Renukacharya Jayanti: The idea of ​​living as one is far away - Nad Gowda

ರೇಣುಕಾಚಾರ್ಯ ಜಯಂತಿ:ಒಂದಾಗಿ ಬಾಳುವ ಕಲ್ಪನೆಯೇ ದೂರ- ನಾಡಗೌಡ

ರೇಣುಕಾಚಾರ್ಯ ಜಯಂತಿ:ಒಂದಾಗಿ ಬಾಳುವ ಕಲ್ಪನೆಯೇ ದೂರ- ನಾಡಗೌಡ

ಮುದ್ದೇಬಿಹಾಳ : ಸಮಾಜ ವಿಘಟಿಸುವ ಶಕ್ತಿಗಳಿಗೆ ಮೊದಲ ಆದ್ಯತೆ ಇಂದು ದೊರೆಯುತ್ತಿದ್ದು ಒಂದಾಗಿ ಬಾಳುವ ಕಲ್ಪನೆಯೇ ದೂರವಾಗುತ್ತಿದೆ ಎಂದು ಶಾಸಕ ಸಿ. ಎಸ್. ನಾಡಗೌಡ ಹೇಳಿದರು.

ಪಟ್ಟಣದ ಎಪಿಎಂಸಿ ಹತ್ತಿರ ಇರುವ ರೇಣುಕಾಚಾರ್ಯರ ದೇವಸ್ಥಾನದ ಜಾಗೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತದ ಪರಂಪರೆಯಲ್ಲಿ ಲಿಂಗಾಯತ ಸಮಾಜ ಭಿನ್ನತೆಗಳಿಂದ ಭಾರತದ ಪರಂಪರೆಯಲ್ಲಿ ಅರಾಜಕತೆಯತ್ತ ಸಾಗುತ್ತಿದ್ದೇವೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾಜಿ ಸೈನಿಕ ರಾಚಯ್ಯ ಹಿರೇಮಠ ಮಾತನಾಡಿ, ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ಕೊಡುವ ಕಾರ್ಯ ಆಗಬೇಕು ಎಂದರು.

ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ್ ನಡಹಳ್ಳಿ ಮಾತನಾಡಿದರು.

ಬಿಲ್‌ಕೆರೂರ ಬಿಲ್ವಾಶ್ರಮದ ಸಿದ್ಧಲಿಂಗ ಶಿವಾಚಾರ್ಯರು. ಹೊಸಮಠದ ಅಮರೇಶ್ವರ ದೇವರು, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಮುಖಂಡರಾದ ಸೋಮನಗೌಡ ಪಾಟೀಲ, ಜಂಗಮ ಸಮಾಜದ ತಾಲ್ಲೂಕು ಅಧ್ಯಕ್ಷ ದಾನಯ್ಯಸ್ವಾಮಿ ಹಿರೇಮಠ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಖಾಸ್ಗತೇಶ್ವರ ಮಠದ ನೀಲಮ್ಮ ವಿರಕ್ತಮಠ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಸಂತಿ ಮಠ, ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕರಾದ ಸಂಗನಗೌಡ ಬಿರಾದಾರ, ವಿಜಯಲಕ್ಷ್ಮಿ ಬೂದಿಹಾಳಮಠ, ಸರ್ವೆಯರ್ ಶೈಲಶ್ರೀ ಹಿರೇಮಠ, ಮಹಿಳಾ ಘಟಕದ ಅಧ್ಯಕ್ಷೆ ಗೌರಮ್ಮ ಶಿವಯೋಗಿಮಠ, ಜಂಗಮ ಸಮಾಜದ ನೌಕರ ಸಂಘದ ಅಧ್ಯಕ್ಷ ಎಂ. ಎಸ್. ತೆಗ್ಗಿನಮಠ ಇದ್ದರು. ಶ್ರಾವಣಿ ಮಹಾಂತೇಶ ಮಠಪತಿ ರೇಣುಕಾಚಾರ್ಯ ವೇಷಧಾರಿಯಾಗಿ ಗಮನ ಸೆಳೆದಳು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ