ಯುವತಿ ಬೆತ್ತಲೆಗೊಳಿಸಿ ಹಲ್ಲೆ: ಐವರು ಮಂಗಳಮುಖಿಯರ ಬಂಧನ

ಯುವತಿ ಬೆತ್ತಲೆಗೊಳಿಸಿ ಹಲ್ಲೆ: ಐವರು ಮಂಗಳಮುಖಿಯರ ಬಂಧನ

ವಿಜಯಪುರ: ನಗರದಲ್ಲಿ ಮಂಗಳಮುಖಿಯೊಬ್ಬರನ್ನು ಸಾರ್ವಜನಿಕರ ಎದುರಲ್ಲೇ ವಿವಸ್ತ್ರಗೊಳಿಸಿ, ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ, ಅಮಾನವೀಯವಾಗಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.


‘ಹಲ್ಲೆಗೊಳಗಾಗಿರುವ ಸಂತ್ರಸ್ತೆಯು ಮಂಗಳಮುಖಿಯಲ್ಲ, ಯುವತಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ತೃತೀಯಲಿಂಗಿಗಳನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದರು.

ತೃತೀಯ ಲಿಂಗಿಗಳಾದ ಕೊಪ್ಪಳ ಜಿಲ್ಲೆ ಕಾರಟಗಿ ತಾಲ್ಲೂಕಿನ ಬಸವಣ್ಣ ಕ್ಯಾಂಪಿನ ಜಿ.ಹುಲಗೆಮ್ಮ(26), ಮಹಾರಾಷ್ಟ್ರ ರಾಜ್ಯದ ಲಾತೂರು ಜಿಲ್ಲೆಯ ಸತಾಳ ಗ್ರಾಮದ ಕವಿತಾ(26), ಯಾದಗಿರಿ ಜಿಲ್ಲೆ ನಾರಾಯಣಪುರದ ಮಹಾನಮ್ಮ(48), ವಿಜಯಪುರ ಜಿಲ್ಲೆ ತಾಳಿಕೋಟೆ ತಾಲ್ಲೂಕು ಕೊಣ್ಣೂರಿನ ಅಶ್ವಿನಿ(23) ಹಾಗೂ ಯಾದಗಿರಿ ಜಿಲ್ಲೆ ಗದ್ದೆಮ್ಮಕಟ್ಟೆಯ ಬಸಮ್ಮ(28) ಎಂಬುವವರನ್ನು ಬಂಧಿಸಲಾಗಿದ್ದು, ಇನ್ನೊಬ್ಬ ತೃತೀಯ ಲಿಂಗಿ ಪರಾರಿಯಾಗಿರುವುದಾಗಿ ಅವರು ಹೇಳಿದರು.

ಬಂಧಿತ ಎಲ್ಲ ಆರೋಪಿಗಳು ಸದ್ಯ ಮಹಾರಾಷ್ಟ್ರದ ಪುಣೆಯಲ್ಲಿ ನೆಲೆಸಿದ್ದು, ಅಲ್ಲಿಂದ ಬಂದು ಈ ಕೃತ್ಯ ಎಸಗಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ವಿಜಯಪುರ ನಗರದ ಲಲಿತ್‌ ಮಹಲ್‌ ಹೋಟೆಲ್‌ ಎದುರು ಜೂನ್‌ 21ರಂದು ಪ್ರಕರಣ ನಡೆದಿತ್ತು. ಆದರೆ, ಈ ಬಗ್ಗೆ ಯಾರೂ ದೂರು ನೀಡಿರಲಿಲ್ಲ. ಪೊಲೀಸರ ಗಮನಕ್ಕೂ ಬಂದಿರಲಿಲ್ಲ ಎಂದರು.

ಜುಲೈ 31ರಂದು ಹಲ್ಲೆ ಪ್ರಕರಣದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ‍ವಿಷಯ ಗಮನಕ್ಕೆ ಬರುತ್ತಿದ್ದಂತೆ ಗೋಳಗುಮ್ಮಟ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡ ರಚಿಸಲಾಗಿತ್ತು. ಕೇವಲ 24 ತಾಸಿನೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಹಲ್ಲೆಗೊಳಗಾದ ಯುವತಿಯು ವಿಜಯಪುರ ಸಮೀಪದ ಅರಕೇರಿ ಗ್ರಾಮದವಳಾಗಿದ್ದು, ಪುಣೆಯಲ್ಲಿ ತೃತೀಯಲಿಂಗಿಗಳ ಜೊತೆಗೆ ಇದ್ದಳು. ಅವರ ನಡುವೆ ವೈಯಕ್ತಿಕ ಕಾರಣಕ್ಕೆ ಭಿನ್ನಾಭಿಪ್ರಾಯ ಉಂಟಾದ ಬಳಿಕ ಯುವತಿಯು ವಿಜಯಪುರಕ್ಕೆ ಮರಳಿದ್ದಾಳೆ. ಆರೋಪಿಗಳು ಹುಡುಕಿಕೊಂಡು ಬಂದು ಹಲ್ಲೆ ನಡೆಸಿ, ವಾಪಸ್‌ ಪುಣೆಗೆ ಪರಾರಿಯಾಗಿದ್ದರು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದರು.

ವ್ಯಾಪಕ ಖಂಡನೆ: ಯುವತಿಯನ್ನು ಬೆತ್ತಲೆಗೊಳಿಸಿ, ಅಮಾನವೀಯವಾಗಿ ಹಲ್ಲೆ ನಡೆಸಿರುವ ದೃಶ್ಯವನ್ನು ಕಂಡು ಸಾರ್ವಜನಿಕರು, ವಿವಿಧ ಸಂಘ,ಸಂಸ್ಥೆಗಳು, ರಾಜಕೀಯ ಪಕ್ಷಗಳ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ