Today is the grand chariot festival of Sri Siddalingeshwar Maharaja

ಇಂದು ಶ್ರೀ ಸಿದ್ದಲಿಂಗೇಶ್ವರ ಮಹಾರಾಜರ ಭವ್ಯ ರಥೋತ್ಸವ

ಇಂದು ಶ್ರೀ ಸಿದ್ದಲಿಂಗೇಶ್ವರ ಮಹಾರಾಜರ ಭವ್ಯ ರಥೋತ್ಸವ

ಚಿಕ್ಕಪಡಸಲಗಿ: ಗ್ರಾಮದಲ್ಲಿಂದು ಶ್ರೀ ವೃಷಭಲಿಂಗೇಶ್ವರ ಶಿವಯೋಗಿಗಳು ಬಂತನಾಳ, ಲಚ್ಯಾಣದ ಶ್ರೀ ಕೈವಲ್ಯಧಾಮದ ಜದ್ಗುರು ಶ್ರೀ ಸಿದ್ದಲಿಂಗೇಶ್ವರ ಮಹಾರಾಜರ ಕೃಪಾಶಿರ್ವಾದದಿಂದ, ಹಳಿಂಗಳಿಯ ಶ್ರೀ ಸಿದ್ದಲಿಂಗೇಶ್ವರ ಕಮರಿಮಠದ ಪೀಠಾಧ್ಯಕ್ಷರಾದ ಪೂಜ್ಯ ಸದ್ಗುರು ಶ್ರೀ ಶಿವಾನಂದ ಮಹಾಸ್ವಾಮಿಗಳು ಕಮರಿಮಠ, ಹಳಿಂಗಳಿ, ಚಿಕ್ಕಪಡಸಲಗಿ ಇವರ ನೇತೃತ್ವದಲ್ಲಿ ಸಕಲ ಕಾರ್ಯಕ್ರಮಗಳು ಜರುಗುವವು.

ಶ್ರೀ ಸದ್ಗುರು ಶರಣಬಸವೇಶ್ವರ ಮಹಾರಾಜರ ಜಯಂತ್ಯೋತ್ಸವ ನಿಮಿತ್ಯ ಇಂದು ಮುಂಜಾನೆ ಬ್ರಾಹ್ಮೀ ಮಹೂರ್ತದಲ್ಲಿ ಹಳಿಂಗಳಿಯ ಪೂಜ್ಯ ಮಾತೋಶ್ರೀ ದ್ರಾಕ್ಷಾಯಿಣಿ ಅಮ್ಮನವರು ಪತ್ರಿವನಮಠ ಹೂವಿನಹಿಪ್ಪರಗಿ ಇವರಿಂದ 12 ಜ್ಯೋತಿಲಿಂಗಗಳ ರುದ್ರಾಭಿಷೇಕ, ಶ್ರೀ ಸಿದ್ದಲಿಂಗೇಶ್ವರ ಮತ್ತು ಶ್ರೀ ಶರಣಬಸವೇಶ್ವರರ ಲಿಂಗಾಭಿಷೇಕ ಜರುಗುವುದು, ತದನಂತರ ಕರಡಿ ಮಜಲು, ಡೊಳ್ಳಿನ ಮೇಳ, ಚೀನಿಕೋಲ ಮೇಳ, ಕುಂಭ, ಆರತಿಗಳೊಂದಿಗೆ ಶ್ರೀ ಸಿದ್ದಲಿಂಗೇಸ್ವರ ಮಹಾರಾಜರ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗುವುದು, ಮುಂಜಾನೆ11 ಗಂಟೆಗೆ ಶ್ರೀ ಸದ್ಗುರು ಶರಣ ಬಸವೇಶ್ವರ ಮಹಾರಾಜರ ತೊಟ್ಟಿಲು ತೂಗುವ (ನಾಮಕರಣ) ಕಾರ್ಯಕ್ರಮ, ನಂತರ ಅನ್ನಸಂತರ್ಪಣೆ, ಹಾಗೂ ಸಾಯಂಕಾಲ 5 ಗಂಟೆಗೆ ಶ್ರೀ ಶರಣ ಬಸವೇಶ್ವರ ಮಹಾರಾಜರ ಭವ್ಯ ರಥೋತ್ಸವ ಜರುಗಲಿದೆ ಎಂದು ಜಾತ್ರಾ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ