ಬಲಕುಂದಿ ತಾಂಡಾ ಶಾಲೆಯಲ್ಲಿ ವ್ಯಸನಮುಕ್ತ ದಿನಾಚರಣೆ

ಬಲಕುಂದಿ ತಾಂಡಾ ಶಾಲೆಯಲ್ಲಿ ವ್ಯಸನಮುಕ್ತ ದಿನಾಚರಣೆ

ಇಳಕಲ್: ಮಹಾಂತ ಜೋಳಿಗೆಯ ಹರಿಕಾರರು, ಬಸವತತ್ವದ ದಂಡನಾಯಕರಾದ ಪರಮಪೂಜ್ಯ ವಿಜಯ ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಆಚರಿಸಲ್ಪಡುವ ವ್ಯಸನಮುಕ್ತ ದಿನಾಚರಣೆಯನ್ನು ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಬಲಕುಂದಿ ತಾಂಡಾ ಶಾಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ವಿಜಯ ಮಹಾಂತ ಶಿವಯೋಗಿಗಳ ವೇಷಭೂಷಣಗಳಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತಂದರು ಹಾಗೂ ವಿದ್ಯಾರ್ಥಿಗಳು ವ್ಯಸನದ ದುಷ್ಪರಿಣಾಮಗಳ ಬಗ್ಗೆ ಕಿರು ನಾಟಕ ಅಭಿನಯಿಸಿದರು.

ಇದೇ ಸಂದರ್ಭದಲ್ಲಿ ವ್ಯಸನಮುಕ್ತ ದಿನಾಚರಣೆ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿಪತ್ರ ವಿತರಿಸಲಾಯಿತು.

ಶಾಲೆಯ ಮುಖ್ಯಗುರುಗಳಾದ ಪರಶುರಾಮ ಪಮ್ಮಾರ ವ್ಯಸನಮುಕ್ತ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕರಾದ ಎಂ ಎಸ್ ಬೀಳಗಿ, ಎ ಡಿ ಬಾಗವಾನ, ಜಿ ಕೆ ಮಠ, ಆರ್ ಎಸ್ ಕೊಡಗಲಿ, ಎಂ ಎನ್ ಅರಳಿಕಟ್ಟಿ,ಎಂ ಪಿ ಚೇಗೂರ, ಎಸ್ ಎಲ್ ಜೋಗಿನ,ಪಿ ಎಸ್ ಹೊಸೂರ, ಎಸ್ ಎಂ ಮಲಗಿಹಾಳ, ಪಿ ಟಿ ಮೇಗಡಿ ಹಾಗೂ ಸಾಯಿರಾ ಹೆರಕಲ್ ಉಪಸ್ಥಿರಿದ್ದರು.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ