Two injured, one in police custody: Fight on the road over a trivial matter..!

ಇಬ್ಬರಿಗೆ ಗಾಯ,ಒರ್ವ ಪೊಲೀಸ ವಶಕ್ಕೆ:ಕ್ಷುಲ್ಲಕ ವಿಷಯಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ..!

ಇಬ್ಬರಿಗೆ ಗಾಯ,ಒರ್ವ ಪೊಲೀಸ ವಶಕ್ಕೆ:ಕ್ಷುಲ್ಲಕ ವಿಷಯಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ..!

ಮುದ್ದೇಬಿಹಾಳ : ರಸ್ತೆಯಲ್ಲಿ ಬೈಕ್ ತಗುಲಿದ ವಿಚಾರಕ್ಕೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಇಬ್ಬರು ವ್ಯಕ್ತಿಗಳು ಮುಖ್ಯರಸ್ತೆಯಲ್ಲೇ ಹೊಡೆದಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ಸೋಮವಾರ ಸಾರ್ವಜನಿಕವಾಗಿ ನಡೆದಿದೆ.

ಪಟ್ಟಣದ ಐಶ್ವರ್ಯಾ ಹೊಟೇಲ್ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು ಬೈಕ್ ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಕೈಯ್ಯಲ್ಲಿದ್ದ ಬೈಕ್ ಚಾವಿಯಿಂದ ವ್ಯಕ್ತಿಯ ಕಿವಿಗೆ ಚುಚ್ಚಿದ್ದಾನೆ.

ಇದರಿಂದ ತೀವ್ರ ರಕ್ತಸ್ರಾವವಾಗಿದ್ದು ಹಾಕಿಕೊಂಡಿದ್ದ ಬಟ್ಟೆ ತುಂಬೆಲ್ಲಾ ರಕ್ತಸಿಕ್ತವಾಗಿತ್ತು. ಯುವಕನ ತಲೆಗೂ ಪೆಟ್ಟಾಗಿದ್ದು ಇಬ್ಬರು ವಾದವಿವಾದ ನಡೆಸುತ್ತಾ ಮುಖ್ಯರಸ್ತೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ್ದರು. ಸಾರ್ವಜನಿಕರು ತಿಳಿಹೇಳಿದರೂ ಜಟಾಪಟಿ ಮುಂದುವರೆಸಿದ್ದರು. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದೊಯ್ದಿದ್ದಾರೆ.

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಕುರಿತಂತೆ ಯಾವುದೇ ದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿಲ್ಲ. ಮುಖ್ಯರಸ್ತೆಯ ದೊಡ್ಡ ದೊಡ್ಡ ಅಂಗಡಿಗಳ ಮುಂದೆ ಬೈಕ್‌ಗಳನ್ನು ಮನಬಂದಂತೆ ನಿಲುಗಡೆ ಮಾಡುತ್ತಿರುವ ಕಾರಣ ಪಾದಚಾರಿಗಳು ಸಂಚರಿಸುವುದೂ ಕಷ್ಟಕರ ಎನ್ನುವಂತ ಪರಿಸ್ಥಿತಿ ನಿರ್ಮಾಣವಾಗಿದ್ದು ಪೊಲೀಸ್ ಇಲಾಖೆ ಇದಕ್ಕೆ ಪರಿಹಾರ ಕಂಡು ಹಿಡಿದು ಸಾರ್ವಜನಿಕರ ಸಂಚಾರವನ್ನು ಸುಗಮಗೊಳಿಸಬೇಕಿದೆ ಎಂದು ನಾಗರಿಕರು ಒತ್ತಾಯಿಸಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ