Militant attack in Pahalgam: Labor Minister Santosh Lad brought 178 tourists from the state to safety

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಸಚಿವ ಲಾಡ್‌ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ

ಬೆಂಗಳೂರು, ಏಪ್ರಿಲ್‌ 24: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ಹಿನ್ನೆಲೆಯಲ್ಲಿ 178 ಕನ್ನಡಿಗರನ್ನು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಬೆಂಗಳೂರಿಗೆ ಸುರಕ್ಷಿತವಾಗಿ ಕರೆತಂದರು.

ಕಾಶ್ಮೀರದಲ್ಲಿ ನಡೆದ ದಾಳಿ ನಂತರ ರಾಜ್ಯ ಸರ್ಕಾರದ ಪರವಾಗಿ ಸಚಿವ ಲಾಡ್‌ ಅವರನ್ನು ಕನ್ನಡಿಗರ ರಕ್ಷಣಾ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳುಹಿಸಿದ್ದರು.

ಕಳೆದ ಎರಡು ದಿನಗಳಿಂದ ಅವಿರತವಾಗಿ, ಬಿಡುವಿಲ್ಲದೆ ಪಹಲ್ಗಾಂನಲ್ಲಿ ಸಚಿವ ಲಾಡ್‌ ಅವರು ಕನ್ನಡಿಗ ಪ್ರವಾಸಿಗರನ್ನು ಭೇಟ ಮಾಡಿ ಅವರಿಗೆ ರಾಜ್ಯಕ್ಕೆ ಮರಳಲು ಮಾಹಿತಿ ನೀಡಿ ವಿಮಾನ ನಿಲ್ದಾಣಕ್ಕೆ ಬರಲು ತಿಳಿಸಿದ್ದರು. ಇದೀಗ 178 ಕನ್ನಡಿಗ ಪ್ರವಾಸಿಗರು ಶ್ರೀನಗರ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಪಹಲ್ಗಾಂನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಹತ್ಯೆಯಾದ ಕನ್ನಡಿಗರ ಕುಟುಂಬಗಳನ್ನೂ ಭೇಟಿ ಮಾಡಿದ್ದ ಸಚಿವ ಲಾಡ್‌ ಅವರು ಸಾಂತ್ವನ ಹೇಳಿ ಧೈರ್ಯ ತುಂಬಿದ್ದರು.

ಬೇರೆ ಬೇರೆ ಸ್ಥಳಗಳಲ್ಲಿ ತಂಗಿದ್ದ ಪ್ರವಾಸಿಗರನ್ನು ಭೇಟಿ ಮಾಡಿ ತಾವು ಯಾವಾಗ ಕರ್ನಾಟಕಕ್ಕೆ ಮರಳಲು ವಿಮಾನದ ಟಿಕೆಟ್‌ ಗಳನ್ನು ಬುಕ್‌ ಮಾಡಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕಿದ್ದರು. ವಿಮಾನದ ಟಿಕೆಟ್‌ ಬುಕ್‌ ಮಾಡದವರಿಗೆ ವಿಶೇಷ ವಿಮಾನದ ವ್ಯವಸ್ಥೆ ಮಾಡಿ ಲಾಡ್‌ ಅವರು ಪ್ರವಾಸಿಗರೊಂದಿಗೆ ಬೆಂಗಳೂರಿಗೆ ಬಂದಿದ್ದಾರೆ.

ಸಚಿವ ಲಾಡ್‌ಗೆ ಅವರಿಗೆ ಕೃತಜ್ಞತೆ

ಕಾಶ್ಮೀರದಿಂದ ಬೆಂಗಳೂರಿಗೆ ಮರಳಲು ವ್ಯವಸ್ಥೆ ಮಾಡಿದ ಸಚಿವ ಸಂತೋಷ್‌ ಲಾಡ್‌ ಅವರಿಗೆ ಪ್ರವಾಸಿಗರು ಕೃತಜ್ಷತೆ ಸಲ್ಲಿಸಿದ್ದಾರೆ. ಊರಿಗೆ ಮರಳುವ ಆತಂಕ ಮತ್ತು ಭಯದಲ್ಲಿ ಇದ್ದವರಿಗೆ ದೇವರಂತೆ ಸಚಿವರು ಬಂದು ಇಲ್ಲಿಗೆ ಕರೆತಂದರು. ಇವರ ಸಹಾಯವನ್ನು ಎಂದೂ ಮರೆಯಲಾಗದು ಎಂದು ಪ್ರವಾಸಿಗರೊಬ್ಬರು ಹೇಳಿದ್ದಾರೆ.

ಎಲ್ಲಿ ಅವಘಡ ಸಂಭವಿಸಿದ್ದರೂ ಅಲ್ಲಿಗೆ ಲಾಡ್‌ ಭೇಟಿ

ಕರ್ನಾಟಕದ ಹೊರಗೆ ಯಾವುದೇ ರೀತಿಯ ಅವಘಡಗಳು ಸಂಭವಿಸಿದರೂ ಅಂತಹ ಸಂದರ್ಭದಲ್ಲಿ ಸಂತೋಷ್‌ ಲಾಡ್‌ ಅವರು ಭೇಟಿ ನೀಡಿ ಕನ್ನಡಿಗರ ರಕ್ಷಣಾ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ಕೆಲವು ವರ್ಷಗಳ ಹಿಂದೆ ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದಾಗ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರುವ ಜವಾಬ್ದಾರಿಯನ್ನು ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಲಾಡ್‌ ಅವರಿಗೆ ವಹಿಸಿದ್ದರು.

ಒಡಿಶಾದಲ್ಲಿ ಭಾರಿ ರೈಲು ದುರಂತ ನಡೆದಾಗಲೂ ಸಚಿವ ಲಾಡ್‌ ಅವರು ಕನ್ನಡಿಗರ ರಕ್ಷಣೆಗೆ ತೆರಳಿದ್ದರು. ಅದಾದ ನಂತರ ವಯನಾಡಿನಲ್ಲಿ ಉಂಟಾಗಿದ್ದ ಜಳಪ್ರಳಯದ ವೇಳೆ ಸ್ವತಃ ಲಾಡ್‌ ಅವರು ಹೋಗಿದ್ದರು. ಇದೀಗ ಪಹಲ್ಗಾಂಗೂ ಅವರು ಹೋಗಿ ಜನರನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ.

Latest News

ಕಷ್ಟಪಟ್ಟು ಓದಿದರೆ ಇಚ್ಛೆಯ ಗುರಿ ಸಾಧನೆ:ರಾಜ್ಯಕ್ಕೆ ಮೂರನೇ ಸ್ಥಾನ ಬಂದ ವಿದ್ಯಾರ್ಥಿಗೆ ಸನ್ಮಾನ

ಕಷ್ಟಪಟ್ಟು ಓದಿದರೆ ಇಚ್ಛೆಯ ಗುರಿ ಸಾಧನೆ:ರಾಜ್ಯಕ್ಕೆ ಮೂರನೇ ಸ್ಥಾನ ಬಂದ ವಿದ್ಯಾರ್ಥಿಗೆ ಸನ್ಮಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆ-1ರಲ್ಲಿ ಕನ್ನಡ ಮಾಧ್ಯಮದಲ್ಲಿ 623 ಅಂಕ ಪಡೆದಿರುವ ನಮ್ಮ ಪ್ರೌಢಶಾಲೆಯ

ಚೆನ್ನೈ ವಿರುದ್ಧ ರೋಚಕ ಜಯ ಸಾಧಿಸಿದ ಬೆಂಗಳೂರು

ಚೆನ್ನೈ ವಿರುದ್ಧ ರೋಚಕ ಜಯ ಸಾಧಿಸಿದ ಬೆಂಗಳೂರು

ಬೆಂಗಳೂರು: ಚೆನ್ನೈ ವಿರುದ್ಧ ತವರಿಂನಗಳದಲ್ಲಿ ನಡೆದ ಪಂದ್ಯದಲ್ಲಿ ಆರ್.ಸಿ.ಬಿ ರೋಚಕ 2 ರನ್ ಗಳ

ಎಸ್.ಎಸ್.ಎಲ್.ಸಿ ಪರೀಕ್ಷೆ: ಮೈಲೇಶ್ವರದ ಬ್ರಿಲಿಯಂಟ್ ಶಾಲೆಗೆ ರ‍್ಯಾಂಕ್

ಎಸ್.ಎಸ್.ಎಲ್.ಸಿ ಪರೀಕ್ಷೆ: ಮೈಲೇಶ್ವರದ ಬ್ರಿಲಿಯಂಟ್ ಶಾಲೆಗೆ ರ‍್ಯಾಂಕ್

ತಾಳಿಕೋಟಿ: ಪಟ್ಟಣದ ಮೈಲೇಶ್ವರ ಕ್ರಾಸ್‌ನಲ್ಲಿರುವ ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಮತ್ತು

ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣ ಹೊಸ ಟ್ವಿಸ್ಟ್

ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣ ಹೊಸ ಟ್ವಿಸ್ಟ್

ನಾರಾಯಣಪುರ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಂಡಬಾವಿ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣಕ್ಕೆ

ಪ್ಲೇ ಆಫ್ ರೇಸ್ ನಿಂದ ಅಧಿಕೃತವಾಗಿ ಹೊರಬಿದ್ದ ರಾಜಸ್ತಾನ್ ರಾಯಲ್ಸ್

ಪ್ಲೇ ಆಫ್ ರೇಸ್ ನಿಂದ ಅಧಿಕೃತವಾಗಿ ಹೊರಬಿದ್ದ ರಾಜಸ್ತಾನ್ ರಾಯಲ್ಸ್

ಜೈಪುರ್: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ 100 ರನ್ ಗಳ ಭಾರಿ ಅಂತರದಿಂದ ಸೋಲುವ ಮೂಲಕ ಪ್ಲೇ ಆಫ್ ರೇಸ್ ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಆಡಿರುವ 11 ಪಂದ್ಯಗಳ್ಳಲ್ಲಿ ರಾಜಸ್ತಾನ್ 3 ಪಂದ್ಯ ಗೆದ್ದಿದೆ. ಬಾಕಿ ಉಳಿದಿರುವ 3 ರಲ್ಲಿ ಮೂರು ಗೆದ್ದರು, 12 ಅಂಕ ಹೊಂದಲಿದೆ. ಆ ಕಾರಣದಿಂದಾಗಿ ಪ್ಲೇ ಆಫ್ ಗೇರುವ ರಾಜಸ್ತಾನ ಕನಸು ಕಮರಿ ಹೋಗಿದೆ. ಸತತ 6 ಪಂದ್ಯಗಳನ್ನು ಗೆಲ್ಲುವ ಮೂಲಕ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳೂರಿನ ಬಜಪೆ, ಕಿನ್ನಿಪದವು ಸಮೀಪ ಈ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ, ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂದು ಹೇಳಲಾಗಿದೆ. ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸುಹಾಸ್ ಶೆಟ್ಟಿಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೈದಿದ್ದಾರೆ. 2022ರ ಜುಲೈ 28 ರಂದು ಫಾಜಿಲ್ ಕೊಲೆ ನಡೆದಿತ್ತು. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ