Free training for Asha workers: Leave superstitions about diseases - Dr. Parasurama Vadara

ಆಶಾ ಕಾರ್ಯಕರ್ತೆಯರಿಗೆ ಉಚಿತ ತರಬೇತಿ :ಕಾಯಿಲೆಗಳ ಬಗ್ಗೆ ಹೊಂದಿರುವ ಮೂಢನಂಬಿಕೆ ತೊರೆಯಿರಿ – ಡಾ. ಪರಶುರಾಮ ವಡ್ಡರ

ಆಶಾ ಕಾರ್ಯಕರ್ತೆಯರಿಗೆ ಉಚಿತ ತರಬೇತಿ :ಕಾಯಿಲೆಗಳ ಬಗ್ಗೆ ಹೊಂದಿರುವ ಮೂಢನಂಬಿಕೆ ತೊರೆಯಿರಿ – ಡಾ. ಪರಶುರಾಮ ವಡ್ಡರ

ಮುದ್ದೇಬಿಹಾಳ : ಕಾಮಣಿ(ಕಾಮಾಲೆ) ರೋಗದ ಬಗ್ಗೆ ಗ್ರಾಮೀಣ ಪ್ರದೇಶದ ಜನರು ಹೊಂದಿರುವ ಮೂಢನಂಬಿಕೆಯನ್ನು ಬಿಟ್ಟು ವೈದ್ಯಕೀಯ ಉಪಚಾರವನ್ನು ಪಡೆದುಕೊಂಡರೆ ರೋಗಪೀಡಿತ ಮಕ್ಕಳನ್ನು ಬೇಗನೇ ಆರೋಗ್ಯವಂತರನ್ನಾಗಿಸಲು ಸಾಧ್ಯವಿದೆ ಎಂದು ಚಿಕ್ಕಮಕ್ಕಳ ವೈದ್ಯ ಡಾ.ಪರಶುರಾಮ ವಡ್ಡರ ಹೇಳಿದರು.

ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ಮದರಿಯ ಚೈತ್ರಾ ಆರೋಗ್ಯ ಮತ್ತು ಶೈಕ್ಷಣಿಕ ಸೇವಾ ಟ್ರಸ್ಟ್ ನಿಂದ ಆಯೋಜಿಸಿದ್ದ ಆಶಾ ಕಾರ್ಯಕರ್ತೆಯರಿಗೆ ಉಚಿತ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳಿಗೆ ಹೈಪಟೈಸಟ್ ಕಾಯಿಲೆ ಬಂದಾಗ ತಕ್ಷಣ ವೈದ್ಯರಲ್ಲಿ ತೋರಿಸಬೇಕು. ಗಿಡಮೂಲಿಕೆಯಿಂದ ರೋಗ ವಾಸಿಯಾಗುತ್ತದೆ ಎಂಬ ನಂಬಿಕೆಯನ್ನು ನಾವು ಅಲ್ಲಗಳೆಯುವುದಿಲ್ಲ. ಆದರೆ, ತ್ವರಿತವಾಗಿ ಮಗುವಿನ ಜೀವಕ್ಕೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕಾದರೆ ವೈದ್ಯರಲ್ಲಿ ತೋರಿಸುವುದು ಉತ್ತಮ ಎಂದು ಸಲಹೆ ನೀಡಿದರು.

ತಾಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ತಂಗಡಗಿ ಮಾತನಾಡಿ, ನಮ್ಮ ಭಾಗದಲ್ಲಿ ಚಿಕ್ಕಮಕ್ಕಳು ಅನಾರೋಗ್ಯಕ್ಕೀಡಾದರೆ ವಿಜಯಪುರ ಇಲ್ಲವೇ ಬಾಗಲಕೋಟೆಗೆ ತೆರಳಬೇಕಿತ್ತು. ಆ ಸಮಸ್ಯೆಯನ್ನು ನೀಗಿಸಿದ ಕೆಲಸವನ್ನು ಯಮನಪ್ಪ ವಡ್ಡರ ಕುಟುಂಬದವರು ಮಾಡಿದ್ದಾರೆ. ಉತ್ಸಾಹಿ ವೈದ್ಯ ಡಾ. ಪರಶುರಾಮ ಅವರು ಈ ಭಾಗದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿ, ಆಶಾ ಕಾರ್ಯಕರ್ತೆಯರ ಕಾರ್ಯ ಮಹತ್ವದ್ದಾಗಿದ್ದು ತಾಯಂದಿರ ಆರೈಕೆ, ಪೋಷಣೆ ಕುರಿತಾದ ಕಾರ್ಯಗಳಿಂದ ಮನೆ ಮಾತಾಗಿದ್ದಾರೆ. ಅವರಿಗೆ ಸರ್ಕಾರದಿಂದ ಇನ್ನಷ್ಟು ಸ್ಪಂದನೆ ಅಗತ್ಯವಾಗಿದೆ ಎಂದರು.

ವೈದ್ಯೆ ಡಾ. ನಿಸರ್ಗ ಕೊಟಮುಚಗಿ, ದಲಿತ ಮುಖಂಡ ಹರೀಶ ನಾಟೀಕಾರ, ಬಿಜೆಪಿ ಮುಖಂಡ ಪ್ರಭು ಕಡಿ, ಕುಮಾರ ವಡ್ಡರ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಯಮನಪ್ಪ ವಡ್ಡರ ಅಧ್ಯಕ್ಷತೆ ವಹಿಸಿದ್ದರು. ಭೋವಿ ವಡ್ಡರ ಸಮಾಜದ ಮುಖಂಡ ಪರಶುರಾಮ ನಾಲತವಾಡ ಆಸ್ಪತ್ರೆಯ ಸಿಬ್ಬಂದಿ ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ