Protest in front of Narayanpura Police Station over the dead body of a person

ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಪ್ರತಿಭಟನೆ

ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಪ್ರತಿಭಟನೆ

ಹುಣಸಗಿ: ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಜೋಗಂಡಬಾವಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಜೋಗಂಡಬಾವಿ ಗ್ರಾಮದ ಗೌಡಪ್ಪ ಚವಾನಬಾವಿ ಎಂಬ ವ್ಯಕ್ತಿ ತನ್ನ ಹೊಲದ ಪಕ್ಕದ ಜಮೀನಿನವರೊಂದಿಗೆ ಬದುವಿನ ವಿಚಾರಕ್ಕೆ ಅನೇಕ ಬಾರಿ ಗಲಾಟೆ ನಡೆದಿದೆ, ಗಲಾಟೆಯ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲು ಬಂದರೆ ಪೊಲೀಸರು ಸರಿಯಾಗಿ ಸ್ಪಂದಿಸಿಲ್ಲ ಎಂದು ಮೃತ ಗೌಡಪ್ಪನ ಪತ್ನಿ ಪೊಲೀಸರ ವಿರುದ್ಧ ಆರೋಪಿಸುತ್ತಿದ್ದಾರೆ.

ಗಲಾಟೆಯಿಂದ ನನ್ನ ಗಂಡ ಸಾವನ್ನಪ್ಪಿದ್ದಾನೆ ಆತನ ಸಾವಿಗೆ ಪೊಲೀಸರು ಕಾರಣವಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮೃತ ಗೌಡಪ್ಪನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಮೃತನ ಸಂಬಂಧಿಕರು ಪೋಲಿಸ್ ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಮೃತನ ಪತ್ನಿ ಆರೋಪಿಸಿರುವಂತೆ ಈ ಪ್ರಕರಣದಲ್ಲಿ ಪೊಲೀಸರ ವೈಫಲ್ಯವಿದೆಯಾ ಅಥವಾ ಈತನ ಸಾವಿನ ಹಿಂದೆ ಏನಾದರೂ ಬೇರೆ ಕಾರಣವಿದೆಯಾ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕು.

ಈ ಪ್ರಕರಣದ ಕುರಿತು ಪ್ರತಿಭಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಕರ್ತರು ಇದೇ ತಿಂಗಳು 20 ರಂದು, ಅವರ ಸ್ವಂತ ಹೊಲದಲ್ಲಿ ಬಿದ್ದಿದರು ಅದನ್ನು ನೋಡಿದ ಅವರ ಧರ್ಮಪತ್ನಿ ಕೊಡಲೇ ಅವರ ಸಂಬಂಧಿಕರಿಗೆ ವಿಷಯ ತಿಳಿಸಿ ಅವರನ್ನು ಬಾಗಲಕೋಟದ ಕೇರೂಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅವಾಗ ಅಲ್ಲಿಯೇ ಎಂ.ಎಲ್.ಸಿ. ಮಾಡಿಸಿದರೆ ಅವಾಗ ನಮ್ಮ ಗಮನಕ್ಕೆ ಬಂದಿರೋದು ಅದನ್ನ ತಿಳಿದ ತಕ್ಷಣವೇ ನಮ್ಮ ಸಿ.ಪಿ.ಐ. ರವಿಕುಮಾರ್ ಅವರು ಖುದ್ದಾಗಿ ಧಾವಿಸಿ ಅಲ್ಲಿಯ ವೈದ್ಯರೊಂದಿಗೆ ಸಮಾಲೋಚನೆ ಮಾಡಿ ಪೋಸ್ಟಮಾಟಮ್ ಮಾಡಿಸಿದರು. ಸಾವಿಗೆ ಕಾರಣ ಇಂಟರ್ನಲ್ ಬಿಲ್ಡಿಂಗ್ ನಿಂದ ಸಾವನ್ನು ಅಪ್ಪಿದ್ದಾರೆ. ಪೋಸ್ಟ್ ಮಾರ್ಟಮ್ ರಿಪೋರ್ಟ್ ಬಂದಿಲ್ಲ, ಬಂದ ತಕ್ಷಣ ಮುಂದಿನ ಕ್ರಮ ತಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.

ಮೃತವ್ಯಕ್ತಿ ಗೌಡಪ್ಪ (37) ವ್ಯಕ್ತಿಯಾಗಿದ್ದು ಇವರು ಜೋಗಂಡಭಾವಿ ನಿವಾಸಿ, ಇವರಿಗೆ 5 ಜನ ಮಕ್ಕಳು 3 ಹೆಣ್ಣು 2 ಗಂಡು ಮಕ್ಕಳಿದ್ದಾರೆ.

2024 ರಲ್ಲಿ ಇವರ ಕೇಸ್ ಹಾಗೂ ಕೊರ್ಟ್ ಕೇಸ್ ನಾರಾಯಣಪುರ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ. ಹಾಗೆ ಎಂ.ಎಲ್.ಸಿ ಮೆರೆಗೆ 21ಕ್ಕೆ ಸಹ, 105 ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಎಂದು ತಿಳಿಸಿದರು.

ವರದಿ : ಶಿವು ರಾಠೋಡ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ