ತಮಿಳು OK.. ಕನ್ನಡಕ್ಕಿಲ್ಲ ಅವಕಾಶ! ಕನ್ನಡಿಗನೇ ಕೇಂದ್ರ ಸಚಿವರಾಗಿರುವ ರೈಲ್ವೆ ಇಲಾಖೆಯಿಂದಲೇ ಈ ಅನ್ಯಾಯ!

ತಮಿಳು OK.. ಕನ್ನಡಕ್ಕಿಲ್ಲ ಅವಕಾಶ! ಕನ್ನಡಿಗನೇ ಕೇಂದ್ರ ಸಚಿವರಾಗಿರುವ ರೈಲ್ವೆ ಇಲಾಖೆಯಿಂದಲೇ ಈ ಅನ್ಯಾಯ!

ಬೆಂಗಳೂರು: ರೈಲ್ವೆ ಇಲಾಖೆಯ ರಾಜ್ಯ ಖಾತೆಯ ಕೇಂದ್ರ ಸಚಿವರಾಗಿ ಕನ್ನಡಿಗರಾದ ವಿ. ಸೋಮಣ್ಣ ಅವರು ಇದ್ದರೂ ಇಲಾಖೆ ನಡೆಸಲು ಮುಂದಾಗಿರುವ ಪರೀಕ್ಷೆಯಲ್ಲಿ ಕನ್ನಡಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಏತನ್ಮಧ್ಯೆ, ತಮಿಳರಿಗೆ ತಮಿಳಿನಲ್ಲೇ ಪರೀಕ್ಷೆ ಬರಯುವ ಅವಕಾಶ ನೀಡಿ, ಕನ್ನಡಿಗರಿಗೆ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಬರೆಯುವಂತೆ ಸೂಚಿಸಿರುವುದು ಇಲಾಖೆಯು ಕನ್ನಡಿಗರಿಗೆ ಮಾಡಿದ ಮಹಾ ಅನ್ಯಾಯವಾಗಿದೆ.

ಹೌದು, ಬಡ್ತಿಗಾಗಿ ಕನ್ನಡದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ರೈಲ್ವೆ ಉದ್ಯೋಗಿಗಳಿಗೆ ನೈಋತ್ಯ ರೈಲ್ವೆ ಮತ್ತೆ ಈ ಶಾಕ್ ಕೊಟ್ಟಿದೆ. ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡಿದ್ದ ಇಲಾಖೆ ಇದೀಗ ಹಾಲ್ ಟಿಕೆಟ್‌ನಲ್ಲಿ ಕನ್ನಡಕ್ಕೆ ಕೊಕ್ ನೀಡಿ ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆವ ಆಯ್ಕೆ ಕೊಟ್ಟಿದೆ. ಇದರಿಂದ ಕನ್ನಡಿಗ ಅಭ್ಯರ್ಥಿಗಳಿಗೆ ಸಂಕಷ್ಟ ಎದುರಾಗಿದೆ.

ನೈಋತ್ಯ ರೈಲ್ವೆಯು ಸಹಾಯಕ ಲೋಕೋಪೈಲಟ್ ಹುದ್ದೆಗಳಿಗೆ ಮೇ ತಿಂಗಳಲ್ಲಿ ಸಾಮಾನ್ಯ ವಿಭಾಗದ ಸ್ಪರ್ಧಾತ್ಮಕ ಪಚ್ಚಯ (ಜೆಡಿಸಿಇ) ಸುತ್ತೋಲೆ ಹೊರಡಿಸಿತ್ತು. ಹೀಗಾಗಿ, ಕನ್ನಡಿಗ ಅಭ್ಯರ್ಥಿಗಳು ಪರೀಕ್ಷಾ ಸಿದ್ಧತೆ ಕೈಗೊಂಡಿದ್ದರು.

ಆಗಸ್ಟ್ 3ಕ್ಕೆ ಈ ಪರೀಕ್ಷೆಯಿದೆ. ಆದರೆ, ಈ ನಡುವೆ ಪರೀಕ್ಷಾರ್ಥಿಗಳಿಗೆ ನೀಡಲಾದ ಹಾಲ್ ಟಿಕೆಟ್‌ನಲ್ಲಿ ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆವಂತೆ ಆಯ್ಕೆ ನೀಡಲಾಗಿದೆ. ಹುಬ್ಬಳ್ಳಿ ವಿಭಾಗದಲ್ಲಿ 521, ಮೈಸೂರು 130, ಬೆಂಗಳೂರು ವಿಭಾಗದಲ್ಲಿ 278 ಹುದ್ದೆಗಳಿಗೆ ಈ ಪರೀಕ್ಷೆ ನಡೆಯಲಿದೆ. ಎರಡು ತಿಂಗಳಿಂದ ಪರೀಕ್ಷೆ ಸಿದ್ಧತೆ ನಡೆಸಿದ್ದ ಕನ್ನಡಿಗರು ಇದೀಗ ಮಾತೃಭಾಷೆಯಲ್ಲಿ ಪರೀಕ್ಷೆ ಬರೆವ ಆಯ್ಕೆ ಕಳೆದುಕೊಂಡು ತಲೆ ಮೇಲೆ ಕೈ ಹೊತ್ತಿದ್ದಾರೆ.

ಈ ಹಿಂದೆ ನಡೆದ ಜಿಡಿಸಿಇ ಪರೀಕ್ಷೆಗಳಲ್ಲಿ ಕನ್ನಡದ ಅವಕಾಶ ನೀಡಿದ್ದ ಇಲಾಖೆ ಈ ಬಾರಿ ಯಾಕೆ ನೀಡುತ್ತಿಲ್ಲ ಎಂದು ನೌಕರರು ಪ್ರಶ್ನಿಸಿದ್ದಾರೆ.

ತಮಿಳಲ್ಲಿದೆ, ಕನ್ನಡದಲ್ಲೇಕಿಲ್ಲ?: ದಕ್ಷಿಣ ರೈಲ್ವೆಯು ತಮಿಳುನಾಡಿನಲ್ಲಿ 2017-18 ರಿಂದಲೇ ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನುತಮಿಳಿನಲ್ಲಿ ಬರೆವ ಆಯ್ಕೆಯನ್ನು ನೀಡಿದೆ. ಪ್ರತಿ ವರ್ಷವೂ ಸಾವಿರಾರು ಬಡ್ಡಿ ಪರೀಕ್ಷೆಗಳು ಆ ರಾಜ್ಯದ ಅಧಿಕೃತ ಭಾಷೆಯಲ್ಲಿ ನಡೆಯುತ್ತಿದೆ. ಆದರೆ, ಕರ್ನಾಟಕದಲ್ಲಿ ನೈಋತ್ಯ ರೈಲ್ವೆಯಿಂದಇದಿನ್ನೂ ಜಾರಿಯಾಗಿಲ್ಲ. ಕನ್ನಡಿಗರು ಹಿಂದಿ/ ಇಂಗ್ಲಿಷ್‌ನಲ್ಲೇ ಪರೀಕ್ಷೆ ಬರೆವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದಲೂ ರಾಜ್ಯದವರು ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ಕೇಳುತ್ತಿದ್ದರೂ ಇನ್ನೂ ಬೇಡಿಕೆ ಈಡೇರಿಲ್ಲ. ‘ನಾವು ಕನ್ನಡದಲ್ಲೇ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದೆವು. ಆದರೆ, ಹಾಲ್ ಟಿಕೆಟ್‌ನಲ್ಲಿ ಹಿಂದಿ/ಇಂಗ್ಲಿಷ್‌ಗೆ ಮಾತ್ರ ಅವಕಾಶ ನೀಡಿರುವ ಕಾರಣ ಸಮಸ್ಯೆಯಾಗಿದೆ. ಇಲಾಖೆ ಪರೀಕ್ಷೆ ಮುಂದೂಡಬೇಕು. ಜೊತೆಗೆ ಕನ್ನಡದ ಆಯ್ಕೆ ನೀಡಬೇಕು’ ಎಂದು ಹೆಸರು ಹೇಳಲಿಚ್ಛಿಸದ ಅಭ್ಯರ್ಥಿ ಹೇಳಿದರು.

ಇಂಗ್ಲಿಷ್ ಜ್ಞಾನಕ್ಕೆ ಪ್ರತ್ಯೇಕ ಪರೀಕ್ಷೆ: ರೈಲ್ವೆ ಮಂಡಳಿ ಪ್ರಕಾರ ಪರೀಕ್ಷೆಯಲ್ಲಿ ಇಂಗ್ಲಿಷ್ ಬದಲಿಗೆ ಪ್ರಾದೇಶಿಕ ಭಾಷೆಯ ಬಳಕೆಗೆ ಅನುಮತಿಸಬಹುದು.

ಏಕಾಏಕಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಕೊಕ್ ನೀಡಿರುವ ಬಗ್ಗೆ ನೌಕರರ ಸಂಘದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಆ.3ರ ಪರೀಕ್ಷೆಗಳನ್ನೇ ಮುಂದೂಡಲು ಚಿಂತನೆ ನಡೆಸಿದೆ. ಬಳಿಕ ಕನ್ನಡದಲ್ಲಿ ಪ್ರಶ್ನೆಪತ್ರಿಕೆ ನೀಡುವ ಅವಕಾಶ ನೀಡಬೇಕೆ, ಬೇಡವೆ ಎಂಬ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ