Not doing iftar party for politics- C.B. Askey

ರಾಜಕೀಯಕ್ಕಾಗಿ ಇಫ್ತಾರ್ ಕೂಟ ಮಾಡುತ್ತಿಲ್ಲ- ಸಿ.ಬಿ.ಅಸ್ಕಿ

ರಾಜಕೀಯಕ್ಕಾಗಿ ಇಫ್ತಾರ್ ಕೂಟ ಮಾಡುತ್ತಿಲ್ಲ- ಸಿ.ಬಿ.ಅಸ್ಕಿ

ನಾಲತವಾಡ : ನಾನು ಕಳೆದ ಹಲವು ವರ್ಷದಿಂದ ನಮ್ಮ ಫೌಂಡೇಶನ್‌ದಿಂದ ಇಫ್ತಾರ್ ಕೂಟಗಳನ್ನು ಮಾಡಿಕೊಂಡು ಬಂದಿದ್ದೇನೆ. ಈ ಸೇವೆ ಯಾವುದೇ ರಾಜಕೀಯಕ್ಕಾಗಿ ಅಲ್ಲ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ. ಬಿ. ಅಸ್ಕಿ ಹೇಳಿದರು.

ನಾಲತವಾಡದ ಅಂಜುಮನ್ ಇಸ್ಲಾಂ ಕಮೀಟಿ ಕಚೇರಿಯಲ್ಲಿ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಇಫ್ತಾರ್ ಕೂಟದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಾಳಿಕೋಟಿ, ಮುದ್ದೇಬಿಹಾಳ, ಕೊಣ್ಣೂರು ಹಾಗೂ ನಾಲತವಾಡದಲ್ಲಿ ಮುಸ್ಲಿಂ ಬಾಂಧವರು ಇಫ್ತಾರ್ ಕೂಟ ನಡೆಸುವುದಕ್ಕೆ ಸಹಕಾರ ನೀಡಿದ್ದಾರೆ. ನಮ್ಮ ಫೌಂಡೇಶನ್‌ದಿಂದ ಜನಸೇವೆ ನಿರಂತರವಾಗಿರುತ್ತದೆ. ಸಮಾಜದಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ ಸಾರುವುದಕ್ಕೆ ಈ ಇಫ್ತಾರ್ ಕೂಟಗಳನ್ನು ನಡೆಸುತ್ತಿದ್ದೇವೆ ಎಂದರು.

ಅಂಜುಮನ್ ಕಮೀಟಿ ಅಧ್ಯಕ್ಷ ಎಲ್. ಎಚ್. ಅವಟಿ ಮಾತನಾಡಿ, ಹಣ ಎಲ್ಲರ ಬಳಿ ಇದೆ. ಆದರೆ ದಾನ ಗುಣ ಎಲ್ಲರಲ್ಲಿ ಇರುವುದಿಲ್ಲ. ಕೋಮು ಸೌಹಾರ್ದತೆ, ಸಮಾಜ ಸೇವೆ, ದಲಿತರಿಗಾಗಿ ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ. ಬಿ. ಅಸ್ಕಿ ಸೇವೆ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.

ಮುದ್ದೇಬಿಹಾಳ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮೌಲಾಸಾಬ ರಕ್ಕಸಗಿ, ಮೌಲಾನಾ ಮಹ್ಮದ್‌ಇಸ್ಮಾಯಿಲ್ ಮುಲ್ಲಾ, ಮೌಲಾನಾ ಮಹ್ಮದಗೌಸ ಸಿಕ್ಕಲಗಾರ, ಊರಿನ ಹಿರಿಯರಾದ ಹುಸೇನಸಾಬ ಮೂಲಿಮನಿ, ಅಲ್ಲಾಭಕ್ಷ ಕುಳಗೇರಿ, ಭಾಷಾಸಾಬ ತೆಗ್ಗಿನಮನಿ, ಮಹೆಬೂಬ ಕುಳಗೇರಿ, ಇಬ್ರಾಹಿಂ ಮೂಲಿಮನಿ, ಹಣಮಂತ ಕುರಿ, ಶರಣಪ್ಪ ಸಜ್ಜನ ಹಾಗೂ ಅಸ್ಕಿ ಫೌಂಡೇಶನ್ ಬಳಗದ ಸದಸ್ಯರು ಇದ್ದರು.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ