಜಯ್ ದೇವರಕೊಂಡ ಯಾವುದೇ ಕಂಪನಿಯ ಜಾಹೀರಾತು ಅಥವಾ ಜಾಹೀರಾತುದಾರರಾಗಿದ್ದರೂ, ಕಂಪನಿಯು ಕಾನೂನುಬದ್ಧವಾಗಿ ನಡೆಯುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು ನಾವು ಸಂಪೂರ್ಣವಾಗಿ ಪರಿಶೀಲಿಸುತ್ತೇವೆ ಎಂದಿದೆ.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ