BJP Rebels Basanagouda patil yatnal vs BY Vijayendra

ಹೈಕಮಾಂಡ್ ನಿರ್ಧಾರದ ವಿರುದ್ಧ ವ್ಯರ್ಘನಾಗಿ ಆಕ್ರೋಶ ಹೊರಹಾಕಿದ ಯತ್ನಾಳ

ಹೈಕಮಾಂಡ್ ನಿರ್ಧಾರದ ವಿರುದ್ಧ ವ್ಯರ್ಘನಾಗಿ ಆಕ್ರೋಶ ಹೊರಹಾಕಿದ ಯತ್ನಾಳ

ಬೆಂಗಳೂರು: ಪಕ್ಷದಿಂದ ಉಚ್ಚಾಟನೆಗೊಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮತ್ತೆ ಪಕ್ಷದ ವಿರುದ್ಧ ತಮ್ಮ ಟೀಕೆ ಮುಂದುವರಿಸಿದ್ದು, ತಮ್ಮನ್ನು ಉಚ್ಚಾಟನೆ ಮಾಡಿದ ಕ್ರಮವನ್ನು ಪ್ರಶ್ನಿಸಿದ್ದಾರೆ.

ಹೈಕಮಾಂಡ್ ನಿರ್ಧಾರದ ವಿರುದ್ಧ ವ್ಯರ್ಘನಾಗಿ ಆಕ್ರೋಶ ಹೊರಹಾಕಿದ್ದಾರೆ.

ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ ಎಂದಿದ್ದಾರೆ.

ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ ಎಂದು ಬೇಸರ ಹೋರಹಾಕಿದ್ದಾರೆ.

ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನಂತವರಿಗೆ ಉಚ್ಚಾಟನೆ ಮಾಡುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ ಎಂದು ದೂರಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕ ಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು ಯಾರ ‘ಅಡ್ಜಸ್ಟ್ಮೆಂಟ್ ರಾಜಕಾರಣದಿಂದ’ ಎಂದು ಪಕ್ಷದ ಪ್ರಮುಖರು ವಿಶ್ಲೇಷಿಸಲಿ ಎಂದು ನೋವು ತೊಡಿಕೊಂಡಿದ್ದಾರೆ.

ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ ವಿ.ಎಸ.ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು. ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾದರು. ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದು ಪಕ್ಷ ಮರೆಯಲಾಗದ ಮಾಣಿಕ್ಯ ಡಾ. ವಿ.ಎಸ್.ಆಚಾರ್ಯರು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ ಎಂದು ತಿವಿದಿದ್ದಾರೆ.

ಹಿಂದುತ್ವವಾದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ ‘ಪೂಜ್ಯ’ ರಿಂದಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮತ್ತೆ ಗುಟುರು ಹಾಕಿದ್ದಾರೆ.

ರಾಜ್ಯದಲ್ಲಿ ಪ್ರ ಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ, ವಾಲ್ಮೀಕಿ ಹಗರಣ, ದಲಿತರಿಗೆ SCSP/TSP ಅನುದಾನದ ದುರ್ಬಳಕೆಯನ್ನು ಖಂಡಿಸಿದ್ದು, ಹೋರಾಟ ರೂಪಿಸಿದ್ದು, ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆ.ಪಿ.ಸಿ ಅಧ್ಯಕ್ಷರಾದ ಶ್ರೀ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು ಎಂದು ನೆನಪು ಮಾಡಿಕೊಟ್ಟಿದ್ದಾರೆ.

ಪ್ರತಿ ಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದು ನಾವೇ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದು ನಾವೇ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ. ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ ‘ಅಪಥ್ಯ’ ವಾಗಿದೆ ಎಂದಿದ್ದಾರೆ.

ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ ಎಂದಿದ್ದಾರೆ.

Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮತ್ತೆ ಅವರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿ ಸ್ಪಷ್ಟವಾಗಿ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ರೆಬೆಲ್ ನಾಯಕ ಬಸನಗೌಡ ಪಾಟೀಲ ಯತ್ನಾಳ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ