Panchmasali demand for return of expulsion of Yatnal

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು.

ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು, ಬಿಜೆಪಿಯಲ್ಲಿನ ಕುಟುಂಬ ರಾಜಕಾರಣದ ಬಗ್ಗೆ ಧ್ವನಿ ಎತ್ತಿದ್ದಕ್ಕೆ ಪಕ್ಷದಿಂದ ಉಚ್ಚಾಟಿಸುವ ನಿರ್ಧಾರ ಕೈಗೊಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಸಮಾಜದ ನಾಯಕನಿಗೆ ಅನ್ಯಾಯವಾದಾಗ ಅವರ ಪರ ಧ್ವನಿ ಎತ್ತುವುದು ನಮ್ಮ ಕರ್ತವ್ಯ. ಸಮಾಜದ ಮೀಸಲಾತಿ ಸಲುವಾಗಿಯೂ ಯತ್ನಾಳರು ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಉಚ್ಚಾಟಿಸುವ ಆದೇಶವನ್ನು ಬಿಜೆಪಿ ವರಿಷ್ಠರಾದ ಮೋದಿ, ಅಮೀತ ಷಾ, ಜೆ.ಪಿ.ನಡ್ಡಾ ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಏ.7 ರಂದು ಬೆಳಗ್ಗೆ 10 ಗಂಟೆಗೆ ಬನಶಂಕರಿ ದೇವಸ್ಥಾನದಿಂದ ಮುಖ್ಯರಸ್ತೆಯಲ್ಲಿ ಸಾಗಿ ಬಸವೇಶ್ವರ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಅಂಬೇಡ್ಕರ್ ವೃತ್ತದಿಂದ ರಾಣಿ ಚೆನ್ನಮ್ಮನವರ ವೃತ್ತದಲ್ಲಿ ಬಹಿರಂಗ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಪುರಸಭೆ ಸದಸ್ಯ ವೀರೇಶ ಹಡಲಗೇರಿ, ಮುಖಂಡ ಅರವಿಂದ ಕೊಪ್ಪ ಮಾತನಾಡಿ, ಪಂಚಮಸಾಲಿ ಸಮಾಜದ ಪರಮೋಚ್ಛ ನಾಯಕರಾಗಿರುವ ಯತ್ನಾಳರ ಉಚ್ಚಾಟನೆ ಹಿಂದೆ ಕುಟುಂಬ ರಾಜಕಾರಣ ಕೆಲಸ ಮಾಡಿದೆ. ಪಕ್ಷದ ವರಿಷ್ಠರಿಗೆ ಯತ್ನಾಳ ಪಕ್ಷಕ್ಕೆ ಅಗತ್ಯ ಎಂಬುದನ್ನು ಮನವರಿಕೆ ಮಾಡಿಕೊಡಲು ಹೋರಾಟ ಯಶಸ್ವಿಗೊಳಿಸಬೇಕು ಎಂದು ಸಮಾಜದ ಬಾಂಧವರಿಗೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಯುವ ಘಟಕದ ತಾಲ್ಲೂಕು ಅಧ್ಯಕ್ಷ ರವಿ ಎಸ್. ಕಮತ, ಮುಖಂಡರಾದ ಬಸಲಿಂಗಪ್ಪ ರಕ್ಕಸಗಿ, ಶರಣು ಸಾಲವಾಡಗಿ, ಅನಿಲ ಪಾಟೀಲ, ಮಹಾಂತೇಶ ನಿಡಗುಂದಿ ಮೊದಲಾದವರು ಇದ್ದರು.

ಯತ್ನಾಳ ಪರ ಗ್ಯಾರಂಟಿ ಸಮೀತಿ ಅಧ್ಯಕ್ಷರ ಬ್ಯಾಟಿಂಗ್

ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪರ ಬ್ಯಾಟಿಂಗ್ ಮಾಡಿ ಬಿಜೆಪಿ ವರಿಷ್ಠರು ಅವರನ್ನು ಮರಳಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದ್ದು ತೀವ್ರ ಚರ್ಚೆಗೆ ಕಾರಣವಾಯಿತು. ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಪಂಚಮಸಾಲಿ ಸಮಾಜದ ನಾಯಕರಾದ ಕಾಮರಾಜ ಬಿರಾದಾರ, ಅಮರೇಶ ಗೂಳಿ ಮೊದಲಾದವರು ಯತ್ನಾಳ ಪಂಚಮಸಾಲಿ ಸಮಾಜದ ಹೋರಾಟದಲ್ಲಿ ಭಾಗಿಯಾಗಿರುವ ಕಾರಣ ಸಮಾಜದ ವತಿಯಿಂದ ಅವರಿಗೆ ನೈತಿಕ ಬೆಂಬಲ ಸೂಚಿಸಿ ಈ ಹೋರಾಟ ಪಕ್ಷಾತೀತವಾಗಿ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.