Do not mix politics in the matter of terrorists: Dr. Gautam Chaudhary

ಉಗ್ರರ ವಿಷಯದಲ್ಲಿ ರಾಜಕೀಯ ಬೆರೆಸಬೇಡಿ : ಡಾ.ಗೌತಮ್ ಚೌಧರಿ

ಉಗ್ರರ ವಿಷಯದಲ್ಲಿ ರಾಜಕೀಯ ಬೆರೆಸಬೇಡಿ : ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕಾಶ್ಮೀರದ ಪಹೆಲ್ಗಾಮ್‌ದಲ್ಲಿ ದೇಶದ ಅಮಾಯಕ ಪ್ರಜೆಗಳನ್ನು ಬಲಿಪಡೆದಿರುವ ಉಗ್ರಗಾಮಿಗಳನ್ನು ನಿರ್ನಾಮ ಮಾಡುವ ವಿಷಯದಲ್ಲಿ ಯಾವುದೇ ರಾಜಕೀಯ ಬೆರೆಸಬಾರದು ಎಂದು ರಾಷ್ಟ್ರೀಯ ಮೀನುಗಾರರ ಸಂಘದ ಉಪಾಧ್ಯಕ್ಷ ಡಾ.ಗೌತಮ ಚೌಧರಿ ರಾಜಕೀಯ ಪಕ್ಷಗಳ ಮುಖಂಡರಿಗೆ ಸಲಹೆ ಮಾಡಿದ್ದಾರೆ.

ಮುದ್ದೇಬಿಹಾಳದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಶ್ಮೀರದಲ್ಲಿ ನಡೆದ ದಾಳಿಯನ್ನು ಖಂಡಿಸಿದರು.

ಪ್ರವಾಸಕ್ಕೆಂದು ತೆರಳಿದ್ದ ದೇಶವಾಸಿಗಳ ಮೇಲೆ ಮನಬಂದಂತೆ ಗುಂಡು ಹಾರಿಸಿ ಕೊಂದಿರುವ ದುಷ್ಟರನ್ನು ಸದೆ ಬಡೆಯುವುದಕ್ಕೆ ಕೇಂದ್ರ ಸರ್ಕಾರ, ಭಾರತೀಯ ಸೇನೆ ಕಾರ್ಯಪ್ರವೃತ್ತವಾಗಿದ್ದು ಈ ವಿಷಯದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಕ್ರೂರವಾಗಿ ಮಾನವೀತೆಯನ್ನೇ ಉಗ್ರರು ಕೊಂದಿದ್ದಾರೆ. ಇಂತಹ ಹೇಯ ಕೃತ್ಯ ಮಾಡಿದವರನ್ನು ಯಾವುದೇ ಜಾತಿ, ಸಮುದಾಯದವರು ಸಮರ್ಥಿಸಿಕೊಳ್ಳದೇ ಭಯೋತ್ಪಾದಕರನ್ನು ಹೊಡೆದೋಡಿಸಲು ಪಾಕಿಸ್ತಾನದ ಮೇಲೆ ಯುದ್ಧ ಮಾಡಿದರೂ ಸರಿ ಉಗ್ರರನ್ನು ಮಟ್ಟ ಹಾಕಬೇಕು. ದೇಶಕ್ಕಾಗಿ ನಾವು ತ್ಯಾಗ ಮಾಡಲು ಸಿದ್ಧರಿರಬೇಕು. ದೇಶದ್ರೋಹಿಗಳು ಯಾವುದೇ ಸಮುದಾಯದಲ್ಲಿದ್ದರೂ ಅವರನ್ನು ನಿರ್ನಾಮ ಮಾಡಬೇಕು ಎಂದು ತಿಳಿಸಿದರು.

ದೇಶದ ಭದ್ರತೆ ವಿಷಯ ಬಂದಾಗ ನಿಷ್ಕಾಳಜಿಯಿಂದ ಮಾತನಾಡದೇ ಎಲ್ಲರೂ ಒಗ್ಗಟ್ಟಾಗಿ ದೇಶದ ಸರ್ಕಾರವನ್ನು ಬಲಪಡಿಸಬೇಕು. ಇಂತಹ ಹೇಯ ಕೃತ್ಯಗಳನ್ನು ಮಾಡುವವರನ್ನು ನಿರ್ನಾಮ ಮಾಡಲು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸುವುದಾಗಿ ತಿಳಿಸಿದರು.

ಕಾಶ್ಮೀರದಲ್ಲಿರುವ ರಾಜ್ಯದ ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದಿರುವ ರಾಜ್ಯ ಸರ್ಕಾರಕ್ಕೂ ಅಭಿನಂದಿಸುವುದಾಗಿ ಡಾ.ಚೌಧರಿ ತಿಳಿಸಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ