Labor Minister Santosh Lad is helping sand tourists from Kashmir to the state

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ.

ಪಹಲ್ಗಾಮ್ ಗೆ ಬಂದಿರುವ ಲಾಡ್ ಅವರು, ಇಂದು ಬೆಳಗ್ಗೆಯಿಂದ ಸಂತ್ರಸ್ತ ಕನ್ನಡಿಗರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಮೃತ ಕನ್ನಡಿಗರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ಒದಗಿಸಿದ್ದಾರೆ.

ಕರ್ನಾಟಕಕ್ಕೆ ಮರಳುವ ಪ್ರವಾಸಿಗರಿಗೆ ವಿಶೇಷ ವಿಮಾನದ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದೆ.

ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಪರ್ಕ ಸಂಖ್ಯೆ ಸಂಗ್ರಹಿಸಿ ಗುರುವಾರ ಹೊರಡಲಿರುವ ವಿಮಾನಕ್ಕೆ ಸಜ್ಜಾಗಿ ಎಂದು ಲಾಡ್ ಅವರೇ ತಿಳಿಸುತ್ತಿದ್ದಾರೆ.

ಎಷ್ಟು ಪ್ರವಾಸಿಗರು ಇದ್ದೀರಿ? ಎಲ್ಲಿಯವರು ಎಂಬೆಲ್ಲ ವಿವರಗಳನ್ನು ಸಚಿವರು ಕಲೆ ಹಾಕಿ ರಾಜ್ಯಕ್ಕೆ ಮರಳಲು ಕೈ ಜೋಡಿಸಿದ್ದಾರೆ.

ಯಾವಾಗ ವಿಮಾನದ ಟಿಕೆಟ್ ಬುಕ್ ಮಾಡಿದ್ದೀರಿ. ಯಾವುದೇ ತೊಂದರೆ ಇಲ್ಲವೇ. ಸುರಕ್ಷಿತವಾಗಿ ಬನ್ನಿ. ನಿಮ್ಮ ನೆರವಿಗೆ ನಾವಿದ್ದೇವೆ ಎಂಬ ಭರವಸೆ ನೀಡಿದ್ದಾರೆ.

Latest News

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಮುದ್ದೇಬಿಹಾಳ : ಪ್ರಜಾನಾಡು ಡಿಜಿಟಲ್ ಸುದ್ದಿವಾಹಿನಿಯ ದಿನದರ್ಶಿಕೆ ಲೋಕಾರ್ಪಣೆ ಕಾರ್ಯಕ್ರಮ ಡಿ.22 ರಂದು ಸಂಜೆ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಮುದ್ದೇಬಿಹಾಳ : ಮಕ್ಕಳು ಹುಟ್ಟಿನಿಂದಲೇ ಅಂಗವೈಕಲ್ಯತೆ ಹೊಂದುವುದನ್ನು ತಪ್ಪಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ

T20 World Cup 2026 ಏಳು ಆಟಗಾರರು ಔಟ್!

T20 World Cup 2026 ಏಳು ಆಟಗಾರರು ಔಟ್!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

ಮೈಸೂರು: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಲ್ಲಿ ಸಂಭವಿಸಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ ಎಂಬುವರ ದಂಪತಿಗಳ ಪುತ್ರಿ ವೇದಾ(2) ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿದ್ದಾಳೆ. ತಾಯಿ ಸ್ನಾನ ಮಾಡಿಸೋದಕ್ಕೆ ಬಿಸಿ ನೀರು ತೋಡಿ, ತಣ್ಣೀರು ಬೆರೆಸೋದಕ್ಕೆ ತರಲು ಹೋಗಿದ್ದಾರೆ. ಈ ವೇಳೆ ವೇದಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗರಸಂಗಿ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಂಗವಾಗಿ ಶನಿವಾರ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು. ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, "ಪೋಲಿಯೋ ಮಾರಕ ರೋಗವಾಗಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದರು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಹಾಗೂ